Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. 2020-25ನೆ ಸಾಲಿನ ‘ಕರ್ನಾಟಕ...

2020-25ನೆ ಸಾಲಿನ ‘ಕರ್ನಾಟಕ ಪ್ರವಾಸೋದ್ಯಮ ನೀತಿ’ ಬಿಡುಗಡೆ: ''ಹತ್ತು ಲಕ್ಷ ಉದ್ಯೋಗ ಸೃಷ್ಟಿಯ ಗುರಿ''

ವಾರ್ತಾಭಾರತಿವಾರ್ತಾಭಾರತಿ27 Sept 2020 1:15 PM IST
share
2020-25ನೆ ಸಾಲಿನ ‘ಕರ್ನಾಟಕ ಪ್ರವಾಸೋದ್ಯಮ ನೀತಿ’ ಬಿಡುಗಡೆ: ಹತ್ತು ಲಕ್ಷ ಉದ್ಯೋಗ ಸೃಷ್ಟಿಯ ಗುರಿ

ಬೆಂಗಳೂರು, ಸೆ.27: ‘ಕರ್ನಾಟಕ ಪ್ರವಾಸೋದ್ಯಮ ನೀತಿ 2020-25’ನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬಿಡುಗಡೆ ಮಾಡಿದರು. 

ಈ ಸಂದರ್ಭ ಕನ್ನಡ ಮತ್ತು ಸಂಸ್ಕೃತಿ, ಪ್ರವಾಸೋದ್ಯಮ ಹಾಗೂ ಯುವಸಬಲೀಕರಣ ಸಚಿವ ಸಿ.ಟಿ.ರವಿ, ಕಂದಾಯ ಸಚಿವ ಆರ್.ಅಶೋಕ್, ಶಾಸಕರಾದ ರಾಜುಗೌಡ, ಡಾ.ಶಿವರಾಜ್ ಪಾಟೀಲ್, ವಿಧಾನ ಪರಿಷತ್ ಸದಸ್ಯ ವೈ.ಎ.ನಾರಾಯಣ ಸ್ವಾಮಿ, ಕೆ.ಎಸ್.ಟಿ. ಡಿ.ಸಿ ಅಧ್ಯಕ್ಷೆ ಶ್ರುತಿ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಬಳಿಕ ಸುದ್ದಿಗೋಷ್ಠಿ ನಡೆಸಿದ ಸಚಿವ ಸಿ.ಟಿ.ರವಿ, ನೂತನ ಪ್ರವಾಸೋದ್ಯಮ ನೀತಿ ಹಾಗೂ ಮುಂದಿನ ಐದು ವರ್ಷಗಳಲ್ಲಿ ಇಟ್ಟುಕೊಂಡಿರುವ ಹೊಸ ಯೋಜನೆಗಳನ್ನು ಪ್ರಕಟಿಸಿದರು.

ರಾಜ್ಯದಲ್ಲಿ ಹತ್ತು ಲಕ್ಷ ಉದ್ಯೋಗ ಸೃಷ್ಟಿ, ಬಂಡವಾಳ ಹೂಡಿಕೆ ಉತ್ತೇಜನಕ್ಕಾಗಿ ಸಹಾಯಧನ, ಆರ್ಥಿಕ ಬೆಳವಣಿಗೆಗೆ ಒತ್ತು, ಪ್ರವಾಸೋದ್ಯಮ ಯೋಜನೆಗಳಿಗೆ  ವಿನಾಯಿತಿ, ಐದು ವರ್ಷಗಳಲ್ಲಿ ಪ್ರವಾಸೋದ್ಯಮ ಕ್ಷೇತ್ರಕ್ಕೆ ಹೊಸ ರೂಪ, ದೇಶದಲ್ಲೇ ರಾಜ್ಯವನ್ನು ಪ್ರವಾಸೋದ್ಯಮ ವಲಯದಲ್ಲಿ ಮೊದಲ ಸ್ಥಾನಕ್ಕೆ ಕೊಂಡೊಯ್ಯುವ ದೂರದೃಷ್ಟಿಯುಳ್ಳ ಬಹುನಿರೀಕ್ಷಿತ  ಪ್ರವಾಸೋದ್ಯಮ ನೀತಿ ಇದಾಗಿದೆ ಎಂದವರು ಹೇಳಿದರು.

