Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಕೋವಿಡ್‌ನಿಂದಾಗಿ 2020ರಲ್ಲಿ ಭಾರತದ...

ಕೋವಿಡ್‌ನಿಂದಾಗಿ 2020ರಲ್ಲಿ ಭಾರತದ ಆರ್ಥಿಕತೆ ಶೇ.5.9ರಷ್ಟು ಕ್ಷೀಣಿಸಲಿದೆ: ವಿಶ್ವಸಂಸ್ಥೆ ವರದಿ

ವಾರ್ತಾಭಾರತಿವಾರ್ತಾಭಾರತಿ23 Sept 2020 10:29 PM IST
share
ಕೋವಿಡ್‌ನಿಂದಾಗಿ 2020ರಲ್ಲಿ ಭಾರತದ ಆರ್ಥಿಕತೆ ಶೇ.5.9ರಷ್ಟು ಕ್ಷೀಣಿಸಲಿದೆ: ವಿಶ್ವಸಂಸ್ಥೆ ವರದಿ

ವಿಶ್ವಸಂಸ್ಥೆ, ಸೆ.23: ಕೋವಿಡ್-19 ಸಾಂಕ್ರಾಮಿಕದಿಂದಾಗಿ ಉಂಟಾದ ವ್ಯತ್ಯಯಗಳ ಪರಿಣಾಮವಾಗಿ ಭಾರತದ ಆರ್ಥಿಕತೆಯು 2020ರಲ್ಲಿ ಶೇ.5.9ರಷ್ಟು ಸಂಕುಚಿತಗೊಳ್ಳಲಿದೆ ಎಂದು ವಿಶ್ವಸಂಸ್ಥೆಯ ವ್ಯಾಪಾರ ಮತ್ತು ಅಭಿವೃದ್ಧಿ ಘಟಕ (ಅಂಕ್ಟಾಡ್)ದ ವರದಿಯು ಅಂದಾಜಿಸಿದೆ. ಆರ್ಥಿಕ ಬೆಳವಣಿಗೆಯು 2011ರಲ್ಲಿ ಚೇತರಿಸಿಕೊಳ್ಳಲಿದೆಯಾದರೂ ಈ ವರ್ಷದ ಕುಸಿತವು ಶಾಶ್ವತ ಆದಾಯ ನಷ್ಟವಾಗಿ ಪರಿವರ್ತನೆಗೊಳ್ಳುವ ಸಾಧ್ಯತೆಯಿದೆ ಎಂದು ಅದು ಎಚ್ಚರಿಕೆ ನೀಡಿದೆ.

ಇನ್ನೂ ನಿಯಂತ್ರಣಕ್ಕೆ ಬಾರದ ಕೊರೋನ ವೈರಸ್ ಸಾಂಕ್ರಾಮಿಕದ ನಡುವೆ ವಿಶ್ವ ಆರ್ಥಿಕತೆಯು ತೀವ್ರ ಹಿಂಜರಿತಕ್ಕೊಳಗಾಗಿದೆ ಎಂದು ವ್ಯಾಪಾರ ಮತ್ತು ಅಭಿವೃಧ್ಧಿ ವರದಿ-2020 ಹೇಳಿದೆ.

 ಈ ವರ್ಷ ಜಾಗತಿಕ ಆರ್ಥಿಕತೆಯು ಶೇ.4.3ರಷ್ಟು ಕ್ಷೀಣಿಸಲಿದೆ ಮತ್ತು ಇದರೊಂದಿಗೆ ವರ್ಷಾಂತ್ಯದ ವೇಳೆಗೆ ಜಾಗತಿಕ ಉತ್ಪನ್ನದಲ್ಲಿ ಕೊರೋನ ವೈರಸ್ ಸಾಂಕ್ರಾಮಿಕದ ಹರಡುವಿಕೆ ಆರಂಭಗೊಳ್ಳುವ ಮುನ್ನ ಆರ್ಥಿಕ ತಜ್ಞರು ನಿರೀಕ್ಷಿಸಿದ್ದಕ್ಕಿಂತ ಆರು ಲಕ್ಷ ಕೋಟಿ ಅಮೆರಿಕನ್ ಡಾಲರ್‌ಗಳ ಕೊರತೆಯಾಗಲಿದೆ ಎಂದು ಹೇಳಿರುವ ವರದಿಯು, ಬ್ರೆಝಿಲ್,ಭಾರತ ಮತ್ತು ಮೆಕ್ಸಿಕೋದ ಆರ್ಥಿಕತೆಗಳು ತೀವ್ರ ಹದಗೆಟ್ಟಿರುವುದರ ಬಿಸಿಯು ಇಡೀ ವಿಶ್ವಕ್ಕೇ ತಟ್ಟಿದೆ. ದೇಶೀಯ ಆರ್ಥಿಕ ಚಟುವಟಿಕೆಗಳು ಕುಗ್ಗಿದಾಗ ಅಂತರರಾಷ್ಟ್ರೀಯ ಆರ್ಥಿಕ ಚಟುವಟಿಕೆಗಳೂ ಕುಗ್ಗುತ್ತವೆ. ಈ ವರ್ಷ ವ್ಯಾಪಾರವು ಶೇ.20ರಷ್ಟು ಮತ್ತು ವಿದೇಶಿ ನೇರ ಹೂಡಿಕೆಗಳು ಶೇ.40ರವರೆಗೆ ಕುಸಿಯಲಿವೆ ಮತ್ತು ಹಣಕಾಸು ರವಾನೆಗಳು 100 ಶತಕೋಟಿ ಡಾ.ಗೂ ಹೆಚ್ಚಿನ ಇಳಿಕೆಯನ್ನು ಕಾಣಲಿವೆ ಎಂದು ತಿಳಿಸುವ ಮೂಲಕ ಜಾಗತಿಕ ಆರ್ಥಿಕತೆಯ ಕರಾಳ ಚಿತ್ರಣವನ್ನು ನೀಡಿದೆ.

