Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಾಲುಬಾಯಿ ಜ್ವರದ ಲಸಿಕಾ ಕಾರ್ಯಕ್ರಮ...

ಕಾಲುಬಾಯಿ ಜ್ವರದ ಲಸಿಕಾ ಕಾರ್ಯಕ್ರಮ ಮುಂದೂಡಲಿ: ಪಶು ವೈದ್ಯಕೀಯ ಸಂಘ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ29 Sept 2020 11:34 PM IST
share

ಬೆಂಗಳೂರು, ಸೆ.29: ರಾಜ್ಯಾದ್ಯಂತ ಅಕ್ಟೋಬರ್ 2 ರಂದು ಹಮ್ಮಿಕೊಂಡಿರುವ ಕಾಲುಬಾಯಿ ಜ್ವರದ ಲಸಿಕಾ ಕಾರ್ಯಕ್ರಮವನ್ನು ಮುಂದೂಡುವಂತೆ ಕರ್ನಾಟಕ ಪಶುವೈದ್ಯಕೀಯ ಸಂಘದ ಮನವಿ ಮಾಡಿದೆ.

ರಾಜ್ಯದಲ್ಲಿ ಎಲ್ಲಾ ಜಿಲ್ಲೆಗಳ ಗ್ರಾಮಾಂತರ ಪ್ರದೇಶದಲ್ಲಿ ಈಗಾಗಲೇ ಚರ್ಮಗಂಟು ರೋಗ ವ್ಯಾಪಕವಾಗಿ ಹರಡಿರುವುದರಿಂದ ಹಾಗೂ ತಜ್ಞರ ಅಭಿಪ್ರಾಯದಂತೆ ರೋಗ ಕಾಣಿಸಿಕೊಂಡ 5 ಕಿ.ಮೀ ಸುತ್ತಮುತ್ತ ಲಸಿಕೆ ಹಾಕಬೇಕಾಗಿದೆ. ಈ ಚರ್ಮಗಂಟು ರೋಗ ವೈರಾಣು ಕಾಯಿಲೆಯಾಗಿದ್ದು, ಕಾಲುಬಾಯಿ ಜ್ವರದ ಲಸಿಕೆ ಹಾಕುವುದರಿಂದ ಜಾನುವಾರುಗಳಿಗೆ ಅಡ್ಡಪರಿಣಾಮ ಉಂಟಾಗುತ್ತದೆ. ಅಲ್ಲದೆ, ಈ ಕಾಯಿಲೆಗೆ ಚಿಕಿತ್ಸೆ ನೀಡಲು ತೆರಳುವ ಪಶುವೈದ್ಯರು ಹಾಗೂ ಸಿಬ್ಬಂದಿಗಳು ಒಂದು ಗ್ರಾಮದಿಂದ ಇನ್ನೊಂದು ಗ್ರಾಮಕ್ಕೆ ತೆರಳಿದ್ದಲ್ಲಿ ಕಾಯಿಲೆಯು ಹೆಚ್ಚಾಗುವ ಸಂಭವಿರುವುದರಿಂದ ಕಾಲುಬಾಯಿ ಜ್ವರದ ಲಸಿಕಾ ಕಾರ್ಯಕ್ರಮವನ್ನು ಮುಂದೂಡಿ ಎಂದು ಸಂಘವು ಸಲಹೆ ನೀಡಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆಯನ್ನು ಬಿಡುಗಡೆ ಮಾಡಿರುವ ಸಂಘದ ಅಧ್ಯಕ್ಷ ಡಾ ಎಸ್.ಸಿ. ಸುರೇಶ್, ಈಗಾಗಲೇ ಟ್ಯಾಗಿಂಗ್ ಸಂದರ್ಭದಲ್ಲಿ ಗ್ರಾಮಸ್ಥರು ಅಸಹಕಾರ ಹಾಗೂ ಕೆಲವೆಡೆ ಬಹಿಷ್ಕಾರ ಮಾಡಿರುವ ಪ್ರಕರಣಗಳು ಹೆಚ್ಚಾಗಿವೆ. ಗ್ರಾಮೀಣ ಪ್ರದೇಶದಲ್ಲಿ ರೈತರಿಗೆ ಕೋವಿಡ್-19 ಕಾಯಿಲೆಯೂ ಹರಡಿರುವುದರಿಂದ ಲಸಿಕಾ ಕಾರ್ಯಕ್ರಮಕ್ಕೆ ರೈತರು ಸಹಕಾರ ನೀಡುವುದು ಕಷ್ಟವಾಗಿರುತ್ತದೆ. ಸೆಪ್ಟೆಂಬರ್ 23 ರಂದು ಇಲಾಖೆಯ ನಿರ್ದೇಶಕರ ನೇತೃತ್ವದಲ್ಲಿ ನಡೆದ ಸಭೆಯಲ್ಲೂ ಕೂಡಾ ರಾಜ್ಯದ ಎಲ್ಲಾ ಜಿಲ್ಲೆಗಳ ಇಲಾಖೆಯ ಉಪನಿರ್ದೇಶಕರಗಳೂ ಕೂಡಾ ಕಾಲುಬಾಯಿ ಜ್ವರದ ಲಸಿಕಾ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ 2 ತಿಂಗಳ ಅವಧಿಗೆ ಮುಂದೂಡುವಂತೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದ್ದಾರೆ.