ನೂತನ ಪ್ರವಾಸೋದ್ಯಮ ನೀತಿಯಲ್ಲಿ ಪ್ರಮುಖವಾಗಿ  ಸುಮಾರು 18 ಬಗೆಯ ಪ್ರವಾಸೋದ್ಯಮಕ್ಕೆ ಉತ್ತೇಜನ,70 ಆದ್ಯತಾ ಪ್ರವಾಸಿ ತಾಣಗಳನ್ನು ಗುರುತಿಸಿ ಅಭಿವೃದ್ಧಿಪಡಿಸುವುದು, ಎಂಟು ಜಿಲ್ಲೆಗಳನ್ನು ಆದ್ಯತಾ ಪ್ರವಾಸಿ ತಾಣಗಳೆಂದು ಪರಿಗಣಿಸಿ ಅಭಿವೃದ್ಧಿ,ಪ್ರೋತ್ಸಾಹ ಧನ ನೀಡಿಕೆ ಜತೆಗೆ ಸ್ಥಳೀಯರಿಗೆ ಆದ್ಯತೆ, ಸುರಕ್ಷತೆ, ವಿಶ್ವಾಸಾರ್ಹತೆ, ನೈರ್ಮಲ್ಯತೆ, ಮೂಲ ಸೌಕರ್ಯಗಳ ಅಭಿವೃದ್ಧಿಗೆ  ಒತ್ತು ನೀಡಲಾಗಿದೆ ಎಂದು ಹೇಳಿದರು.

2006ರಲ್ಲಿ ಕರ್ನಾಟಕಕ್ಕೆ 36.7ರಷ್ಟು ಮಿಲಿಯನ್ ದೇಶಿ ಪ್ರವಾಸಿಗರು ಆಗಮಿಸಿದ್ದರೆ, 2018ರಲ್ಲಿ 215.03 ಮಿಲಿಯನ್‍ನಷ್ಟು ಏರಿಕೆಯಾಗಿದೆ. ದೇಶದಲ್ಲೇ 3ನೇ ಸ್ಥಾನದಲ್ಲಿರುವ ಕರ್ನಾಟಕವನ್ನು ಮೊದಲನೇ ಸ್ಥಾನಕ್ಕೆ ತರುವ ಗುರಿಯನ್ನು ಇಟ್ಟುಕೊಳ್ಳಲಾಗಿದೆ ಎಂದು ತಿಳಿಸಿದರು.

ಪ್ರವಾಸಿ ತಾಣಗಳಲ್ಲಿರುವ ಆಹ್ಲಾದಕರವಾದ ಹವಾಮಾನ, ಕಾಸ್ಮೋಪಾಲಿಟಿನ್ ಸಂಸ್ಕೃತಿ ಅತ್ಯುನ್ನತ್ತ ಆಡಳಿತ ಪ್ರಕ್ರಿಯೆ, ಆಕರ್ಷಕ ಪ್ರೋತ್ಸಾಹ, ಹೂಡಿಕೆಗಿರುವ ವಿಫುಲ ಅವಕಾಶ, ಉದ್ಯೋಗ ಸೃಷ್ಟಿ ಸೇರಿದಂತೆ ಹತ್ತು ಹಲವು ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರುವ ಉದ್ದೇಶಗಳನ್ನು ಇಟ್ಟುಕೊಳ್ಳಲಾಗಿದೆ  ಎಂದರು.

