ಮುಂಬೈನಲ್ಲಿ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಮುಂಬೈ, ಸೆ.23: ಮುಂಬೈನಲ್ಲಿ ರಾತ್ರಿ ಇಡೀ ಸುರಿದ ಭಾರೀ ಮಳೆಗೆ ನಗರದ ಹಲವುಭಾಗಳಲ್ಲಿ ಜಲಾವೃತವಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ತಗ್ಗು ಪ್ರದೇಶಗಳಲ್ಲಿ ನೆರೆ ಪರಿಸ್ಥಿತಿ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಪಶ್ಚಿಮ ಉಪನಗರದಲ್ಲಿ ಸುಮಾರು 150 ಎಂಎಂನಿಂದ 200 ಎಂಎಂ ಮಳೆ ಸುರಿದಿದೆ. ಮುಂದಿನ 24 ಗಂಟೆಗಳಲ್ಲಿ ಮತ್ತಷ್ಟು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಳಗ್ಗೆ ಕೆಲಸಕ್ಕೆ ಹೋಗುವವರು ರಸ್ತೆಯಲ್ಲಿ ಮೊಣಕಾಲಿನ ತನಕ ತುಂಬಿದ್ದ ನೀರಿನಲ್ಲಿ ನಡೆದುಕೊಂಡು ಹೋಗುತ್ತಿದ್ದ ದೃಶ್ಯಎಲ್ಲೆಡೆ ಕಂಡು ಬಂದಿದೆ. ಅಲ್ಲಲ್ಲಿ ರೈಲ್ವೆ ಹಳಿಗಳಲ್ಲಿ ನೀರು ತುಂಬಿಕೊಡಿರುವ ಕಾರಣ ಸೆಂಟ್ರಲ್ ಹಾಗೂ ಹರ್ಬರ್ ರೈಲು ಸಂಚಾರ ಸ್ಥಗಿತಗೊಳಿಸಲಾಗಿದೆ ಎಂದು ಬಿಎಂಸಿ ತಿಳಿಸಿದೆ.
Next Story