Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಭೆ ಸಮಾರಂಭಗಳಲ್ಲಿ 50ಕ್ಕಿಂತ ಹೆಚ್ಚು ಜನ...

ಸಭೆ ಸಮಾರಂಭಗಳಲ್ಲಿ 50ಕ್ಕಿಂತ ಹೆಚ್ಚು ಜನ ಸೇರಿದರೆ ಆಯೋಜಕರ ವಿರುದ್ಧ ಕ್ರಮ: ಸಚಿವ ಸುಧಾಕರ್

''ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ಧರಿಸದವರಿಗೆ 1 ಸಾವಿರ ರೂ. ದಂಡ''

ವಾರ್ತಾಭಾರತಿವಾರ್ತಾಭಾರತಿ30 Sept 2020 8:22 PM IST
share
ಸಭೆ ಸಮಾರಂಭಗಳಲ್ಲಿ 50ಕ್ಕಿಂತ ಹೆಚ್ಚು ಜನ ಸೇರಿದರೆ ಆಯೋಜಕರ ವಿರುದ್ಧ ಕ್ರಮ: ಸಚಿವ ಸುಧಾಕರ್

ಬೆಂಗಳೂರು, ಸೆ.30: ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ಧರಿಸದವರಿಗೆ ದಂಡ ಪ್ರಮಾಣವನ್ನು ನಗರ ಪ್ರದೇಶದಲ್ಲಿ 1 ಸಾವಿರ ರೂ. ಹಾಗೂ ಗ್ರಾಮೀಣ ಪ್ರದೇಶದಲ್ಲಿ 500 ರೂ.ಗೆ ಹೆಚ್ಚಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಬುಧವಾರ ವಿಧಾನಸೌಧದಲ್ಲಿ ಅಧಿಕಾರಿಗಳೊಂದಿಗೆ ನಡೆಸಿದ ಉನ್ನತ ಮಟ್ಟದ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಈ ಸಂಬಂಧ ಗುರುವಾರ ಅಧಿಕೃತ ಆದೇಶ ಹೊರ ಬೀಳಲಿದೆ, ಪೂರ್ತಿಯಾಗಿ ಮಾಸ್ಕ್ ಧರಿಸದರಿಗೂ ದಂಡ ಅನ್ವಯವಾಗಲಿದೆ ಎಂದು ತಿಳಿಸಿದರು.

ಇತ್ತೀಚಿನ ದಿನಗಳಲ್ಲಿ ಮಾಸ್ಕ್ ಧರಿಸದೇ ನಿರ್ಲಕ್ಷ್ಯ ತೋರುವವರ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಈಗಿರುವ 200 ರೂ. ದಂಡವನ್ನು ಹೆಚ್ಚಿಸಲಾಗಿದೆ. ಆಯಾ ಪೊಲೀಸ್ ಠಾಣಾ ವ್ಯಾಪ್ತಿಗೆ ಗುರಿ ನಿಗದಿ ಮಾಡಿ, ದಂಡ ವಸೂಲು ಮಾಡಲಾಗುವುದು ಎಂದು ಸುಧಾಕರ್ ಹೇಳಿದರು.

ಸಾಮಾಜಿಕ, ಧಾರ್ಮಿಕ ಹಾಗೂ ರಾಜಕೀಯ ಸಮಾವೇಶ, ಮದುವೆ ಇತರೆ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಗರಿಷ್ಠ 50 ಜನರು ಸೇರಲು ಮಾತ್ರ ಅವಕಾಶವಿರಲಿದೆ. ಹೆಚ್ಚು ಜನ ಸೇರಿದರೆ ಆಯೋಜಕರು ಅಥವಾ ಆ ಸಂಸ್ಥೆ ಮಾಲಕರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಅವರು ತಿಳಿಸಿದರು.

ಮಾರುಕಟ್ಟೆ, ಮಾಲ್, ಇತರೆ ಸಾರ್ವಜನಿಕ ಸ್ಥಳದಲ್ಲಿ 5 ಕ್ಕೂ ಹೆಚ್ಚು ಜನ ಗುಂಪುಗೂಡಿ ನಿಲ್ಲುವಂತಿಲ್ಲ. ಇವರ ನಡುವೆ ಕನಿಷ್ಠ 6 ಅಡಿ ಅಂತರವಿರಬೇಕು. ಇಲ್ಲವಾದರೆ ಆ ಸಂಸ್ಥೆ ಮಾಲಕರಿಗೆ ದಂಡ ಪ್ರಯೋಗ ಮಾಡಲಾಗುವುದು ಎಂದು ಅವರು ಹೇಳಿದರು.

