Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕರ್ತವ್ಯದಲ್ಲಿದ್ದಾಗಲೇ ಕೊರೋನ ಸೋಂಕಿನಿಂದ...

ಕರ್ತವ್ಯದಲ್ಲಿದ್ದಾಗಲೇ ಕೊರೋನ ಸೋಂಕಿನಿಂದ ಮೃತಪಟ್ಟ ಕೊಡಗಿನ ಯೋಧ ಮಜೀದ್

ವಾರ್ತಾಭಾರತಿವಾರ್ತಾಭಾರತಿ24 Sept 2020 7:23 PM IST
share
ಕರ್ತವ್ಯದಲ್ಲಿದ್ದಾಗಲೇ ಕೊರೋನ ಸೋಂಕಿನಿಂದ ಮೃತಪಟ್ಟ ಕೊಡಗಿನ ಯೋಧ ಮಜೀದ್

ಮಡಿಕೇರಿ,ಸೆ.24: ಭಾರತೀಯ ಸೇನೆಯ ಗಡಿ ಭದ್ರತಾ ಪಡೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಕೊಡಗು ಜಿಲ್ಲೆಯ ಯೋಧರೊಬ್ಬರು ಕೊರೋನ ಸೋಂಕಿಗೆ ಬಲಿಯಾದ ಘಟನೆ ಗುರುವಾರ ಬೆಳಗ್ಗೆ ಕೇರಳ ತಿರುವನಂತಪುರಂನಲ್ಲಿ ನಡೆದಿದೆ. 

ವಿರಾಜಪೇಟೆ ಸಮೀಪದ ನಲ್ವತ್ತೋಕ್ಲು ಗ್ರಾಮದ ನಿವಾಸಿ ದುದ್ದಿಯಂಡ ಅಬ್ಬಾಸ್ ಮತ್ತು ಬಿಚ್ಚುಮ್ಮ ದಂಪತಿಗಳ ಪುತ್ರ ದುದ್ದಿಯಂಡ ಎ.ಮಜೀದ್(50) ಎಂಬವರೇ ಮೃತ ಯೋಧರಾಗಿದ್ದಾರೆ.

ಭಾರತೀಯ ಗಡಿ ಭದ್ರತಾ ಪಡೆ(ಬಿ.ಎಸ್.ಎಫ್)ಯಲ್ಲಿ 30 ವರ್ಷಗಳ ಸುದೀರ್ಘವಾದ ಸೇವೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ 31 ವರ್ಷಕ್ಕೆ ಕಾಲಿಡುತ್ತಿದ್ದಂತೆ, ಕರ್ತವ್ಯದಲ್ಲಿರುವಾಗಲೇ ಕೋವಿಡ್-19 ಸೋಂಕಿಗೆ ಬಲಿಯಾಗಿದ್ದಾರೆ. ಮೃತರು ತಾಯಿ, ಪತ್ನಿ, ಇಬ್ಬರು ಗಂಡು ಮಕ್ಕಳು, ಐವರು ಸಹೋದರರು ಮತ್ತು ಮೂವರು ಸಹೋದರಿಯರನ್ನು ಸೇರಿದಂತೆ ಬಂಧುವರ್ಗವನ್ನು ಅಗಲಿದ್ದಾರೆ.

