ದ.ಕ. ಜಿಲ್ಲೆ : 493 ಮಂದಿಗೆ ಕೊರೋನ ಪಾಸಿಟಿವ್

ಮಂಗಳೂರು, ಅ.1: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ 493 ಮಂದಿಯಲ್ಲಿ ಕೊರೋನ ಪಾಸಿಟಿವ್ ದೃಢಪಟ್ಟಿದೆ. ಇದೇ ವೇಳೆ 11 ಮಂದಿ ಸಾವನ್ನಪ್ಪಿದ್ದು, 287 ಮಂದಿ ಕೊರೋನ ಸೋಂಕಿನಿಂದ ಮುಕ್ತರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೆ 1,63,915 ಮಂದಿಯ ಗಂಟಲ ದ್ರವ ಮಾದರಿ ಸಂಗ್ರಹಿಸಲಾಗಿದ್ದು, 23,439 ಮಂದಿಗೆ ಕೊರೋನ ಪಾಸಿಟಿವ್ ಇರುವುದು ಪತ್ತೆಯಾಗಿತ್ತು. 14,0476 ಮಂದಿಯ ವರದಿ ನೆಗೆಟಿವ್ ಆಗಿತ್ತು. ಜಿಲ್ಲೆಯಲ್ಲಿ ಇದುವರೆಗೆ 17,088 ಮಂದಿ ಕೊರೋನ ಸೋಂಕಿ ನಿಂದ ಮುಕ್ತರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ ಕೊರೋನ ಸೋಂಕಿತ 545 ಮಂದಿ ಸಾವನ್ನಪ್ಪಿದ್ದು, ಸದ್ಯ ಆಸ್ಪತ್ರೆಯಲ್ಲಿ 5,806 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
4.41 ಲಕ್ಷ ದಂಡ ವಸೂಲಿ: ಜನತೆ ಸುರಕ್ಷಿತ ಅಂತರ ಕಾಯ್ದುಕೊಳ್ಳಬೇಕು ಮತ್ತು ಕಡ್ಡಾಯವಾಗಿ ಮಾಸ್ಕ್ ಬಳಸಬೇಕು ಎಂದು ಜಿಲ್ಲಾಡಳಿತ ಸ್ಪಷ್ಟ ಸೂಚನೆ ನೀಡಿದೆ. ಮಾಸ್ಕ್ ಧರಿಸದವರ ವಿರುದ್ಧ ಕ್ರಮ ಕೈಗೊಳ್ಳುತ್ತಿದೆ. ಜಿಲ್ಲೆಯಲ್ಲಿ ಇದುವರೆಗೆ 3,246 ಮಾಸ್ಕ್ ಉಲ್ಲಂಘನೆ ಪ್ರಕರಣ ಪತ್ತೆಯಾಗಿದ್ದು, 4,41,679 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಡಳಿತ ಆರೋಗ್ಯ ಬುಲೆಟಿನ್‌ನಲ್ಲಿ ಮಾಹಿತಿ ನೀಡಿದೆ.





