ವಿಶ್ವ ಹಿರಿಯ ನಾಗರಿಕರ ದಿನಾಚರಣೆ
ಉಡುಪಿ, ಸೆ.28: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಆರೋಗ್ಯ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ ಉಡುಪಿ,ಹಿರಿಯ ನಾಗರಿಕರ ಸಂಸ್ಥೆ ಗಳು ಉಡುಪಿ ಜಿಲ್ಲೆ, ಉಡುಪಿ ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟ, ವೃದ್ಧಾಶ್ರಮಗಳು ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅ. 1ರಂದು ಬೆಳಗ್ಗೆ 10:30ಕ್ಕೆ ಕುಂಜಿಬೆಟ್ಟು ಎಂ.ಜಿ.ಎಂ ಕಾಲೇಜಿನ ಗೀತಾಂಜಲಿ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ರಾಜ್ಯ ಗೃಹ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದು, ಉಡುಪಿ ಶಾಸಕ ಕೆ. ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Next Story