ದ.ಕ. ಜಿಲ್ಲೆ : ಕೋವಿಡ್‌ಗೆ 12 ಬಲಿ, ಹೊಸದಾಗಿ 322 ಮಂದಿಗೆ ಕೊರೋನ ಸೋಂಕು

ಮಂಗಳೂರು, ಅ.12: ದ.ಕ. ಜಿಲ್ಲೆಯಲ್ಲಿ ಕೊರೋನ ಸೋಂಕಿನಿಂದಾಗಿ ಮತ್ತೆ 12 ಮಂದಿ ಮೃತಪಟ್ಟಿದ್ದಾರೆ. ಈ ನಡುವೆ ಶುಕ್ರವಾರ ಹೊಸದಾಗಿ 322 ಮಂದಿಗೆ ಕೊರೋನ ಸೋಂಕು ತಗುಲಿದೆ.
ಜಿಲ್ಲೆಯಲ್ಲಿ ಕೊರೋನದಿಂದ ಮೃತಪಟ್ಟವರ ಸಂಖ್ಯೆ ಇದೀಗ 557ಕ್ಕೆ ತಲುಪಿದ್ದು, ಸೋಂಕಿತರ ಸಂಖ್ಯೆ 23,761ಕ್ಕೆ ಏರಿಕೆ ಕಂಡಿದೆ. ಜಿಲ್ಲೆಯ ವಿವಿಧ ಆಸ್ಪತ್ರೆಗಳು, ಮನೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 277 ಮಂದಿಗೆ ಕೊರೋನ ಮುಕ್ತರಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕು ಮುಕ್ತರಾದವರ ಸಂಖ್ಯೆ 17,365ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ 5,839 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 1,66,456 ಸ್ಯಾಂಪಲ್‌ಗಳನ್ನು ಪರೀಕ್ಷಿಸಲಾಗಿದೆ. ಈ ಪೈಕಿ 1,42,695 ಮಂದಿಯ ವರದಿಯು ನೆಗೆಟಿವ್ ಬಂದಿದ್ದು, ಉಳಿದ 23,761 ಮಂದಿಯ ವರದಿ ಪಾಸಿಟಿವ್‌ಆಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ.
Next Story





