Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಗಾಂಧೀ ಚಿಂತನೆಯನ್ನು ಯುವಜನತೆ...

ಗಾಂಧೀ ಚಿಂತನೆಯನ್ನು ಯುವಜನತೆ ಅಳವಡಿಸಿಕೊಳ್ಳಿ: ಉಡುಪಿ ಡಿಸಿ ಜಿ.ಜಗದೀಶ್

‘ನಮ್ಮ ಮನೆ ನಮ್ಮ ಹಿರಿಯರು’ ಅಭಿಯಾನಕ್ಕೆ ನಿರ್ಧಾರ

ವಾರ್ತಾಭಾರತಿವಾರ್ತಾಭಾರತಿ2 Oct 2020 7:30 PM IST
share
ಗಾಂಧೀ ಚಿಂತನೆಯನ್ನು ಯುವಜನತೆ ಅಳವಡಿಸಿಕೊಳ್ಳಿ: ಉಡುಪಿ ಡಿಸಿ ಜಿ.ಜಗದೀಶ್

ಉಡುಪಿ, ಅ.2: ಮಹಾತ್ಮ ಗಾಂಧೀಜಿ ಸಮಾಜದ ಒಳಿತಿಗಾಗಿಯೇ ತಮ್ಮ ಬದುಕನ್ನು ಮುಡಿಪಾಗಿಟ್ಟ ಕಾರಣ ಈಗಲೂ ದೇಶದ ಜನರ ಮನೆ-ಮನಗಳಲ್ಲಿ ಶಾಶ್ವತವಾಗಿ ಉಳಿದುಕೊಂಡಿದ್ದಾರೆ. ಅವರು ಅಹಿಂಸಾ ಮಾರ್ಗದ ಮೂಲಕ ದೇಶಕ್ಕೆ ಸ್ವಾತಂತ್ರ ದೊರಕಿಸಿಕೊಟ್ಟಿದ್ದು, ಅದರ ಸದ್ಬಳಕೆ ಆಗಬೇಕಾಗಿದೆ. ಯುವ ಜನತೆ ಗಾಂಧೀಜಿ ಅವರ ಚಿಂತನೆಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದ್ದಾರೆ.

ಶುಕ್ರವಾರ, ಉಡುಪಿ ಅಜ್ಜರಕಾಡು ಭುಜಂಗ ಪಾರ್ಕ್‌ನಲ್ಲಿ ಆಯೋಜಿಸಿದ್ದ ಗಾಂಧೀ ಜಯಂತಿ ಕಾರ್ಯಕ್ರಮದಲ್ಲಿ ಗಾಂಧೀಜಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಅವರು ಮಾತನಾಡುತಿದ್ದರು.

ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳ ಲಾಗಿದೆ. ಆದರೆ ಜನರು ರೋಗ ಲಕ್ಷಣಗಳಿದ್ದರೂ ಪರೀಕ್ಷೆ ಮಾಡಿಸಿ ಕೊಳ್ಳದೇ ಕೊನೆಯ ಹಂತದಲ್ಲಿ ನೇರವಾಗಿ ವೆಂಟಿಲೇಟರ್ ಚಕಿತ್ಸೆಗೆ ಆಗಮಿಸುತ್ತಿದ್ದಾರೆ. ಜಿಲ್ಲಾಡಳಿತ ಮೂಲಕ ಕೊರೋನಾ ಪರೀಕ್ಷೆ ಮತ್ತು ಚಿಕಿತ್ಸೆ ಸಂಪೂರ್ಣ ಉಚಿತ ವಾಗಿದ್ದು, 30,000ರೂ. ಬೆಲೆಯ ಇಂಜೆಕ್ಷನ್‌ನ್ನು ಸಹ ಉಚಿತವಾಗಿ ನೀಡಲಾ ಗುತ್ತಿದೆ. ಯುವ ಜನತೆ ಕೊರೋನಾ ಕುರಿತು ನಿರ್ಲಕ್ಷ ಮಾಡಿ, ನಿಮ್ಮ ನಿಮ್ಮ ಮನೆಗಳಲ್ಲಿರುವ ಹಿರಿಯರನ್ನು ಸಾವಿನ ಅಂಚಿಗೆ ದೂಡಬೇಡಿ. ಅವರನ್ನು ರಕ್ಷಿಸಿ ಕೊಳ್ಳಿ ಎಂದು ಜಿಲ್ಲಾಧಿಕಾರಿ ಮನವಿ ಮಾಡಿದರು.

ಅಭಿಯಾನಕ್ಕೆ ಸಿದ್ಧತೆ: ಜಿಲ್ಲೆಯ ಹಿರಿಯ ವ್ಯಕ್ತಿಗಳನ್ನು ಕೊರೋನಾದಿಂದ ರಕ್ಷಿಸುವ ಸಲುವಾಗಿ ಜಿಲ್ಲೆಯಾದ್ಯಂತ ‘ನಮ್ಮ ಮನೆ ನಮ್ಮ ಹಿರಿಯರು’ ಎಂಬ ಅಭಿಯಾನಪ್ರಾರಂಭಿಸಲು ನಿರ್ಧರಿಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಾಸಕ ಕೆ.ರಘುಪತಿ ಭಟ್ ಮಾತನಾಡಿ, ಗಾಂಧೀಜಿ ಸ್ಚಚ್ಛತೆ ಕುರಿತು ನೀಡಿದ ಸಂದೇಶದ ಅನುಷ್ಠಾನದ ಫಲಶೃತಿ ಎಲ್ಲೆಡೆ ಕಂಡುಬರುತ್ತಿದೆ. ಸಾರ್ವಜನಿಕರಲ್ಲಿ ಸ್ಚಚ್ಛತೆಯ ಬಗ್ಗೆ ಅರಿವು ಮೂಡಿದೆ ಎಂದರು.

ಕಾರ್ಯಕ್ರಮದಲ್ಲಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ರಾಘವೇಂದ್ರ ಕಿಣಿ, ನಗರಸಭಾ ಸದಸ್ಯೆ ರಶ್ಮಿ ಚಿತ್ತರಂಜನ್, ಎಸ್ಪಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಪೌರಾಯುಕ್ತ ಆನಂದ್ ಕಲ್ಲೋಳಿಕರ್ ಹಾಗೂ ಇತರರು ಉಪಸ್ಥಿತರಿದ್ದರು.

ಗಣೇಶ್ ಗಂಗೊಳ್ಳಿ ಮತ್ತು ಬಳಗದಿಂದ ಗಾಂಧೀ ಭಜನೆ ಕಾರ್ಯಕ್ರಮ ನಡೆಯಿತು. ತ್ಯಾಜ್ಯ ನಿರ್ವಹಣೆ -ಮರುಬಳಕೆ ಕುರಿತು ಆಯೋಜಿಸಿದ್ದ ಕಿರುಚಿತ್ರ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X