ಪ್ರಮುಖವಾಗಿ ಪರಂಪರೆ, ವನ್ಯಜೀವಿ, ಆಧ್ಯಾತ್ಮಿಕತೆ, ಸಂಸ್ಕೃತಿ, ಸಾಹಸ ಕಾರ್ಯ, ಕರಾವಳಿ, ಪ್ರಕೃತಿ, ಆರೋಗ್ಯ, ಕೃಷಿ, ಪ್ರವಾಸಿ ತಾಣಗಳ ಅಭಿವೃದ್ಧಿ, ಮೂಲಭೂತ ಸೌಕರ್ಯಗಳಿಗೆ ಒತ್ತು, ಬಂಡವಾಳ ಹೂಡಿಕೆಗೆ ಆದ್ಯತೆ ಸೇರಿದಂತೆ ಹತ್ತು ಹಲವು ಅಂಶಗಳನ್ನೊಳಗೊಂಡಿದೆ  ಎಂದು ರವಿ ಅವರು ಮಾಹಿತಿ ನೀಡಿದರು.

 70 ಆದ್ಯತಾ ಪ್ರವಾಸಿ ತಾಣಗಳ ಅಭಿವೃದ್ಧಿ

ರಾಜ್ಯದಲ್ಲಿ 319 ಪ್ರವಾಸಿ ತಾಣಗಳನ್ನು ಗುರುತಿಸಲಾಗಿದ್ದು, 70 ಪ್ರವಾಸಿ ತಾಣಗಳನ್ನು ಆದ್ಯತಾ ಪ್ರವಾಸೋದ್ಯಮ ತಾಣಗಳೆಂದು ಪರಿಗಣಿಸಿ ಅಭಿವೃದ್ಧಿಪಡಿಸುವ ಪ್ರಸ್ತಾವ‌ವೂ ಪ್ರವಾಸೋದ್ಯಮ ನೀತಿಯಲ್ಲಿದೆ. ಬೈಲಕುಪ್ಪೆ,, ಬಾದಾಮಿ, ಐಹೊಳೆ, ಪಟ್ಟದಕಲ್ಲು, ಕೂಡಲ ಸಂಗಮ, ಹಂಪಿ, ಹೊಸಪೇಟೆ, ಸಂಡೂರು, ಬೆಳಗಾವಿ, ಗೋಕಾಕ್‌, ಕಿತ್ತೂರು, ಸವದತ್ತಿ, ದಾಬಸ್‌ಪೇಟೆ, ದೊಡ್ಡಬಳ್ಳಾಪುರ, ಬೀದರ್‌, ಬಸವ ಕಲ್ಯಾಣ, ಚಿಕ್ಕಬಳ್ಳಾಪುರ, ಗೌರಿಬಿದನೂರು, ಮುದ್ದೇನಹಳ್ಳಿ, ನಂದಿಬೆಟ್ಟ, ಚಿತ್ರದುರ್ಗ, ಹಿರಿಯೂರು, ಬಗಲಿ, ಮುಂತಾದ 70 ತಾಣಗಳನ್ನು ಆದ್ಯತಾ ಪ್ರವಾಸೋದ್ಯಮ ತಾಣವಾಗಿ ಅಭಿವೃದ್ಧಿಪಡಿಸುವ ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಮಾಹಿತಿ ಒದಗಿಸಿದರು.