ಕೊರೋನ ಜಾಗೃತಿ ಸಂಬಂಧ ಅರಿವು ಮೂಡಿಸುವ ನಿಟ್ಟಿನಲ್ಲಿ ವಿಶೇಷ ಕಾರ್ಯಯೋಜನೆ ರಚಿಸಲಾಗಿದೆ. ರಾಜಕಾರಣಿಗಳು, ಕ್ರೀಡೆ, ಸಿನಿ ತಾರೆಯರು, ಧಾರ್ಮಿಕ ಗುರುಗಳ ಮೂಲಕ ಮಾಸ್ಕ್ ಬಗ್ಗೆ ಕೊರೋನ ನಿಯಂತ್ರಣ ಮಾಡುವ ಸಣ್ಣ ತುಣುಕುಗಳನ್ನು ವಿಡಿಯೋ ಮೂಲಕ ತಲುಪಿಸಲು ಕ್ರಮ. ಜೊತೆಗೆ ಸ್ವಯಂ ಸೇವಾ ಸಂಘಟಕರು, ಲಯನ್ಸ್ ಕ್ಲಬ್, ರೋಟರಿ ಕ್ಲಬ್, ವೆಲ್‍ಫೇರ್ ಅಸೋಸಿಯೇಷನ್ ಎಲ್ಲರೂ ಸರಕಾರದೊಂದಿಗೆ ಕೈ ಜೋಡಿಸಿದರೆ ನಿರ್ವಹಣೆ ಹೆಚ್ಚು ಪ್ರಬಲವಾಗಿ ಮಾಡಬಹುದು ಎಂದು ಅವರು ಹೇಳಿದರು.

ರಾಜ್ಯದಲ್ಲಿ ಒಟ್ಟು 15 ಜಿಲ್ಲೆಗಳಲ್ಲಿ ಶೇ.10ಕ್ಕಿಂತ ಹೆಚ್ಚು ಪಾಸಿಟಿವ್ ಪ್ರಕರಣ ದಾಖಲಾಗುತ್ತಿದೆ, ಈ ಪೈಕಿ ಇಂದು ಮೈಸೂರು, ಹಾಸನ, ದಕ್ಷಿಣ ಕನ್ನಡ, ತುಮಕೂರು, ಶಿವಮೊಗ್ಗ ಮತ್ತು ಕೊಪ್ಪಳ ಏಳು ಜಿಲ್ಲಾಧಿಕಾರಿ, ಡಿಎಚ್‍ಒ ಅಧಿಕಾರಿಗಳ ಜೊತೆ ವಿಡಿಯೋ ಸಂವಾದ ನಡೆಸಿ ಪಾಸಿಟಿವ್ ಪ್ರಮಾಣವನ್ನು ಕಡಿಮೆ ಮಾಡಲು ತೆಗೆದುಕೊಳ್ಳಬೇಕಾದ ಮಾರ್ಗಸೂಚಿಗಳನ್ನು ನೀಡಿದ್ದೇವೆ ಎಂದು ಸುಧಾಕರ್ ತಿಳಿಸಿದರು.

ಮುಂದಿನ ದಿನಗಳಲ್ಲಿ ಉಳಿದ ಜಿಲ್ಲೆಗಳ ಜೊತೆ ಸಭೆ ನಡೆಸಲಾಗುವುದು. ಶೇ.17 ರಷ್ಟು ಪಾಸಿಟಿವ್ ಪ್ರಮಾಣ ಮೈಸೂರಿನಲ್ಲಿದ್ದು ರಾಜ್ಯದಲ್ಲೆ ಎರಡನೇ ಸ್ಥಾನದಲ್ಲಿದೆ. ಸಾರಿಗೆ ವ್ಯವಸ್ಥೆಯಾದ ಬಸ್‍ಗಳಲ್ಲಿ ಶೇ.50 ರಷ್ಟು ಮಾತ್ರ ಪ್ರಯಾಣಿಸಲು ಅವಕಾಶವಿದೆ, ಮಾಸ್ಕ್ ಇಲ್ಲದವರನ್ನು ಬಸ್ ಒಳಗೆ ಪ್ರವೇಶ ನೀಡದಂತೆ ಕಂಡೆಕ್ಟರ್ ಗಳಿಗೆ ಸೂಚಿಸಲಾಗುವುದು ಎಂದು ಅವರು ಹೇಳಿದರು.

ಎಲ್ಲ ಸರಕಾರಿ ಕಚೇರಿಗಳ ಕೆಲಸಗಾರರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಇಲ್ಲವಾದರೆ ಕಚೇರಿ ಪ್ರವೇಶ ವಿರುವುದಿಲ್ಲ. ಇದನ್ನು ಅತ್ಯಂತ ಕಠಿಣ ಹಾಗೂ ಶಿಸ್ತಾಗಿ ಪಾಲನೆ ಮಾಡಲಾಗುತ್ತೆ ಎಂದು ಸುಧಾಕರ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X