ದೇಶದ ವಿವಿಧ ಭಾಗಗಳಲ್ಲಿ ಕರ್ತವ್ಯ ನಿರ್ವಹಿಸಿ ಕಳೆದ 4 ವರ್ಷಗಳಿಂದ ಕೇರಳದ ತಿರುವನಂತಪುರಂನಲ್ಲಿ ಸೇವೆ ಸಲ್ಲಿಸುತ್ತಿದ್ದ ಮಜೀದ್ ಅವರು, ಕಳೆದ ಆಗಸ್ಟ್ ತಿಂಗಳ ಅಂತ್ಯದವರೆಗೂ ಸಕ್ರಿಯವಾಗಿ ಕಾರ್ಯನಿರ್ವಹಿಸಿದ್ದಾರೆ. ಇದೇ ತಿಂಗಳ ಮೊದಲ ವಾರದಲ್ಲಿ ದಿಢೀರನೆ ಅವರಿಗೆ ಕೋವಿಡ್-19 ಸೋಂಕು ಧೃಡಪಟ್ಟ ಕಾರಣ, ತಿರುವನಂತಪುರಂನ ಮೆಡಿಕಲ್ ಕಾಲೇಜಿನಲ್ಲಿರುವ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ತಜ್ಞ ವೈದ್ಯರ ತಂಡ ನಿರಂತರವಾಗಿ ನೀಡಿದ ಚಿಕಿತ್ಸೆ ಆರಂಭದಲ್ಲಿ ಫಲ ಕಾಣದಿದ್ದಾಗ ಪ್ಲಾಸ್ಮಾ ತೆರಪಿ ಮೂಲಕ ಚಿಕಿತ್ಸೆ ಮುಂದುವರಿಸಲಾಗಿತ್ತು. ಇದರಿಂದ ಚೇತರಿಸಿಕೊಳ್ಳುವ ಹಂತದಲ್ಲಿದ್ದ ಮಜೀದ್ ಅವರಿಗೆ ತಮ್ಮ ಬಹು ಅಂಗಾಂಗ ವೈಫಲ್ಯ ಕೂಡ ಕಾಡತೊಡಗಿತು. ತಮ್ಮ ಎರಡೂ ಕಿಡ್ನಿ ಮತ್ತು ಹೃದಯ ಸಂಬಂಧಿ ಕಾಯಿಲೆ ವೃದ್ಧಿಸಿದ ಪರಿಣಾಮ ಕೋವಿಡ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಜೀದ್ ಅವರು, ಯಾವುದೇ ಉನ್ನತ ಮಟ್ಟದ ಚಿಕಿತ್ಸೆಗೂ ಸ್ಪಂದಿಸದೆ ಗುರುವಾರ ಬೆಳಿಗ್ಗೆ 7 ಗಂಟೆಗೆ ತಿರುವನಂತಪುರಂ ಮೆಡಿಕಲ್ ಕಾಲೇಜಿನ ಕೋವಿಡ್ ಆಸ್ಪತ್ರೆಯಲ್ಲಿ ನಿಧನರಾದರು. 

