Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸುರೇಶ್ ಅಂಗಡಿಯನ್ನು ತಾಯ್ನಾಡಲ್ಲಿ...

ಸುರೇಶ್ ಅಂಗಡಿಯನ್ನು ತಾಯ್ನಾಡಲ್ಲಿ ಅಂತ್ಯಸಂಸ್ಕಾರ ಮಾಡಲು ಸರಕಾರಕ್ಕೆ ಸಾಧ್ಯವಾಗಲಿಲ್ಲ

ಡಿ.ಕೆ.ಶಿವಕುಮಾರ್ ಟೀಕೆ

ವಾರ್ತಾಭಾರತಿವಾರ್ತಾಭಾರತಿ2 Oct 2020 6:46 PM IST
share
ಸುರೇಶ್ ಅಂಗಡಿಯನ್ನು ತಾಯ್ನಾಡಲ್ಲಿ ಅಂತ್ಯಸಂಸ್ಕಾರ ಮಾಡಲು ಸರಕಾರಕ್ಕೆ ಸಾಧ್ಯವಾಗಲಿಲ್ಲ

ಬೆಳಗಾವಿ, ಅ.2: 'ಬೆಳಗಾವಿ ಹಾಗೂ ಉತ್ತರ ಕರ್ನಾಟಕದಲ್ಲಿ ಅನೇಕ ಮಂತ್ರಿಗಳು, ಶಾಸಕರು, ಸಂಸದರು ಇದ್ದರೂ ಪ್ರವಾಹದಿಂದ ನೊಂದಿರುವ ಜನರಿಗೆ ನೆರವಾಗಲು ಸಾಧ್ಯವಾಗಲಿಲ್ಲ ಎಂದರೆ, ಇದಕ್ಕೆ ಮತದಾರನೆ ಉತ್ತರ ಕೊಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

ಶುಕ್ರವಾರ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರವಾಹದಿಂದ ಈ ಭಾಗದ ಜನರ ಜೀವನ ಬೀದಿಗೆ ಬಿದ್ದಿದೆ. ತಮ್ಮದೇ ಸರಕಾರ, ಇಷ್ಟು ಜನ ಸಂಸದರು, ಮಂತ್ರಿಗಳು, ಶಾಸಕರು ಇದ್ದರೂ ಇಲ್ಲಿನ ಜನರಿಗೆ ಪರಿಹಾರ ಹಾಗೂ ನ್ಯಾಯ ಕೊಡಿಸಲು ಅವರು ವಿಫಲರಾಗಿದ್ದಾರೆ ಎಂದರೆ, ಇದಕ್ಕೆ ಈ ಭಾಗದ ಮತದಾರರೆ ಉತ್ತರ ಕೊಡಬೇಕು ಎಂದರು.

ಅಭ್ಯರ್ಥಿ ಕುರಿತು ಸಭೆ ನಡೆಸಿ ತೀರ್ಮಾನ: ಮುಂಬರುವ ಉಪಚುನಾವಣೆಗಳಿಗೆ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಚರ್ಚಿಸಲು ಇವತ್ತು ಸಂಜೆ ನಮ್ಮ ಎಲ್ಲ ನಾಯಕರು, ಶಾಸಕರು, ಜಿಲ್ಲಾ ಅಧ್ಯಕ್ಷರು, ಚುನಾಚಣೆಯಲ್ಲಿ ಸ್ಪರ್ಧೆ ಮಾಡಿದವರ ಸಭೆ ಕರೆದಿದ್ದು, ಎಲ್ಲರ ಅಭಿಪ್ರಾಯ ಸಂಗ್ರಹಿಸಿ, ನಂತರ ತೀರ್ಮಾನ ಮಾಡಲಾಗುವುದು ಎಂದು ಶಿವಕುಮಾರ್ ತಿಳಿಸಿದರು.

