Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವೆನ್ಲಾಕ್ ಆಸ್ಪತ್ರೆಗೆ ಬರುವ ರೋಗಿಗಳಿಗೆ...

ವೆನ್ಲಾಕ್ ಆಸ್ಪತ್ರೆಗೆ ಬರುವ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡಿ: ದ.ಕ. ಜಿಲ್ಲಾಧಿಕಾರಿ

ಆರೋಗ್ಯ ರಕ್ಷಾ ಸಮಿತಿಯ ಕಾರ್ಯಕಾರಿ ಸಮಿತಿ ಸಭೆ

ವಾರ್ತಾಭಾರತಿವಾರ್ತಾಭಾರತಿ1 Oct 2020 10:52 PM IST
share
ವೆನ್ಲಾಕ್ ಆಸ್ಪತ್ರೆಗೆ ಬರುವ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡಿ: ದ.ಕ. ಜಿಲ್ಲಾಧಿಕಾರಿ

ಮಂಗಳೂರು, ಅ.1: ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಬರುವ ರೋಗಿಗಳಿಗೆ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸುವುದರ ಜೊತೆಗೆ ಉತ್ತಮ ಚಿಕಿತ್ಸೆ ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಸೂಚಿಸಿದ್ದಾರೆ.

ಜಿಲ್ಲಾ ಶಸ್ತ್ರಚಿಕಿತ್ಸಕರು ಮತ್ತು ಅಧೀಕ್ಷಕರ ಕೊಠಡಿಯಲ್ಲಿ ಗುರುವಾರ ನಡೆದ ಆರೋಗ್ಯ ರಕ್ಷಾ ಸಮಿತಿಯ ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬಡರೋಗಿಗಳು ಹೆಚ್ಚಾಗಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ಬರುತ್ತಾರೆ. ಬಂದಂತಹ ರೋಗಿಗಳಿಗೆ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸಿ ಜೊತೆಗೆ ರೋಗಿಗಳನ್ನು ಮಾನವೀಯತೆಯ ನೆಲೆಯಲ್ಲಿ ಪ್ರೀತಿ, ವಿಶ್ವಾಸದಿಂದ ನೋಡಿಕೊಳ್ಳುವುದರೊಂದಿಗೆ ಚಿಕಿತ್ಸೆ ನೀಡಿದರೆ ಬೇಗ ಗುಣಮುಖರಾಗುತ್ತಾರೆ ಎಂದರು.

ವೈದ್ಯಕೀಯ ನೆರವನ್ನು ಕೋರಿ ಬಂದಂತಹ ರೋಗಿಗಳಿಗೆ ಆಸ್ಪತ್ರೆಗಳಲ್ಲಿಯೇ ಉಚಿತ ಔಷಧಿ ಸಿಗುವಂತೆ ನೋಡಿಕೊಳ್ಳಬೇಕು. ಹೊರಗಡೆ ಔಷಧಿ ಪಡೆಯಲು ಚೀಟಿ ನೀಡಬಾರದು. ಅವರಿಗೆ ಕಾಲಕಾಲಕ್ಕೆ ಅಗತ್ಯ ಇರುವ ಔಷಧಿಗಳ ದಾಸ್ತಾನುಗಳು ಆಸ್ಪತ್ರೆಗಳಲ್ಲಿ ಇರುವಂತೆ ನೋಡಿಕೊಳ್ಳಬೇಕು ಎಂದರು.

ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮ ಅಭಿಯಾನದಡಿಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವಾಗ ಸಂಬಂಧಪಟ್ಟ ಇಲಾಖಾ ಮುಖ್ಯಸ್ಥರಿಂದ ಅಭಿಪ್ರಾಯಗಳನ್ನು ಪಡೆದು ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಳ್ಳಬೇಕು ಎಂದರು.

ಜಿಲ್ಲಾಸ್ಪತ್ರೆಗಳನ್ನು ಬೆಂಕಿ ಅವಘಡಗಳಿಂದ ತಪ್ಪಿಸಲು ಅಗತ್ಯ ಇರುವ ಎಲ್ಲ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಪ್ರತೀ ಆರು ತಿಂಗಳಿಗೊಮ್ಮೆ ಅಗ್ನಿಶಾಮಕದಳದ ಸೇಫ್ಟಿ ಅಧಿಕಾರಿಯಿಂದ ಫೈರ್ ಸೇಫ್ಟಿಯ ಬಗ್ಗೆ ತಪಾಸಣೆ ನಡೆಸಿ ಅವರು ನೀಡುವ ವರದಿ ಆಧರಿಸಿ ಫೈರ್ ಸೇಫ್ಟಿ ಕಾರ್ಯ ಗಳನ್ನು ಕೈಗೊಳ್ಳಬೇಕು ಎಂದರು.