ಕರ್ನಾಟಕ ಪಶು ವೈದ್ಯಕೀಯ ಸಂಘವು ಸೆಪ್ಟೆಂಬರ್ 27 ರಂದು ಗೂಗಲ್ ಮೀಟ್ ಮೂಲಕ ನಡೆಸಿದ ತುರ್ತು ಕಾರ್ಯಕಾರಿ ಸಮಿತಿಯಲ್ಲಿ ಹಾಜರಿದ್ದ 30 ಜಿಲ್ಲೆಗಳ ಪ್ರತಿನಿಧಿಗಳು, ಮೊದಲು ಚರ್ಮಗಂಟು (ಎಲ್.ಎಸ್.ಡಿ) ನಿಯಂತ್ರಣಕ್ಕೆ ಬರಲು ಸೂಕ್ತ ಕ್ರಮ ಕೈಗೊಳ್ಳಬೇಕು. ಈ ರೋಗ ನಿಯಂತ್ರಣ ಬಂದ ನಂತರ ಕಾಲುಬಾಯಿ ಜ್ವರದ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಬಹುದೆಂದು ಒಕ್ಕೊರಲಿನ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಮಾರ್ಚ್ 2020 ರಲ್ಲಿ ಹಮ್ಮಿಕೊಳ್ಳಬೇಕಾಗಿದ್ದ ಲಸಿಕಾ ಕಾರ್ಯಕ್ರಮವನ್ನು ಲಸಿಕೆ ಸರಬರಾಜು ಮತ್ತು ಟ್ಯಾಗ್‍ಗಳನ್ನು ಸಕಾಲದಲ್ಲಿ ಪೂರೈಸದ ಹಿನ್ನಲೆಯಲ್ಲಿ ಮುಂದೂಡಲ್ಪಟ್ಟಿದೆ. ಈ ಹಂತದಲ್ಲಿ ಜಾನುವಾರುಗಳು ಚರ್ಮಗಂಟು ರೋಗದಿಂದ ಬಳಲುತ್ತಿವೆ. ಹಾಗೇಯೇ ಕೋವಿಡ್ - 19 ಮೂರನೇ ಹಂತ ತಲುಪಿರುವುದರಿಂದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಒತ್ತಡದಲ್ಲಿದ್ದಾರೆ.

