Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿವಮೊಗ್ಗದಲ್ಲಿ ಮುಂದಿನ 15 ದಿನ ವ್ಯಾಪಕ...

ಶಿವಮೊಗ್ಗದಲ್ಲಿ ಮುಂದಿನ 15 ದಿನ ವ್ಯಾಪಕ ಕೊರೋನ ಪರೀಕ್ಷೆ: ಜಿಲ್ಲಾಧಿಕಾರಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ25 Sept 2020 5:26 PM IST
share
ಶಿವಮೊಗ್ಗದಲ್ಲಿ ಮುಂದಿನ 15 ದಿನ ವ್ಯಾಪಕ ಕೊರೋನ ಪರೀಕ್ಷೆ: ಜಿಲ್ಲಾಧಿಕಾರಿ ಸೂಚನೆ

ಶಿವಮೊಗ್ಗ,ಸೆ.25: ಕೊರೋನ ನಿಯಂತ್ರಿಸುವ ಕ್ರಮವಾಗಿ ಮುಂದಿನ 15 ದಿನಗಳ ಕಾಲ ಜಿಲ್ಲೆಯಾದ್ಯಂತ ವ್ಯಾಪಕವಾಗಿ ಕೊರೋನ ಪರೀಕ್ಷೆಯನ್ನು ನಡೆಸುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಸೂಚನೆ ನೀಡಿದರು.

ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಸವೇಕ್ಷಣಾ ಸಮಿತಿ ಸಭೆಯಲ್ಲಿ ಮಾತನಾಡಿದರು. ಮುಂದಿನ 15ದಿನಗಳ ಕಾಲ ಪ್ರತಿದಿನ ಕನಿಷ್ಠ 3ಸಾವಿರ ವ್ಯಕ್ತಿಗಳಿಗೆ ಕೊರೋನ ಪರೀಕ್ಷೆ ನಡೆಸಬೇಕು. ಪ್ರತಿದಿನ 2 ಸಾವಿರ ಆರ್‍ಟಿಪಿಸಿಆರ್ ಮತ್ತು 1 ಸಾವಿರ ರ‍್ಯಾಪಿಡ್ ಆಂಟಿಜನ್ ಟೆಸ್ಟ್ ನಡೆಸಬೇಕು. ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿಯಿಂದ ಹಿಡಿದು ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳು, ತಾಲೂಕು ಆಸ್ಪತ್ರೆಗಳಲ್ಲಿ ಸಹ ಕೊರೋನ ತಪಾಸಣೆ ನಡೆಸಬೇಕು. ಇದಕ್ಕೆ ಅಗತ್ಯವಾದ ತಪಾಸಣಾ ಕಿಟ್‌ಗಳನ್ನು ಪೂರೈಕೆ ಮಾಡಲಾಗುವುದು ಎಂದು ಅವರು ಹೇಳಿದರು.

ಸಿದ್ಧತೆ: ಕೊರೋನ ಪರೀಕ್ಷೆ ಹೆಚ್ಚಳಕ್ಕೆ ಪೂರಕವಾಗಿ ಪಾಸಿಟಿವ್ ವ್ಯಕ್ತಿಗಳಿಗೆ ಸೂಕ್ತ ಚಿಕಿತ್ಸೆ ಒದಗಿಸಲು ಎಲ್ಲಾ ವ್ಯವಸ್ಥೆಯನ್ನು ಮಾಡಬೇಕು. ರೋಗ ಲಕ್ಷಣವಿಲ್ಲದ ಕೊರೋನ ಪೀಡಿತರಿಗೆ ಹೋಂ ಕ್ವಾರೆಂಟೈನ್ ವ್ಯವಸ್ಥೆ ಕಲ್ಪಿಸಬೇಕು. ಹೋಂ ಕ್ವಾರೆಂಟೈನ್‌ನಲ್ಲಿರುವವರ ಆರೋಗ್ಯದ ಮೇಲೆ ನಿಗಾ ಇರಿಸಲು ವೈದ್ಯಾಧಿಕಾರಿಗಳನ್ನು ಒಳಗೊಂಡ ತಂಡಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ರಚಿಸಬೇಕು. ರೋಗ ಲಕ್ಷಣವಿರುವ ಮತ್ತು ಚಿಕಿತ್ಸೆ ಅಗತ್ಯವಿರುವರನ್ನು ಮಾತ್ರ ಮೆಗ್ಗಾನ್ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಬೇಕು. ಕೋವಿಡ್ ಆಸ್ಪತ್ರೆಗಳಲ್ಲಿ ಸೂಕ್ತ ಪ್ರಮಾಣದಲ್ಲಿ ಆಕ್ಸಿಜನ್ ಲಭ್ಯತೆಯನ್ನು ಖಾತ್ರಿಪಡಿಸಬೇಕು. ಮೆಗ್ಗಾನ್ ಆವರಣದಲ್ಲಿ ಇನ್ನೊಂದು ಆಕ್ಸಿಜನ್ ಪ್ಲಾಂಟ್ ಆರಂಭಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಅವರು ತಿಳಿಸಿದರು.

