Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಷ್ಟ್ರೀಯ ಪೋಷಣ್ ಮಾಸಾಚರಣೆ: ಪೋಷಣ್...

ರಾಷ್ಟ್ರೀಯ ಪೋಷಣ್ ಮಾಸಾಚರಣೆ: ಪೋಷಣ್ ರಥಯಾತ್ರೆಗೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ23 Sept 2020 5:49 PM IST
share
ರಾಷ್ಟ್ರೀಯ ಪೋಷಣ್ ಮಾಸಾಚರಣೆ: ಪೋಷಣ್ ರಥಯಾತ್ರೆಗೆ ಚಾಲನೆ

ಗದಗ : ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಗದಗ ಹಾಗೂ ಶಿಶು ಅಭಿವೃದ್ಧಿ ಇಲಾಖೆ (ಸಿಡಿಪಿಒ) ರೋಣ ಇವುಗಳ ಸಹಯೋಗದಲ್ಲಿ ರಾಷ್ಟ್ರೀಯ ಪೋಷಣ್ ಅಭಿಯಾನ ಮಾಸಾಚರಣೆ ಅಂಗವಾಗಿ ಪೋಷಣ್ ರಥಯಾತ್ರೆಗೆ ಹಿರಿಯ ದಿವಾಣಿ ನ್ಯಾಯಾಧೀಶರ ಆವರಣದಲ್ಲಿ ತಾಲೂಕು ಹಿರಿಯ ದಿವಾಣಿ ನ್ಯಾಯಾಧೀಶೆ ನಾಗಮಣಿ ವಿ. ಬುಧವಾರ ಚಾಲನೆ ನೀಡಿದರು.

ಪೋಷಣ್ ರಥವು ರೋಣದ ಹಿರಿಯ ದಿವಾಣಿ ನ್ಯಾಯಾಲಯದ ಆವರಣದಿಂದ ಚಾಲನೆಗೊಂಡು, ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಜಾಗೃತಿ ನೀಡಲಾ ಯಿತು. ಜಾಥಾದಲ್ಲಿ ಪೌಷ್ಠಿಕ ಆಹಾರ ಶಿಬಿರ, ಮಾತೃ ವಂದನಾ ಯೋಜನೆ, ಭೇಟಿ ಪಡಾವೊ, ಬಾಲ್ಯ ವಿವಾಹ ವಿರುದ್ಧ ಜಾಗೃತಿ, ಭ್ರೂಣ ಹತ್ಯೆ ನಿಷೇಧ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲಾಯಿತು.

ಒಂದು ತಿಂಗಳು ಕಾಲ ಪಟ್ಟಣ ಸೇರಿದಂತೆ ಹಳ್ಳಿ-ಹಳ್ಳಿಗಳಲ್ಲಿ ಪೋಷಣ್ ರಥ ತೆರಳಿ ಜನ ಜಾಗೃತಿ ಮೂಡಿಸಲಿದೆ. ಗರ್ಭಿಣಿ ಮತ್ತು ಬಾಣಂತಿ ಸೇರಿದಂತೆ ಮಗುವಿನ ಉತ್ತಮ ಬೆಳವಣಿಗೆಗೆ ಹಸಿರು ತರಕಾರಿ ಮತ್ತು ಪೌಷ್ಟಿಕಾಂಶವುಳ್ಳ ನುಗ್ಗೆ, ಕರಿಬೇವು ಹಾಗೂ ಹಣ್ಣಿನ ಮರಗಳನ್ನು ತಮ್ಮ ಮನೆಯ ಆವರಣದಲ್ಲಿ ಬೆಳೆಸುವುದು. ಇದರಿಂದ ನಿತ್ಯ ತಾಜಾ ಸೊಪ್ಪು ಮತ್ತು ತರಕಾರಿ ಸಿಗಲಿದೆ. ತಾಜಾ ಹಣ್ಣು, ತರಕಾರಿ ಮತ್ತು ಸೊಪ್ಪು ಸೇವನೆಯಿಂದ ಹೆಚ್ಚು ವಿಟಮಿನ್ ಅಂಶ ದೊರೆಯಲಿದೆ. ಇದರಿಂದ ಅಪೌಷ್ಟಿಕತೆ ಹೋಗಲಾಡಿಸಲು ಸಹಕಾರಿಯಾಗಲಿದೆ ಎನ್ನುವುದನ್ನು ಸಾರ್ವಜನಿಕರಿಗೆ ತಿಳಿಸುವುದು ಈ ಪೋಷಣ್ ರಥದ ಉದ್ದೇಶವಾಗಿದೆ.

ಕಾರ್ಯಕ್ರಮದಲ್ಲಿ ಪ್ರಧಾನ ದಿವಾಣಿ ನ್ಯಾಯಾಧೀಶ ಮುಹಮ್ಮದ್ ಯೂನುಸ್ ಅಥಣಿ, ಹೆಚ್ಚುವರಿ ದಿವಾಣಿ ನ್ಯಾಯಾಧೀಶ ಸಚಿನ್ ಎಚ್.ಆರ್., ಸಿಡಿಪಿಒ ಅಧಿಕಾರಿ ಬಿ.ಎಂ. ಮಾಳೆಕೊಪ್ಪ, ಇಲಾಖೆಯ ಮೇಲ್ವಿಚಾರಕಿಯರು, ಪೋಷಣ್ ಅಭಿಯಾನದ ಸಿಬ್ಬಂದಿ, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಇಲಾಖೆಯ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

ಮಾವಿನ ತೋರಣ, ಬಾಳೆ ಗಿಡ, ಬಲೂನಿನಿಂದ ಅಲಂಕೃತಗೊಂಡಿದ್ದ ಪೋಷಣ್ ರಥ ವಾಹನವು ಮದುವಣಗಿತ್ತಿಯಂತೆ ಸಿಂಗಾರಗೊಂಡಿತ್ತು. ತಲೆಮೇಲೆ ಕಳಶ ಹೊತ್ತ ಮಹಿಳೆಯರು ಪೋಷಣ್ ರಥದ ಮೆರವಣಿಗೆಗೆ ಮೆರುಗು ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X