ಸ್ಕೈವಾಕ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ

ಬೆಂಗಳೂರು, ಸೆ.29: ನಗರದ ರಸ್ತೆಯಲ್ಲಿನ ಸ್ಕೈವಾಕ್ಗೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ತುಮಕೂರು ಹೆದ್ದಾರಿ ಎಂಟನೇ ಮೈಲಿ ಬಳಿ ಈ ಘಟನೆ ನಡೆದಿದ್ದು, ದಾಸರಹಳ್ಳಿಯ ಕಲ್ಯಾಣನಗರ ಮೋಹನ್ ದಾಸ್(74) ಎಂಬುವರು ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ ಎಂದು ಪೊಲೀಸರು ತಿಳಿಸಿದ್ದಾರೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪೀಣ್ಯಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Next Story