ಮೆಗ್ಗಾನ್ ಪರ್ಯಾಯ ವ್ಯವಸ್ಥೆ: ಕೊರೋನ ಹೆಚ್ಚಾಗುತ್ತಿರುವ ಇಂತಹ ಸಂದರ್ಭದಲ್ಲಿ ಮೆಗ್ಗಾನ್ ಆಸ್ಪತ್ರೆ ಹೊರಭಾಗದಲ್ಲಿ ಸೇವಾ ಭದ್ರತೆ ಹಾಗೂ ಇನ್ನಿತರ ಬೇಡಿಕೆಗಳನ್ನು ಮುಂದಿರಿಸಿ ಹೊರ ಗುತ್ತಿಗೆ ಸಿಬ್ಬಂದಿಗಳು ನಡೆಸುತ್ತ್ರಿರುವ ಪ್ರತಿಭಟನೆ ದುರದೃಷ್ಟಕರ. ಹೊರಗುತ್ತಿಗೆ ನೌಕರರ ಬೇಡಿಕೆಗಳನ್ನು ತಾಂತ್ರಿಕ ಕಾರಣಗಳಿಂದ ಅಂಗೀಕರಿಸಲು ಸರ್ಕಾರದ ಹಂತದಲ್ಲಿ ಸಾಧ್ಯವಾಗಿಲ್ಲ. ಬೇಡಿಕೆಗಳನ್ನು ಈಡೇರಿಸಲು ಜಿಲ್ಲಾಡಳಿತ ತನ್ನಿಂದಾದ ಎಲ್ಲಾ ಪ್ರಯತ್ನಗಳನ್ನು ಮಾಡಿದೆ. ಪ್ರಸ್ತುತ ಮೆಗ್ಗಾನ್ ಆಸ್ಪತ್ರೆಯಲ್ಲಿ 350 ಮಂದಿ ಕೊರೋನಾ ಪೀಡಿತರು ಚಿಕಿತ್ಸೆ ಪಡೆಯುತ್ತಿದ್ದು, ಇಂತಹ ಸೂಕ್ಷ್ಮ ಸಂದರ್ಭದಲ್ಲಿ ಸೇವೆ ಸಲ್ಲಿಸಬೇಕಾದವರು ಪ್ರತಿಭಟನೆ ನಡೆಸುತ್ತಿರುವುದು ಸರಿಯಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಹೊರಗುತ್ತಿಗೆ ನೌಕರರ ಸಮಸ್ಯೆಗಳನ್ನು ಬಗೆಹರಿಸಲು ಎಲ್ಲಾ ರೀತಿಯ ಪ್ರಯತ್ನಗಳನ್ನು ಮುಂದುವರಿಸಲಾಗಿದೆ. ಅವರಿಗೆ ಕಾನೂನುಬದ್ಧವಾಗಿ ನೀಡಬೇಕಾಗಿರುವ ಎಲ್ಲಾ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಕೊರೋನ ಪೀಡಿತರ ಸಂಖ್ಯೆ ಹೆಚ್ಚಳದಿಂದ ಇರುವ ಸಿಬ್ಬಂದಿಗಳ ಮೇಲೆ ಒತ್ತಡ ಹೆಚ್ಚಾಗುತ್ತಿದ್ದು ಹೆಚ್ಚಿನ ಸಿಬ್ಬಂದಿಗಳ ಅಗತ್ಯವಿದೆ. ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳಲು ಅನುಮತಿ ನೀಡುವಂತೆ ಶಿಮ್ಸ್ ನಿರ್ದೇಶಕ ಡಾ.ಸಿದ್ಧಪ್ಪ ಅವರು ಮನವಿ ಮಾಡಿದರು.

ಕ್ರಿಮಿನಲ್ ಮೊಕದ್ದಮೆ: ಕೊರೋನ ಪೀಡಿತರ ಚಿಕಿತ್ಸೆಗೆ ಯಾವುದೇ ಕುಂದುಂಟಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಅನುಮೋದನೆಗೊಂಡಿರುವ ಹುದ್ದೆಗಳಿಗೆ ತಕ್ಷಣ ಎರಡು ದಿನಗಳ ಒಳಗಾಗಿ ಪರ್ಯಾಯ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳಬೇಕು. ಇಂತಹ ಸಾಂಕ್ರಾಮಿಕ ರೋಗದ ತುರ್ತು ಸಂದರ್ಭದಲ್ಲಿ ಕಾನೂನು ಬಾಹಿರ ಚಟುವಟಿಕೆ ನಡೆಸುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಜಿಲ್ಲಾಧಿಕಾರಿ ಅವರು ಶಿಮ್ಸ್ ನಿರ್ದೇಶಕರಿಗೆ ಸೂಚನೆ ನೀಡಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ, ಅಪರ ಜಿಲ್ಲಾಧಿಕಾರಿ ಜಿ.ಅನುರಾಧ, ಜಿಲ್ಲಾ ಸರ್ಜನ್ ಡಾ.ರಘುನಂದನ್ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X