ಬದುಕು-ದೇಶ ಸೇವೆ

ವೀರಾಜಪೇಟೆ ಸಮೀಪದ ನಲ್ವತ್ತೋಕ್ಲು ಗ್ರಾಮದ ದುದ್ದಿಯಂಡ ಅಬ್ಬಾಸ್ ಮತ್ತು ಬಿಚ್ಚುಮ್ಮ ದಂಪತಿಗಳ ಪುತ್ರರಾಗಿ 1970ರಲ್ಲಿ ಕೃಷಿಕ ಕುಟುಂಬದಲ್ಲಿ ಜನಿಸಿದ ಮಜೀದ್, ಬಡತನದ ಬೇಗೆಯಲ್ಲಿ ಬಾಲ್ಯ ಕಳೆದಿದ್ದರು. ತಮ್ಮ ಆರಂಭಿಕ ವಿದ್ಯಾಭ್ಯಾಸವನ್ನು ಹುಟ್ಟೂರಿನಲ್ಲಿ ಪೂರೈಸಿ, ಗೋಣಿಕೊಪ್ಪಲು ಕಾವೇರಿ ಕಾಲೇಜಿನಲ್ಲಿ ಪದವಿ ಪಡೆದಿದ್ದರು. ಬೆಂಗಳೂರಿನಲ್ಲಿ ನಡೆದ ಬಿ.ಎಸ್.ಎಫ್. ನೇಮಕಾತಿ ಶಿಬಿರದಲ್ಲಿ ಆಯ್ಕೆಗೊಂಡ ಮಜೀದ್ ಅವರು, 1990 ಮಾರ್ಚ್ 1ರಂದು ತಮ್ಮ 20ನೇ ವರ್ಷ ಪ್ರಾಯದಲ್ಲೇ ದೇಶ ಸೇವೆಗಾಗಿ ತಮ್ಮನ್ನು ಅರ್ಪಿಸಿಕೊಂಡಿದ್ದರು. ಹರಿಯಾಣದ ಇಸಾರ್ ನಲ್ಲಿರುವ ಬಿ.ಎಸ್.ಎಫ್. ತರಬೇತಿ ಕಾಲೇಜಿನಲ್ಲಿ ತಮ್ಮ ಆರಂಭಿಕ ತರಬೇತಿ ಪೂರೈಸಿದ ಮಜೀದ್ ಅವರು, ಮೊದಲಿಗೆ ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ಕರ್ತವ್ಯಕ್ಕಾಗಿ ನಿಯೋಜನೆಗೊಂಡರು. ಬಳಿಕ ಪಂಜಾಬ್‍ನಲ್ಲಿ 6 ವರ್ಷಗಳ ಕಾಲ ಸೇವೆ ಸಲ್ಲಿಸಿದ ಮಜೀದ್ ಅವರು, ಬಳಿಕ ರಾಜಸ್ಥಾನಕ್ಕೆ ವರ್ಗಾವಣೆಯಾದರು. ರಾಜಸ್ಥಾನದಲ್ಲಿ ತಮ್ಮ ಕರ್ತವ್ಯ ಅವಧಿ ಪೂರ್ಣಗೊಂಡು ಮತ್ತೆ ಜಮ್ಮು-ಕಾಶ್ಮೀರದ ಶ್ರೀನಗರಕ್ಕೆ ವರ್ಗಾವಣೆಗೊಂಡು ಅಲ್ಲಿ ಮತ್ತೊಂದು ಅವಧಿಗೆ ಸೇವೆ ಸಲ್ಲಿಸಿ, ಕಳೆದ 4 ವರ್ಷಗಳಿಂದ ತಿರುವನಂತಪುರಂನಲ್ಲಿರುವ ಬಿ.ಎಸ್.ಎಫ್. ಸೆಕ್ಟರ್ ಹೆಡ್‍ಕ್ವಾರ್ಟರ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

ಹುಟ್ಟೂರಿನಲ್ಲಿ ಶೋಕ

ಬಡತನದ ಮಧ್ಯೆಯೂ ವಿದ್ಯಾಭ್ಯಾಸ ಪೂರ್ಣಗೊಳಿಸಿ ದೇಶ ಸೇವೆಗಾಗಿ ಬಿ.ಎಸ್.ಎಫ್. ಸೇರಿ ಕರ್ತವ್ಯ ನಿರ್ವಹಿಸುತ್ತಿದ್ದ ತಮ್ಮ ಗ್ರಾಮದ ಯೋಧರೊಬ್ಬರ ಅಕಾಲಿಕ ನಿಧನದಿಂದಾಗಿ ಮಜೀದ್ ಅವರ ಹುಟ್ಟೂರು ನಲ್ವತ್ತೋಕ್ಲು ಗ್ರಾಮದಲ್ಲಿ ಶೋಕದ ವಾತಾವರಣ ಮನೆ ಮಾಡಿದೆ. ಬಾಲ್ಯವನ್ನು ಕಳೆದ ಹುಟ್ಟೂರಿನೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದ ಮಜೀದ್ ರಜೆಯಲ್ಲಿ ಬಂದಾಗಲೆಲ್ಲ ಸಹಪಾಠಿಗಳು ಮತ್ತು ಗ್ರಾಮಸ್ಥರೊಂದಿಗೆ ಬೆರೆಯುತ್ತಿದ್ದರು. ತಮ್ಮ ಗ್ರಾಮದಲ್ಲಿ ಹುಟ್ಟಿ ಬೆಳೆದ ಯೋಧರೊಬ್ಬರ ನಿಧನದಿಂದಾಗಿ ನಲ್ವತ್ತೋಕ್ಲು ಗ್ರಾಮದಲ್ಲಿ ನೀರವ ಮೌನ ಆವರಿಸಿದೆ. ಮೃತರ ಮನೆಗೆ ಜನ ತಂಡೋಪತಂಡವಾಗಿ ಆಗಮಿಸಿ ಕುಟುಂಬಸ್ಥರಿಗೆ ಸಾಂತ್ವನ ಹೇಳುತ್ತಿದ್ದಾರೆ. 3 ದಶಕಗಳಿಗೂ ಹೆಚ್ಚು ಕಾಲ ದೇಶ ಸೇವೆಗೈದ ಗ್ರಾಮದ ಯೋಧರೊಬ್ಬರ ಅಂತಿಮ ಮುಖ ದರ್ಶನಕ್ಕೂ ಸಾಧ್ಯವಾಗುತ್ತಿಲ್ಲ ಎಂಬ ದುಃಖ ಗ್ರಾಮದವರನ್ನು ಕಾಡುತ್ತಿದೆ.