 ದಕ್ಷಿಣ ಏಶ್ಯಾದ ಆರ್ಥಿಕತೆಯು 2020ರಲ್ಲಿ ಶೇ.4.8ರಷ್ಟು ಸಂಕುಚಿತಗೊಳ್ಳಲಿದೆ ಮತ್ತು 2021ರಲ್ಲಿ ಶೇ.3.9ರಷ್ಟು ಚೇತರಿಸಿಕೊಳ್ಳಲಿದೆ. 2020ರಲ್ಲಿ ಭಾರತದ ಜಿಡಿಪಿಯು ಶೇ.5.9ರಷ್ಟು ಕ್ಷೀಣಿಸುವ ನಿರೀಕ್ಷೆಯಿದ್ದು,2021ರಲ್ಲಿ ಶೇ.3.9ರಷ್ಟು ಚೇತರಿಕೆಯನ್ನು ಕಾಣಲಿದೆ ಎಂದು ಅಂಕ್ಟಾಡ್ ತನ್ನ ವರದಿಯಲ್ಲಿ ಹೇಳಿದೆ.

ಭಾರತದಲ್ಲಿ ಕೊರೋನ ವೈರಸ್ ಪ್ರಸರಣವನ್ನು ತಡೆಯಲು ಹೇರಲಾಗಿದ್ದ ಕಠಿಣ ಲಾಕ್‌ಡೌನ್ ಕ್ರಮಗಳು ದೇಶಾದ್ಯಂತ ಹಲವಾರು ಉತ್ಪಾದಕ ಚಟುವಟಿಕೆಗಳನ್ನು ಸ್ಥಗಿತಗೊಳಿಸಿದ್ದರಿಂದ 2020ರಲ್ಲಿ ತೀವ್ರ ಆರ್ಥಿಕ ಹಿಂಜರಿತವುಂಟಾಗಿದೆ ಎಂದಿರುವ ವರದಿಯು,ಇತ್ತೀಚಿನ ವರ್ಷಗಳಲ್ಲಿ ಭಾರತೀಯ ಆರ್ಥಿಕತೆಯು ಪ್ರಗತಿ ದರಗಳಿಗೆ ಅನುಗುಣವಾಗಿ 2021ರಲ್ಲಿ ದೇಶದ ಆರ್ಥಿಕತೆಯು ಪುಟಿದೇಳಲಿದೆ ಎಂದಿದೆ.

2020ರಲ್ಲಿ ಅಮೆರಿಕದ ಆರ್ಥಿಕತೆಯು ಶೇ.5.4ರಷ್ಟು ಕುಸಿತವನ್ನು ಕಾಣಲಿದೆ ಮತ್ತು 2021ರಲ್ಲಿ ಶೇ.2.8ರಷ್ಟು ಚೇತರಿಸಿಕೊಳ್ಳಲಿದೆ. ಚೀನಾ ಈ ವರ್ಷ ಶೇ.1.3ರಷ್ಟು ಮತ್ತು 2021ರಲ್ಲಿ ಶೇ.8.1ರಷ್ಟು ಬೃಹತ್ ಆರ್ಥಿಕ ಬೆಳವಣಿಗೆಯನ್ನು ದಾಖಲಿಸುವ ನಿರೀಕ್ಷೆಯಿದೆ ಮತ್ತು ಇದು ವಿಶ್ವದಲ್ಲಿಯೇ ಅತ್ಯಂತ ಹೆಚ್ಚಿನ ಪ್ರಗತಿದರವಾಗಲಿದೆ ಎಂದು ವರದಿಯು ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X