ಆಸ್ಪತ್ರೆಗೆ ತುರ್ತಾಗಿ ಅವಶ್ಯವಿರುವ ಪರಿಕರ ಮತ್ತು ಔಷಧಿ ಖರೀದಿಸುವಾಗ ಸರಕಾರದ ನಿಯಮಾನುಸಾರ ಸರಕಾರದ ನಿಯಮಗಳನ್ನು ಚಾಚು ತಪ್ಪದೇ ಪಾಲಿಸಿ ಖರೀದಿ ಮಾಡಬೇಕೆಂದು ಸೂಚನೆ ನೀಡಿದರು.

ಜಿಲ್ಲಾಸ್ಪತ್ರೆಯ ಪ್ರತೀ ವರ್ಷದ ಆದಾಯವನ್ನು ಕ್ರೋಡೀಕರಿಸುವುದರೊಂದಿಗೆ ಆಸ್ಪತ್ರೆಗೆ ಅಗತ್ಯವಿರುವ ಬಜೆಟ್‌ನ್ನು ತಯಾರಿಸುವುದರೊಂದಿಗೆ ಹೆಚ್ಚುವರಿ ಹಣವನ್ನು ಆಸ್ಪತ್ರೆಯ ಅಭಿವೃದ್ಧಿ ಕಾರ್ಯಗಳಿಗೆ ವಿನಿಯೋಗಿಸಬೇಕೆಂದು ಸೂಚನೆ ನೀಡಿದರು.

ಮಂಗಳೂರು ಸ್ಮಾರ್ಟ್ ಸಿಟಿಯಿಂದ ಆಸ್ಪತ್ರೆಗಳನ್ನು ಮೇಲ್ದರ್ಜೆಗೆ ಏರಿಸುವ ಸಂಬಂಧ ಪ್ರತ್ಯೇಕ ಸಭೆಯನ್ನು ಮುಂದಿನ ದಿನಗಳಲ್ಲಿ ಕರೆಯುವುದರೊಂದಿಗೆ ಚರ್ಚಿಸಿ ಅಗತ್ಯ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳವಂತೆ ಸೂಚನೆ ನೀಡಿದರು.

ಜಿಲ್ಲಾಸ್ಪತ್ರೆಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ನೇಮಕಗೊಂಡು ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ ಇಎಸ್‌ಐ, ಪ್ರಾವಿಡೆಂಟ್ ಫಂಡ್ ಒಳಗೊಂಡಂತೆ ಟೆಂಡರ್‌ನಲ್ಲಿ ನಿಗದಿಪಡಿಸಿರುವ ವೇತನವನ್ನು ತಲುಪುವಂತೆ ನೋಡಿಕೊಳ್ಳಬೇಕು.

ಕೆಲವು ಅರ್ಹ ಬಡತನ ರೇಖೆಗಿಂತ ಕೆಳಗಿರುವವರು ಚಿಕಿತ್ಸೆಗಾಗಿ ಬಂದಂತಹ ಸಂದರ್ಭ ಬಿಪಿಎಲ್ ಕಾರ್ಡ್ ಹೊಂದಿಲ್ಲ ಎಂಬ ಕಾರಣಕ್ಕೆ ಚಿಕಿತ್ಸೆಯಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು. ಅವರ ನೆರವಿಗೆ ಸಮಾಲೋಚಕರನ್ನು ನೇಮಿಸಿಕೊಳ್ಳಬೇಕು.
ಸಭೆ ಯಲ್ಲಿ ಡಿಎಚ್‌ಒ ಡಾ.ರಾಮಚಂದ್ರ ಬಾಯರಿ, ಕೆಎಂಸಿ ಡೀನ್ ಎಂ.ವಿ. ಪ್ರಭು, ವೆನ್‌ಲಾಕ್ ಜಿಲ್ಲಾಸ್ಪತ್ರೆಯ ಜಿಲ್ಲಾ ಶಸ್ತ್ರ ಚಿಕಿತ್ಸಕರು ಹಾಗೂ ಅಧೀಕ್ಷಕರು ಡಾ.ಸದಾಶಿವ ಮತ್ತಿತರರು ಉಪಸ್ಥಿರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X