Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೋವಿಡ್ ಮಾರ್ಗಸೂಚಿ ಪಾಲನೆ ಕಡ್ಡಾಯ :...

ಕೋವಿಡ್ ಮಾರ್ಗಸೂಚಿ ಪಾಲನೆ ಕಡ್ಡಾಯ : ದ.ಕ. ಜಿಲ್ಲಾಧಿಕಾರಿ ಆದೇಶ

ವಾರ್ತಾಭಾರತಿವಾರ್ತಾಭಾರತಿ23 Sept 2020 8:47 PM IST
share

ಮಂಗಳೂರು, ಸೆ.23: ದ.ಕ. ಜಿಲ್ಲೆಯಲ್ಲಿ ಕೊರೋನ ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಬುಧವಾರ ಆದೇಶ ಹೊರಡಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಗ್ರಾಮಾಂತರ, ನಗರ ಸ್ಥಳೀಯ ಸಂಸ್ಥೆ ಹಾಗೂ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವ್ಯವಹಾರ ನಡೆಯುವ ಎಲ್ಲ ಹೋಟೆಲ್, ರೆಸ್ಟೋರೆಂಟ್‌ಗಳು ವಾಣಿಜ್ಯ ಸಂಕೀರ್ಣಗಳು, ಮಾಲ್‌ಗಳು ಜನಸಂದಣಿ ಸೇರುವ ಪ್ರದೇಶದ ಅಂಗಡಿಗಳಲ್ಲಿ ಕಾರ್ಯನಿರ್ವಹಿಸುವ ಎಲ್ಲ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಮಾಸ್ಕ್ ಧರಿಸುವುದು ಹಾಗೂ ಸುರಕ್ಷಿತ ಅಂತರ ಕಾಯ್ದುಕೊಳ್ಳುವುದು ಕಡ್ಡಾಯವಾಗಿದೆ.

ನಗರ ಸ್ಥಳೀಯ ಸಂಸ್ಥೆ ಹಾಗೂ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪ್ರತಿಯೊಬ್ಬ ವರ್ತಕರು ತಮ್ಮ ಅಂಗಡಿಯಲ್ಲಿ ಸಾರ್ವಜಿನಿಕರು ಹೆಚ್ಚಿನ ಸಂಖ್ಯೆಯಲ್ಲಿ ಏಕಕಾಲದಲ್ಲಿ ಸೇರದಂತೆ ಅಂಗಡಿ-ಮುಂಗಟ್ಟಿನ ಮುಂಭಾಗದಲ್ಲಿ ಕನಿಷ್ಟ 6x6 ಅಡಿ ಅಂತರವನ್ನು ಗುರುತಿಸಿ ಗ್ರಾಹಕರಲ್ಲಿ ದೈಹಿಕ ಅಂತರ ಪಾಲಿಸುವುದನ್ನು ಖಚಿತಪಡಿಸಿಕೊಳ್ಳಬೇಕು.

ನಗರ ಸ್ಥಳೀಯ ಸಂಸ್ಥೆ ಹಾಗೂ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವರ್ತಕರು ತಮ್ಮ ಅಂಗಡಿ-ಮುಂಗಟ್ಟಿನಲ್ಲಿ ಮುಂದೆ ಇರುವ ಸ್ಥಳದಲ್ಲಿ ವಾಹನ ಸಂಚಾರಕ್ಕೆ ಬಳಸಲ್ಪಡುವ ರಸ್ತೆಯನ್ನು ಹೊರತುಪಡಿಸಿ, ಉಳಿದ ಸ್ಥಳವನ್ನು ಸುರಕ್ಷಿತ ಅಂತರ ಕಾಯ್ದುಕೊಂಡು ಸಾರ್ವಜನಿಕರಿಗೆ ಅನುಕೂಲ ವಾಗುವಂತೆ ಬಳಸುವುದು.

