ರಾಯಬಾಗ ಶಾಸಕ ಡಿ.ಎಂ.ಐಹೊಳೆಗೆ ಕೊರೋನ ದೃಢ
ಬೆಳಗಾವಿ, ಸೆ.21: ಬೆಳಗಾವಿ ಜಿಲ್ಲೆಯ ರಾಯಬಾಗ ಕ್ಷೇತ್ರದ ಶಾಸಕ ಡಿ.ಎಂ.ಐಹೊಳೆ ಅವರಿಗೆ ಸೋಮವಾರ ಕೊರೋನ ವೈರಸ್ ಸೋಂಕು ದೃಢಪಟ್ಟಿದೆ.
ಈ ಕುರಿತು ತಮ್ಮ ಫೇಸ್ಬುಕ್ನಲ್ಲಿ ಬರೆದುಕೊಂಡಿದ್ದಾರೆ. ವಿಧಾನಮಂಡಲ ಅಧಿವೇಶನ ಪ್ರಾರಂಭವಾಗುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಕೊರೋನ ಪರೀಕ್ಷೆಗೆ ಒಳಪಟ್ಟಿದ್ದೆ. ಆಗ ನನಗೆ ಕೊರೋನ ಇರುವ ಸಂಗತಿ ತಿಳಿದು ಬಂದಿದೆ.
ಆದರೆ, ನನಗೆ ಯಾವುದೇ ರೋಗದ ಲಕ್ಷಣಗಳಿಲ್ಲ. ಆರೋಗ್ಯವಾಗಿದ್ದೇನೆ. ಬೆಂಗಳೂರಿನ ಮನೆಯಲ್ಲಿ ಕ್ವಾರಂಟೈನ್ ಆಗಿದ್ದು, ಇತ್ತೀಚೆಗೆ ನನ್ನ ನೇರ ಸಂಪರ್ಕಕ್ಕೆ ಬಂದವರು ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಯಾವುದೇ ಅಡಚಣೆ ಉಂಟಾಗದಂತೆ ನಗರದಿಂದಲೇ ನಿಗಾ ವಹಿಸುತ್ತೇನೆ ಎಂದು ತಿಳಿಸಿದ್ದಾರೆ.
Next Story