ಸುಮಾರು 18 ಬಗೆಯ ಪ್ರವಾ ಸೋದ್ಯಮ ಕ್ಷೇತ್ರಗಳನ್ನು ಗುರುತಿಸಿ ಉತ್ತೇಜಿಸುವ ಗುರಿಯನ್ನು ಇಟ್ಟುಕೊಳ್ಳಲಾಗಿದೆ. ಸಾಹಸ, ಕೃಷಿ- ಗ್ರಾಮೀಣ, ಕಾರವಾನ್‌, ಕರಾವಳಿ- ಕಡಲತೀರ, ಸಾಂಸ್ಕೃತಿಕ, ಪಾರಂಪರಿಕ, ಪರಿಸರ (ನೈಸರ್ಗಿಕ ಮತ್ತು ವನ್ಯಜೀವಿ), ಶಿಕ್ಷಣ, ಚಲನಚಿತ್ರ, ಪಾಕ ಶಾಸ್ತ್ರ, ಒಳನಾಡು ಜಲ ಪ್ರವಾಸೋದ್ಯಮ, ನೌಕಾ ಯಾನ ವಿಹಾರ, ಗಣಿಗಾರಿಕೆ, ಆಧ್ಯಾತ್ಮಿಕ (ಧಾರ್ಮಿಕ, ಅಧಾತ್ಮ ಸ್ಥಳಗಳ ವೀಕ್ಷಣೆ), ಕ್ರೀಡೆ, ಸ್ವಾಸ್ಥ್ಯ ಪ್ರವಾಸೋದ್ಯಮ ಸೇರಿದಂತೆ ಇತರ ಪರಿಕಲ್ಪನೆಯಡಿ ಪ್ರವಾಸೋದ್ಯಮಕ್ಕೆ ಆದ್ಯತೆ ನೀಡಿ ಸಮಗ್ರವಾಗಿ ಅಭಿವೃದ್ಧಿಪಡಿಸುವ ದೂರ ದೃಷ್ಟಿಯ ಚಿಂತನೆ ನೀತಿಯಲ್ಲಿದೆ.

 ದಕ್ಷಿಣ ಕನ್ನಡ, ಉಡುಪಿ, ಕೊಡಗು, ಹಾಸನ, ಚಿಕ್ಕ ಮಗಳೂರು, ಚಾಮರಾಜನಗರ, ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಯನ್ನು ಪ್ರವಾಸೋದ್ಯಮ ದೃಷ್ಟಿಯಿಂದ ಸಮಗ್ರ ಅಭಿವೃದ್ಧಿಪಡಿಸುವ ಪ್ರಸ್ತಾವವೂ ಇದೆ ಎಂದು ಸಚಿವ ರವಿ ಮೆಚ್ಚುಗೆ ವ್ಯಕ್ತಪಡಿಸಿದರು.

ಒಂದೆಡೆ ಪ್ರವಾಸಿ ತಾಣಗಳಲ್ಲಿ ಮೂಲ ಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡುವ ಜತೆಗೆ ಬಂಡವಾಳ ಹೂಡಿಕೆಗೆ ಸಹಾಯಧನ ನೀಡಲು ಚಿಂತಿಸಲಾಗಿದೆ.

ಸಾಹಸ (ಅಡ್ವೆಂಚರ್‌) ಪ್ರವಾಸೋದ್ಯಮ, ಕಾರವಾನ್‌ ಪಾರ್ಕ್‌, ಹೊಟೇಲ್‌, ಹೌಸ್‌ ಬೋಟ್‌, ಸ್ವಾಸ್ಥ್ಯ ಕೇಂದ್ರ ಯೋಜನೆಗಳಿಗೆ ಶೇ. 5ರಿಂದ ಶೇ. 15ರ ವರೆಗೆ ಸಹಾಯಧನ, ಗರಿಷ್ಠ 2ರಿಂದ 5 ಕೋಟಿ ರೂ. ವರೆಗೆ ಬಂಡವಾಳ ಹೂಡಿಕೆ ಸಹಾಯಧನ ನೀಡುವಂತಹ ಪ್ರಸ್ತಾವವೂ ನೀತಿಯಲ್ಲಿವೆ. ಮುದ್ರಾಂಕ ಶುಲ್ಕದ ಮೇಲೆ ವಿನಾಯಿತಿ, ರಿಯಾಯಿತಿ ನೋಂದಣಿ ಶುಲ್ಕ, ಭೂಪರಿವರ್ತನೆ ಶುಲ್ಕದ ಮರುಪಾವತಿ, ಮೋಟಾರು ವಾಹನ ತೆರಿಗೆ ವಿನಾಯಿತಿ, ಪೂರಕ ಮೂಲಸೌಕರ್ಯ ನೆರವು ಕಲ್ಪಿಸಿ ಉತ್ತೇಜಿಸುವ ಅಂಶಗಳೂ ಇವೆ.

