ಉಡುಪಿ; ಜಿಲ್ಲಾ ಶಿಕ್ಷಣ ಸಂಪನ್ಮೂಲ ಕೇಂದ್ರದಿಂದ ನಿವೃತ್ತ ಡಿಡಿಪಿಐಗೆ ಸನ್ಮಾನ
ಉಡುಪಿ, ಅ.1: ಜಿಲ್ಲೆಯಲ್ಲಿ ಹಲವು ಶೈಕ್ಷಣಿಕ ಸುಧಾರಣೆ ಜೊತೆಗೆ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಮತ್ತು ಮಕ್ಕಳ ಕಲಿಕಾ ಗುಣಮಟ್ಟವನ್ನು ಹೆಚ್ಚಿಸುವಲ್ಲಿ ಶ್ರಮಿಸಿದ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿವೃತ್ತ ಉಪನಿರ್ದೇಶಕ ಶೇಷಶಯನ ಕಾರಿಂಜ ಇವರನ್ನು ಜಿಲ್ಲಾ ಶಿಕ್ಷಣ ಸಂಪನ್ಮೂಲ ಕೇಂದ್ರದ ವತಿಯಿಂದ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಉಡುಪಿ ಡಯಟ್ನ ಪ್ರಾಂಶುಪಾಲ ವೇದಮೂರ್ತಿ, ಹಿರಿಯ ಉಪನ್ಯಾಸಕ ಅಶೋಕ್ ಕಾಮತ್, ಜಿಲ್ಲಾ ಶಿಕ್ಷಣ ಸಂಪನ್ಮೂಲ ಕೇಂದ್ರದ ಸದಸ್ಯೆ ಸುಲೋಚನ ಕೊಡವೂರು, ಉಪಾಧ್ಯಕ್ಷ ತಿಲೋತ್ತಮ ನಾಯಕ್ ಮುಂತಾದವರು ಉಪಸ್ಥಿತರಿದ್ದರು.
Next Story