ಸರಿಯಾದ ಅಂತ್ಯ ಸಂಸ್ಕಾರ ನೀಡಲಿಲ್ಲ: ನಮ್ಮ ರೈಲ್ವೆ ಸಚಿವ ಸುರೇಶ್ ಅಂಗಡಿ ಅವರ ಪಾರ್ಥಿವ ಶರೀರವನ್ನು ದಿಲ್ಲಿಯಿಂದ ಇಲ್ಲಿಗೆ ತಂದು ದರ್ಶನಕ್ಕೆ ಅವಕಾಶ ನೀಡಿ ಅವರಿಗೆ ಇಲ್ಲಿ ಅಂತ್ಯಕ್ರಿಯೆ ಮಾಡಬಹುದಿತ್ತು. ಅವರು ಯಾಕೆ ಈ ರೀತಿ ಮಾಡಲಿಲ್ಲ ಎಂಬುದು ಅರ್ಥವಾಗುತ್ತಿಲ್ಲ. ಅಲ್ಲಿ ಏನೇನು ರಾಜಕಾರಣ ನಡೆದಿದೆ ಅಂತಾ ಅವರ ಕುಟುಂಬದವರೇ ಹೇಳಿದ್ದಾರೆ ಎಂದು ಅವರು ತಿಳಿಸಿದರು.

ಬಿಜೆಪಿಯವರ ಕೈಯಲ್ಲಿ ನೊಂದ ಕುಟುಂಬ ಸದಸ್ಯರಿಗೆ, ಕ್ಷೇತ್ರದ ಜನರಿಗೆ ನ್ಯಾಯ ಒದಗಿಸಿಕೊಡಲು ಸಾಧ್ಯವಾಗಲಿಲ್ಲ. ಇನ್ನು ಮುಂದೆ ಅದೇನು ನ್ಯಾಯ ಒದಗಿಸುತ್ತಾರೋ ನೋಡೋಣ. ಏಮ್ಸ್ ಆಸ್ಪತ್ರೆಯಲ್ಲಿ ಸರಿಯಾದ ಚಿಕಿತ್ಸೆ ನೀಡಲಿಲ್ಲ ಎಂಬ ಆರೋಪದ ಬಗ್ಗೆ ನಾನು ಮಾತನಾಡುವುದಿಲ್ಲ ಎಂದು ಶಿವಕುಮಾರ್ ತಿಳಿಸಿದರು.

ಇಲ್ಲಿ ಮಿಲಿಟರಿ ಬೆಸ್ ಇದೆ. ಕೇಂದ್ರ ಸರಕಾರದ ಮಂತ್ರಿ ನಿಧನರಾದ ಸಮಯದಲ್ಲಿ ಅವರ ದೇಹವನ್ನು ಸರಿಯಾಗಿ ಪ್ಯಾಕ್ ಮಾಡಿ ಇಲ್ಲಿಗೆ ತಂದು ಅವರ ತಾಯ್ನಾಡಿನ ಮಣ್ಣಲ್ಲಿ ಅಂತ್ಯ ಸಂಸ್ಕಾರ ಮಾಡಲು ರಾಜ್ಯ ಸರಕಾರಕ್ಕಾಗಲಿ, ಕೇಂದ್ರ ಸರಕಾರಕ್ಕಾಗಲಿ ಸಾಧ್ಯವಾಗಲಿಲ್ಲ. ದಿಲ್ಲಿಯಲ್ಲಿ ಅವರ ಅಂತ್ಯಕ್ರಿಯೆ ಹೇಗೆ ಮಾಡಿದರು ಎಂದು ನಾವೆಲ್ಲ ವಿಡಿಯೋದಲ್ಲಿ ನೋಡಿದ್ದೇವೆ. ಸರಕಾರದ ಈ ನಡೆ ಬಗ್ಗೆ ಜನ, ಅವರ ಆತ್ಮ, ಅವರ ಕುಟುಂಬ ತೀರ್ಮಾನ ಮಾಡಲಿ ಎಂದು ವಾಗ್ದಾಳಿ ನಡೆಸಿದರು.

ಯೋಗಿ ಸರಕಾರ ದೇಶಕ್ಕೆ ರೋಗ ತಂದುಕೊಟ್ಟಿದೆ: ಇಡೀ ದೇಶದ ಗೌರವ, ಸ್ವಾಭಿಮಾನ, ನಮ್ಮ ಸಮುದಾಯದ, ಎಲ್ಲ ವರ್ಗದ ಜನರಿಗೆ ವಿಶ್ವಮಟ್ಟದಲ್ಲಿ ಕಪ್ಪುಚುಕ್ಕೆಯಾಗಿದೆ. ಇದು ಕೇವಲ ಒಂದು ಹೆಣ್ಣಿಗೆ ಆಗಿರುವ ಅನ್ಯಾಯದ ಪ್ರಶ್ನೆ ಅಲ್ಲ. ಇಡೀ ಮನುಕುಲಕ್ಕೆ ಆಗಿರುವ ದೊಡ್ಡ ಅವಮಾನ ಎಂದು ಶಿವಕುಮಾರ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X