ತಮ್ಮ ಇಬ್ಬರು ಪುತ್ರರಿಗೆ ಉತ್ತಮ ಶಿಕ್ಷಣ ನೀಡಿ ಅವರ ಭವಿಷ್ಯ ರೂಪಿಸುವ ಕನಸು ಕಂಡಿದ್ದ ಮೃತ ಯೋಧ ಮಜೀದ್ ಅವರು ಅದಕ್ಕಾಗಿ ನಿರಂತರವಾಗಿ ಶ್ರಮಿಸುತ್ತಿದ್ದರು. ಕಿರಿಯ ಪುತ್ರ ಮುಹಮ್ಮದ್ ಝಿಯಾನ್ ಕಳೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಮಡಿಕೇರಿಯ ಜವಾಹರ್ ನವೋದಯ ವಿದ್ಯಾಲಯಕ್ಕೆ 'ಟಾಪರ್' ಆದ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಇದಕ್ಕೂ ಮೊದಲು ಝಿಯಾನ್ ಪ್ರಥಮ ಪಿಯುಸಿಯಲ್ಲಿದ್ದಾಗ ಕೇಂದ್ರ ಸರಕಾರದ ರಾಷ್ಟ್ರೀಯ ಶೈಕ್ಷಣಿಕ ವಿನಿಮಯ ಕಾರ್ಯಕ್ರಮದಡಿ ಜಪಾನ್ ದೇಶಕ್ಕೆ ಭೇಟಿ ನೀಡಿ ಗಮನ ಸೆಳೆದಿದ್ದರು. ಮಕ್ಕಳ ಭವಿಷ್ಯದ ಬಗ್ಗೆ ಹಲವು ಕನಸುಗಳನ್ನು ಕಂಡಿದ್ದ ಮಜೀದ್ ಕಂಡ ಕನಸು ನನಸಾಗುವುದನ್ನು ಕಣ್ಣಾರೆ ನೋಡಲು ಸಾಧ್ಯವಾಗದೆ ಅಕಾಲಿಕವಾಗಿ ಇಹಲೋಕ ತ್ಯಜಿಸಿದ್ದು ಕುಟುಂಬಸ್ಥರನ್ನು ಮತ್ತಷ್ಟು ದುಃಖಿತರನ್ನಾಗಿಸಿದೆ.

