Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉತ್ತರ ಪ್ರದೇಶದಲ್ಲಿ ಪ್ರಜಾತಂತ್ರ...

ಉತ್ತರ ಪ್ರದೇಶದಲ್ಲಿ ಪ್ರಜಾತಂತ್ರ ವ್ಯವಸ್ಥೆ ಅಪಾಯದಲ್ಲಿ: ರಮಾನಾಥ ರೈ

ರಾಷ್ಟ್ರಪತಿ ಆಡಳಿತಕ್ಕೆ ಕಾಂಗ್ರೆಸ್ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ2 Oct 2020 5:50 PM IST
share
ಉತ್ತರ ಪ್ರದೇಶದಲ್ಲಿ ಪ್ರಜಾತಂತ್ರ ವ್ಯವಸ್ಥೆ ಅಪಾಯದಲ್ಲಿ: ರಮಾನಾಥ ರೈ

ಮಂಗಳೂರು, ಅ.2: ಉತ್ತರ ಪ್ರದೇಶದಲ್ಲಿ ಹಾಲಿ ಸರಕಾರ ಅಧಿಕಾರದ ಅವಧಿಯಲ್ಲಿ ಮಹಿಳಾ ದೌರ್ಜನ್ಯ ಪ್ರಕರಣಗಳು ಹೆಚ್ಚಾಗಿವೆೆ. ಇಂತಹ ಅಪಾಯಕಾರಿ ಬೆಳವಣಿಗೆಯ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೆ ತರಬೇಕು ಎಂದು ಕಾಂಗ್ರೆಸ್ ಆಗ್ರಹಿಸುತ್ತದೆ ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಬಿ.ರಮಾನಾಥ ರೈ ಹೇಳಿದ್ದಾರೆ.

 ನಗರದಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರ ಪ್ರದೇಶದ ಹಾಥರಸ್‌ನಲ್ಲಿ ದೌರ್ಜನ್ಯಕ್ಕೀಡಾದ ಯುವತಿ ಕೊನೆಯುಸಿರಿನ ಸಂದರ್ಭ ನೀಡಿದ ಹೇಳಿಕೆಗೆ ತದ್ವಿರುದ್ಧವಾದ ಉನ್ನತ ಪೊಲೀಸ್ ಅಧಿಕಾರಿಯ ಹೇಳಿಕೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಳಂಕ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹಾಥರಸ್‌ನಲ್ಲಿ ದಲಿತ ಯುವತಿಯ ಸಾಮೂಹಿಕ ಅತ್ಯಾಚಾರ-ಹತ್ಯೆ ಪ್ರಕರಣದಲ್ಲಿ ಹಾಗೂ ಬಳಿಕ ಮೃತ ದೇಹವನ್ನು ಕುಟುಂಬದವರನ್ನು ಬಲವಂತವಾಗಿ ಹೊರಗಿಟ್ಟು ಪೊಲೀಸರೇ ಸುಟ್ಟು ಹಾಕಿದ ಅವಮಾನಕಾರಿ ಹಾಗೂ ಭಯಾನಕ ಘಟನೆಯ ಹಿನ್ನೆಯಲ್ಲಿ ಯೋಗಿ ಆದಿತ್ಯನಾಥ ರವರ ನೇತೃತ್ವದ ಸರಕಾರ ತಕ್ಷಣ ರಾಜೀನಾಮೆ ನೀಡಬೇಕಿತ್ತು. ಆದರೆ ಸರಕಾರ ಆರೋಪಿಗಳ ಪರ ನಿಂತು ನಿಂತಿದೆ. ಸಂತ್ರಸ್ತರ ಕುಟುಂಬಸ್ಥರಿಗೆ ಸಾಂತ್ವಾನ ಹೇಳಲು ತೆರಳಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ತಡೆದು ಬಂಧಿಸಿರುವುದು ಸೇರಿದಂತೆ ಒಟ್ಟು ಆಡಳಿತ ನಿರ್ವಹಣೆಯನ್ನು ಗಮನಿಸಿದಾಗ ಉತ್ತರ ಪ್ರದೇಶದಲ್ಲಿ ರಾಷ್ಟ್ರಪತಿ ಆಡಳಿತ ಅನಿವಾರ್ಯ ಎಂದು ರೈ ಅಭಿಪ್ರಾಯಿಸಿದರು.

ಕರ್ನಾಟಕದಲ್ಲಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ತಮ್ಮ ತಪ್ಪುಗಳನ್ನು ಮುಚ್ಚಿಹಾಕಲು ಸುದ್ದಿವಾಹಿನಿಗಳನ್ನು ಬಂದ್ ಮಾಡಿಸುತ್ತಿರುವುದು ಖಂಡನೀಯ ಎಂದು ರಮಾನಾಥ ರೈ ಹೇಳಿದರು.

ಜಿಲ್ಲಾದ್ಯಂತ ಕಾಂಗ್ರೆಸ್‌ನಿಂದ ಪ್ರತಿಭಟನೆ: 
ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಮಾತನಾಡಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ತಡೆದು ಅವರನ್ನು ಕಾನೂನುಬಾಹಿರವಾಗಿ ಬಂಧಿಸಿರುವುದು ಹಾಗೂ ಉತ್ತರ ಪ್ರದೇಶದಲ್ಲಿ ದಲಿತ ಯುವತಿಯ ಬರ್ಬರ ಹತ್ಯೆಯನ್ನು ಖಂಡಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ವಿವಿಧೆಡೆ ಪ್ರತಿಭಟನೆ ಹಮ್ಮಿಕೊಂಡಿದೆ ಎಂದರು.

ಶಾಸಕ ಯು.ಟಿ.ಖಾದರ್ ಮಾತನಾಡಿ, ಉತ್ತರ ಪ್ರದೇಶದ ಬಿಜೆಪಿ ನೇತೃತ್ವದ ಸರಕಾರ ದ್ವೇಷದ ರಾಜಕಾರಣದಲ್ಲಿ ತೊಡಗಿದೆ. ದಲಿತರ, ಮಹಿಳೆಯರ ಹಕ್ಕುಗಳಿಗೆ ರಕ್ಷಣೆ ಇಲ್ಲದಂತೆ ಮಾಡಿದೆ.ಗೌರವಯುತವಾಗಿ ಮೃತದೇಹಕ್ಕೆ ಅಂತ್ಯ ಸಂಸ್ಕಾರ ಮಾಡುವುದನ್ನು ಬಿಟ್ಟು ಅವಮಾನ ಮಾಡಿದೆ. ಇದನ್ನು ಜನ ಎಷ್ಟುದಿನ ಸಹಿಸಿಕೊಳ್ಳಲು ಸಾಧ್ಯ ಎಂದು ಪ್ರಶ್ನಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಶಶಿಧರ ಹೆಗ್ಡೆ, ನವೀನ್ ಡಿಸೋಜ, ಸದಾಶಿವ ಉಳ್ಳಾಲ್, ದೀಪಕ್ ಪುಜಾರಿ, ಸಂತೋಷ್ ಶೆಟ್ಟಿ, ಟಿ.ಕೆ.ಸುಧೀರ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X