Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಮ್ಮ ರಾಜ್ಯದ ಹಣ ಬೇರೆ ರಾಜ್ಯದವರ...

ನಮ್ಮ ರಾಜ್ಯದ ಹಣ ಬೇರೆ ರಾಜ್ಯದವರ ಪಾಲಾಗುತ್ತಿದೆ: ಶಾಸಕ ಸಾ.ರಾ.ಮಹೇಶ್ ಆರೋಪ

ವಾರ್ತಾಭಾರತಿವಾರ್ತಾಭಾರತಿ1 Oct 2020 11:09 PM IST
share
ನಮ್ಮ ರಾಜ್ಯದ ಹಣ ಬೇರೆ ರಾಜ್ಯದವರ ಪಾಲಾಗುತ್ತಿದೆ: ಶಾಸಕ ಸಾ.ರಾ.ಮಹೇಶ್ ಆರೋಪ

ಮೈಸೂರು,ಅ.1: ನಮ್ಮ ರಾಜ್ಯದ ಹಣ ಬೇರೆ ರಾಜ್ಯದವರ ಪಾಲಾಗುತ್ತಿದೆ. ಇದರ ಹಿಂದೆ ಯಾರಿದ್ದಾರೆ ಎಂಬ ಬಗ್ಗೆ ತನಿಖೆಯಾಗಬೇಕು ಎಂದು ಶಾಸಕ ಸಾ.ರಾ.ಮಹೇಶ್ ಮತ್ತೊಮ್ಮೆ ಮೈಸೂರಿನ ನೂತನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ನೇರ ಆರೋಪ ಮಾಡಿ ಸಂಬಂಧಪಟ್ಟ ದಾಖಲೆಗಳನ್ನು ಬಿಡುಗಡೆ ಮಾಡಿದರು.

ತಮ್ಮ ಕಚೇರಿಯಲ್ಲಿ ಗುರುವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಶಾಸಕ ಸಾ.ರಾ.ಮಹೇಶ್, ಆಂಧ್ರ ಪ್ರದೇಶದ ತಿರುಪತಿಯಲ್ಲಿ ಮೈಸೂರಿನ ಮಹಾರಾಜರು ಅಂದು ಕರ್ನಾಟಕ ಸರ್ಕಾರಕ್ಕೆ ನೀಡಿದ 7.05 ಎಕರೆ ಜಾಗದಲ್ಲಿ ವಿಶಾಲವಾದ ಸಂಕೀರ್ಣ ನಿರ್ಮಿಸಲು ರಾಜ್ಯ ಸರ್ಕಾರ 200 ಕೋಟಿ ಹಣ ಬಿಡುಗಡೆ ಮಾಡಿದೆ. ಈ ಕಟ್ಟಡ ಕಾಮಗಾರಿ ನಿರ್ಮಾಣ ಮತ್ತು ನಿರ್ವಹಣೆಯನ್ನು ಟಿಟಿಡಿ ವಹಿಸಿದೆ. ಇದರ ಜೊತೆಗೆ ಆರ್ಕಿಟೆಕ್ಟ್ ಲ್ಯಾಂಡ್ ಇಂಟೀರಿಯರ್ ವಿನ್ಯಾಸದ ವಿನ್ಯಾಸದ ಕೆಲಸವನ್ನು ಮೆ.ಗಾಯಿತ್ತಿ ಅಂಡ್ ನಮಿತ್ ಆರ್ಕಿಟೆಕ್ ಅವರಿಗೆ ನೀಡಲಾಗಿದೆ. ಇದಕ್ಕಾಗಿಯೇ 10 ಕೋಟಿ ರೂ. ನೀಡಲಾಗಿದ್ದು, ಪಾರದರ್ಶಕ ಕಾಯ್ದೆ 1998ರ ಅನ್ವಯ ವಿನಾಯಿತಿ ನೀಡಲಾಗಿದೆ. ಇದರ ಹಿಂದೆ ಅಂದಿನ ಮುಜರಾಯಿ ಇಲಾಖೆಯ ಆಯುಕ್ತರಾಗಿದ್ದ ಈಗಿನ ಮೈಸೂರು ಜಿಲ್ಲಾಧಿಕಾರಿಯಾಗಿರುವ ರೋಹಿಣಿ ಸಿಂಧೂರಿ ಅವರ ಪಾತ್ರ ಇದೆ ಎಂದು ಆರೋಪಿಸಿದ ಶಾಸಕ ಸಾ.ರಾ.ಮಹೇಶ್, ಹಾಗಾದರೆ ಈ 10 ಕೋಟಿ ಹಣ ಎಲ್ಲಿಗೆ ಹೋಗಿದೆ? ಇದರಲ್ಲಿ ಯಾರ ಕೈವಾಡ ಇದೆ ಎಂಬುದರ ಬಗ್ಗೆ ತನಿಖೆ ಮಾಡಬೇಕೆಂದು ಒತ್ತಾಯಿಸಿದರು.

ಮಹಾಮಸ್ತಾಕಾಭಿಷೇಕ ಕಾಮಗಾರಿಗಾಗಿ 175 ಕೋಟಿ ಹಣ ಬಿಡುಗಡೆಯಾಗಿತ್ತು. ಆಗ ರೋಹಿಣಿ ಸಿಂಧೂರಿ ಅವರು ಹಾಸನದ ಜಿಲ್ಲಾಧಿಕಾರಿಯಾಗಿದ್ದರು. ಆ ಸಂದರ್ಭದಲ್ಲಿ ನಡೆದ ಹಗರಣದ ದಾಖಲೆಗಳನ್ನು ಶೀಘ್ರದಲ್ಲೇ ಬಿಡುಗಡೆ ಮಾಡುವುದಾಗಿ ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.

ಕರ್ನಾಟಕ ರಾಜ್ಯದಲ್ಲಿ ಈಗ ವರ್ಗಾವಣೆ ದಂಧೆಯೇ ನಡೆಯುತ್ತಿದೆ. ಒಂದು ವರ್ಷಕ್ಕೆ ಒಬ್ಬ ಇನ್ಸ್‍ಪೆಕ್ಟರ್ ಒಂದು ಕಡೆಯಿಂದ ಮತ್ತೊಂದು ಕಡೆಗೆ ವರ್ಗಾವಣೆ ಆಗಬೇಕಾದರೆ 20 ಲಕ್ಷ ರೂ. ಲಂಚ ನೀಡಬೇಕು ಎಂದು ನನ್ನ ಬಳಿಯೇ ಬಂದು ಹೇಳುತ್ತಾರೆ. ಇನ್ನು ನಾವು ಯಾವ ರೀತಿ ಕೆಲಸ ಮಾಡಬೇಕು ಎಂದು ಅಸಹಾಯಕತೆ ವ್ಯಕ್ತಪಡಿಸುತ್ತಾರೆ. ಈ ರೀತಿ ಕರ್ನಾಟಕದಲ್ಲಿ ವರ್ಗಾವಣೆ ದಂಧೆಯೇ ನಡೆಯುತ್ತಿದೆ ಎಂದು ಶಾಸಕ ಸಾ.ರಾ.ಮಹೇಶ್ ಆರೋಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X