ಕೆ.ಎಂ.ಎ. ಸಂತಾಪ:

ಕೊಡವ ಮುಸ್ಲಿಂ ಅಸೋಸಿಯೇಷನ್‍ನ (ಕೆ.ಎಂ.ಎ.) ಸದಸ್ಯರಾಗಿದ್ದ ದುದ್ದಿಯಂಡ ಎ. ಮಜೀದ್ ಅವರ ನಿಧನಕ್ಕೆ ಕೆ.ಎಂ.ಎ. ತೀವ್ರ ಸಂತಾಪ ಸೂಚಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಕೆ.ಎಂ.ಎ. ಅಧ್ಯಕ್ಷರಾದ ದುದ್ದಿಯಂಡ ಹೆಚ್.ಸೂಫಿ ಹಾಜಿ, ಮೃತ ಯೋಧ ಮಜೀದ್ ಅವರ ನಿಧನದಿಂದಾಗಿ ಸಂಸ್ಥೆಯು ಕ್ರಿಯಾಶೀಲ ಸದಸ್ಯರೊಬ್ಬರನ್ನು ಕಳೆದುಕೊಂಡಂತಾಗಿದೆ ಎಂದು ತಿಳಿಸಿದ್ದಾರೆ. ಮೃತ ಮಜೀದ್ ಅವರ ಹೆಸರಿನಲ್ಲಿ ಶುಕ್ರವಾರದಂದು ಎಲ್ಲಾ ಮಸೀದಿಗಳಲ್ಲಿ ಮಯ್ಯತ್ ನಮಾಜ್ ನಿರ್ವಹಿಸುವಂತೆ ಸೂಫಿ ಹಾಜಿ ಅವರು ಮನವಿ ಮಾಡಿಕೊಂಡಿದ್ದಾರೆ.

ಮೃತ ಯೋಧ ಮಜೀದ್ ಅವರಿಗೆ ಕೋವಿಡ್ ಭಾದಿಸಿದ್ದ ಕಾರಣ ಅವರ ಪಾರ್ಥಿವ ಶರೀರವನ್ನು ಹುಟ್ಟೂರಿಗೆ ತರಲು ಸಾಧ್ಯವಾಗುತ್ತಿಲ್ಲ. ಅವರ ಹುಟ್ಟೂರಿನ ಜಮಾಅತ್ ಆದ ವಿರಾಜಪೇಟೆ ಸಮೀಪದ ನಲ್ವತ್ತೋಕ್ಲು ಜುಮಾ ಮಸೀದಿಯ ಆಡಳಿತ ಮಂಡಳಿಯ ನಿರಾಕ್ಷೇಪದಂತೆ ತಿರುವನಂತಪುರಂನಲ್ಲೆ ಮೃತರ ಅಂತ್ಯಕ್ರಿಯೆ ನಡೆಯಲಿದೆ. ಕರ್ತವ್ಯದಲ್ಲಿದ್ದ ಸಂದರ್ಭದಲ್ಲೇ ಮೃತರಾಗಿರುವ ಕಾರಣ ಸಕಲ ಸರಕಾರಿ ಗೌರವಗಳೊಂದಿಗೆ ಗುರುವಾರ ಮಧ್ಯಾಹ್ನದ ವೇಳೆಗೆ ಅವರ ಅಂತ್ಯಕ್ರಿಯೆ ನಡೆಸಲಾಗುತ್ತದೆ. ಪಾರ್ಥಿವ ಶರೀರವನ್ನು ಮತ್ತೊಮ್ಮೆ ಆಂಟಿಜೆನ್ ಟೆಸ್ಟಿಗೆ ಒಳಪಡಿಸಲಾಗುವುದು. ಒಂದು ವೇಳೆ ಫಲಿತಾಂಶ ನೆಗೆಟಿವ್ ಬಂದಲ್ಲಿ ಮಜೀದ್ ಅವರ ಪಾರ್ಥಿವ ಶರೀರವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುವುದು. ಪಾಸಿಟಿವ್ ಬಂದರೆ ಇದು ಸಾಧ್ಯವಿಲ್ಲ ಎಂದು ಬಿಎಸ್‍ಎಫ್ ಮೂಲಗಳು ಕುಟುಂಬಸ್ಥರಿಗೆ ತಿಳಿಸಿವೆ. ಈ ಕುರಿತು ಯಾವುದೇ ಅಂತಿಮ ತೀರ್ಮಾನ ಇದುವರೆಗೂ ಆಗಿರುವುದಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X