ದ.ಕ.ಜಿಲ್ಲೆಯಲ್ಲಿ 217 ಮಂದಿಗೆ ಕೊರೋನ ಪಾಸಿಟಿವ್
ಮಂಗಳೂರು, ಸೆ. 25: ರಾಷ್ಟ್ರೀಯ ಆರೋಗ್ಯ ಅಭಿಯಾನದ (ಎನ್‌ಎಚ್‌ಎಂ) ಸಿಬ್ಬಂದಿಯು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಡೆಸುತ್ತಿ ರುವ ಪ್ರತಿಭಟನೆ ಮುಂದುವರಿದಿದ್ದರಿಂದ ಶುಕ್ರವಾರವೂ ದ.ಕ. ಜಿಲ್ಲೆಯ ಕೋವಿಡ್ ಬುಲೆಟಿನ್ ಪ್ರಕಟವಾಗಿಲ್ಲ. ಆದರೆ ರಾಜ್ಯ ಬುಲೆಟಿನ್ ಪ್ರಕಟವಾಗಿದ್ದು, ಅದರ ಪ್ರಕಾರ ಜಿಲ್ಲೆಯಲ್ಲಿ ಶುಕ್ರವಾರ 217 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದೆ.
ಅನೇಕ ದಿನಗಳಿಂದ ನಿತ್ಯವೂ 300- 400 ಮಂದಿ ಜಿಲ್ಲೆಯಲ್ಲಿ ಗುಣಮುಖರಾಗುತ್ತಿದ್ದರೂ ರಾಜ್ಯ ಬುಲೆಟಿನ್ ಪ್ರಕಾರ ಶುಕ್ರವಾರ ಕೇವಲ 68 ಮಂದಿ ಮಾತ್ರ ಬಿಡುಗಡೆಯಾಗಿದ್ದಾರೆ. ಸಾವು ಸಂಭವಿಸಿರುವುದು ವರದಿಯಾಗಿಲ್ಲ.
ಎನ್‌ಎಚ್‌ಎಂ ಸಿಬ್ಬಂದಿ ರಾಜ್ಯಾದ್ಯಂತ ಪ್ರತಿಭಟನೆಗೆ ಇಳಿದಿದ್ದಾರೆ. ಬೇಡಿಕೆ ಈಡೇರಿಕೆ ಬಗ್ಗೆ ಇನ್ನೂ ತೀರ್ಮಾನ ಆಗಿಲ್ಲ. ಹಾಗಾಗಿ ಬುಲೆಟಿನ್ ತಡೆಹಿಡಿಯಲಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
Next Story