ಪ್ರತೀ ಅಂಗಡಿ ಮಾಲಕರು ತಮ್ಮ ಅಂಗಡಿ ಮುಂಭಾಗದಲ್ಲಿ ಸ್ವಯಂಚಾಲಿತ ಸ್ಯಾನಿಟೈಸರ್ ವ್ಯವಸ್ಥೆ ಅಳವಡಿಸುವುದು ಹಾಗೂ ಗ್ರಾಹಕರನ್ನು ಸ್ಯಾನಿಟೈಸರ್ ಬಳಸಲು ಉತ್ತೇಜಿಸುವುದು. ಪ್ರತೀ ಅಂಗಡಿ ಮಾಲಕರು ಪ್ರತಿದಿನ ತಮ್ಮ ತಮ್ಮ ಅಂಗಡಿಗಳಲ್ಲಿ ಕೆಲಸ ನಿರ್ವಹಿಸುವ ಎಲ್ಲ ಸಿಬ್ಬಂದಿ ಆರೋಗ್ಯ ತಪಾಸಣೆ ನಡೆಸುವುದು. ಪ್ರತಿ ಮೂರು ದಿನಗಳಿಗೊಮ್ಮೆ ತಮ್ಮ ಅಂಗಡಿಗಳನ್ನು ಸ್ಯಾನಿಟೈಸರ್ ಮಾಡಲು ಕ್ರಮ ವಹಿಸಬೇಕು.

ಅಂಗಡಿಗಳಲ್ಲಿ ಮಾಸ್ಕ್ ಧರಿಸದಿರುವುದು ಹಾಗೂ ಸುರಕ್ಷಿತ ಅಂತರ ಕಾಯ್ದುಕೊಳ್ಳದಿರುವುದು ಅಥವಾ ಷರತ್ತು ಉಲ್ಲಂಘನೆ ಮಾಡಿದ್ದಲ್ಲಿ ಮೊದಲ ಬಾರಿಗೆ 1,000 ರೂ., ಎರಡನೇ ಮತ್ತು ಮೂರನೇ ಬಾರಿಗೆ ಕ್ರಮವಾಗಿ 2,000 ಮತ್ತು 3,000 ರೂ. ದಂಡವನ್ನು ವಿಧಿಸಿ ಎಚ್ಚರಿಗೆ ನೀಡಲಾಗುವುದು. ಮೂರಕ್ಕಿಂತ ಹೆಚ್ಚು ಬಾರಿ ಷರತ್ತು ಉಲ್ಲಂಘಸಿದ್ದಲ್ಲಿ ಅಂಗಡಿಗಳ ಪರವಾನಿಗೆ ರದ್ದು ಪಡಿಸಲು ನಗರ ಸ್ಥಳೀಯ ಸಂಸ್ಥೆಗಳು ತಮ್ಮ ಹಂತದಲ್ಲಿ ಸೂಕ್ತ ಉಪನಿಯಮ ರಚಿಸಿ ಅದನ್ನು ಅನುಷ್ಠಾನಗೊಳಿಸಬೇಕು.

ಎಲ್ಲ ಸಾರ್ವಜನಿಕ ಸ್ಥಳಗಳಲ್ಲಿ ಕೆಲಸದ ಸ್ಥಳಗಳಲ್ಲಿ ಮತ್ತು ಪ್ರಯಾಣದ ಸಮಯದಲ್ಲಿ ಮುಖದ ಹೊದಿಕೆ ಧರಿಸುವುದು ಕಡ್ಡಾಯ. ಅಗತ್ಯಾನು ಸಾರ ಮುಖದ ಹೊದಿಕೆ ಧರಿಸದಿದ್ದಲ್ಲಿ ನಗರ ಪ್ರದೇಶಗಳಲ್ಲಿ 200 ರೂ. ಮತ್ತು ಇನ್ನುಳಿದ ಪ್ರದೇಶಗಳಲ್ಲಿ 100 ರೂ. ದಂಡ ವಿಧಿಸಲಾಗುವುದು.

ಮೀನುಗಾರಿಕೆ ಇಲಾಖೆ, ಮಹಾನಗರ ಪಾಲಿಕೆ, ಕೆಎಸ್ಸಾರ್ಟಿಸಿ ಜಿಲ್ಲಾ ವಿಭಾಗೀಯ ನಿಯಂತ್ರಣಾಧಿಕಾರಿ, ಎಪಿಎಂಸಿ ಕಾರ್ಯದರ್ಶಿಗಳಿಗೆ ತಮ್ಮ ವ್ಯಾಪ್ತಿಯಲ್ಲಿ ಬರುವ ಪ್ರದೇಶದಲ್ಲಿ ಕೋವಿಡ್ ಮಾರ್ಗಸೂಚಿ ಪಾಲಿಸುವಂತೆ ಸೂಚಿಸಲು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಆದೇಶದಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X