ಚರ್ಮಗಂಟು ರೋಗವು ರಾಜ್ಯಾದ್ಯಂತ ವ್ಯಾಪಕವಾಗಿ ಹರಡುತ್ತಿರುವ ವಿಚಾರವಾಗಿ ವಿಜ್ಞಾನಿಗಳ ಜೊತೆ ಸಂಘವು ಚರ್ಚಿಸಿದಾಗ ಚರ್ಮಗಂಟು ರೋಗವು ಸಹ ವೈರಾಣುವಿನಿಂದ ಉತ್ಪತ್ತಿಯಾಗಿದೆ. ಈಗ ನೀಡಬೇಕಾಗಿರುವ ಕಾಲುಬಾಯಿ ಜ್ವರದ ಲಸಿಕೆಯೂ ಸಹ ವೈರಾಣುವಿನಿಂದಲೇ ತಯಾರು ಮಾಡಲಾಗಿದ್ದು, ಲಸಿಕೆ ಮಾಡಿದ ನಂತರ ದೇಹದಲ್ಲಿ ವ್ಯಾಕ್ಸಿನೇಷನ್ ಸ್ಟ್ರೆಸ್ ಉಂಟಾಗುತ್ತದೆ.

ಈಗಾಗಲೇ ಚರ್ಮಗಂಟು ರೋಗದ ವೈರಾಣು ದೇಹದಲ್ಲಿದ್ದು, ಒಟ್ಟಿಗೆ ಸೇರಿ ಜಾನುವಾರುಗಳಲ್ಲಿ ರೋಗಗಳನ್ನು ಉಲ್ಭಣಗೊಳಿಸುತ್ತದೆ. ಇದರಿಂದಾಗಿ ರಾಸುಗಳು ಬಹಳ ಬೇಗ ಮರಣ ಹೊಂದುವ ಸಾಧ್ಯತೆ ಇದೆ. ನಾವು ರೋಗಗಳಿಂದ ರಕ್ಷಿಸಲು ನೀಡುತ್ತಿರುವ ಲಸಿಕೆಯೇ ರೈತರಿಗೆ ಮಾರಣಾಂತಿಕವಾಗಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಪಶುವೈದ್ಯರು ರೈತರಿಗೆ ತುರ್ತು ಚಿಕಿತ್ಸೆ ಉಳಿದ ಸೇವೆಗಳನ್ನು ಸದಾ ನೀಡುತ್ತಲೇ ಬಂದಿದ್ದಾರೆ. ಲಸಿಕೆ ಮಾಡಲು ಕಟಿಬದ್ದರಾಗಿದ್ದೇವೆ. ಇಂತಹ ದುಸ್ತರ ಪರಿಸ್ಥಿತಿಯನ್ನು ಪರಿಗಣಿಸಿ, ಚರ್ಮಗಂಟು ರೋಗ (ಎಲ್.ಎಸ್.ಡಿ) ಖಾಯಿಲೆಯನ್ನು ನಿಯಂತ್ರಿಸಲು ಕನಿಷ್ಠ 2 ತಿಂಗಳ ಕಾಲಾವಕಾಶ ಬೇಕಾಗಿದೆ. ಈ ಕಾಯಿಲೆಯು ಹತೋಟಿಗೆ ಬಂದ ನಂತರ ಕಾಲುಬಾಯಿ ಜ್ವರದ ಲಸಿಕಾ ಕಾರ್ಯಕ್ರಮವನ್ನು ಕೈಗೆತ್ತಿಕೊಳ್ಳಲು ಸಮಸ್ತ ಪಶುವೈದ್ಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಈ ಹಿನ್ನಲೆಯಲ್ಲಿ ಲಸಿಕಾ ಕಾರ್ಯಕ್ರಮವನ್ನು 2 ತಿಂಗಳ ಅವಧಿಕಗೆ ಮುಂದೂಡಲು ಸಂಘವು ಮನವಿ ಮಾಡಿದೆ. ಒಂದು ವೇಳೆ ಸರ್ಕಾರವು ಸಂಘದ ಮನವಿಯನ್ನು ಪರಿಗಣಿಸದೇ ನಿಗದಿಪಡಿಸಿದ ದಿನದಂದೇ ಲಸಿಕಾ ಕಾರ್ಯಕ್ರಮ ಕೈಗೊಂಡರೆ ರಾಜ್ಯದ ಯಾವುದೇ ಪಶುವೈದ್ಯರು ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ ಎಂದು ಸಂಘ ಸ್ಪಷ್ಟಪಡಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X