ಪ್ರವಾಸೋದ್ಯಮ ಅಭಿವೃದ್ಧಿ, ಉತ್ತೇಜನಕ್ಕಾಗಿ ಪ್ರೋತ್ಸಾಹ ಧನ, ಸಹಾಯಧನ, ರಿಯಾಯಿತಿ ನೀಡಲು ಎರಡು ಸಮಿತಿ ರಚನೆ ಪ್ರಸ್ತಾವವಿದೆ. 5 ಕೋ. ರೂ. ವರೆಗಿನ ಯೋಜನೆಗಳಿಗೆ ಆಯಾ ಜಿಲ್ಲೆಯ ಜಿಲ್ಲಾಧಿಕಾರಿ ಅಧ್ಯಕ್ಷತೆಯ ಜಿಲ್ಲಾ ಪ್ರವಾಸೋದ್ಯಮ ಸಮಿತಿ ಹಾಗೂ 5 ಕೋ. ರೂ. ಮೇಲ್ಪಟ್ಟ ಯೋಜನೆಗಳಿಗೆ ಪ್ರವಾಸೋದ್ಯಮ ಸಚಿವರ ಅಧ್ಯಕ್ಷತೆಯ ಪ್ರವಾಸೋದ್ಯಮ ಅಧಿಕಾರಯುಕ್ತ ಸಮಿತಿಗೆ ಸಹಾಯಧನ, ಪ್ರೋತ್ಸಾಹ ಧನ ನೀಡುವ ಅಧಿಕಾರ ಕಲ್ಪಿಸುವ ಪ್ರಸ್ತಾವವೂ ಇದೆ.

465 ಕೋಟಿ ರೂ. ಪ್ರೋತ್ಸಾಹ ಧನ!

ಪ್ರವಾಸೋದ್ಯಮ ನೀತಿಯಡಿ ವಾರ್ಷಿಕ 93 ಯೋಜನೆಗಳಿಗೆ 87.12 ಕೋ. ರೂ.ನಂತೆ ಐದು ವರ್ಷಗಳ ಅವಧಿಗೆ 465 ಯೋಜನೆಗಳಿಗೆ 435 ಕೋ. ರೂ. ಸಹಾಯಧನ, ಪ್ರೋತ್ಸಾಹ ಧನ, ಇತರ ನೆರವು ನೀಡುವ ಪ್ರಸ್ತಾವವಿದೆ. ಬಂಡವಾಳ ಹೂಡಿಕೆ ಸಹಾಯಧನವಾಗಿ ಐದು ವರ್ಷಗಳಲ್ಲಿ 405 ಕೋಟಿ ರೂ. ವಿನಿಯೋಗ. ಬಡ್ಡಿ ಸಹಾಯಧನ, ಸುಸ್ಥಿರತೆ ಕಾಯ್ದುಕೊಳ್ಳಲು ನೆರವು, ಮೂಲ ಸೌಕರ್ಯಕ್ಕೆ ಸಹಕಾರ, ಮಾರ್ಕೆಟಿಂಗ್‌ ನೆರವಿಗೆ ಸಂಬಂಧಪಟ್ಟಂತೆಯೂ ಸಹಾಯಧನ ನೀಡಿಕೆ ಬಗ್ಗೆ ನೀತಿಯಲ್ಲಿ ಪ್ರಸ್ತಾವಿಸಲಾಗಿದೆ ಎಂದು ಸಚಿವ ಸಿ.ಟಿ.ರವಿ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X