2 ವರ್ಷದ ಹೆಣ್ಣು ಮಗುವನ್ನು ಅಪಹರಿಸಿದ ಅಪರಿಚಿತ ವ್ಯಕ್ತಿ
ಮೈಸೂರು,ಅ.2: ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ಎರಡು ವರ್ಷದ ಹೆಣ್ಣು ಮಗುವೊಂದನ್ನು ಅಪರಿಚಿತ ವ್ಯಕ್ತಿಯೋರ್ವ ಅಪಹರಿಸಿದ್ದಾನೆ.
ನಂಜನಗೂಡಿನ ಪಾರ್ವತಿ ಎಂಬವರ ಮಗು ಕವಿತಾ ಅಪಹರಣವಾಗಿದ್ದಾಳೆ. ಶ್ರೀಕಂಠೇಶ್ವರ ದೇವಸ್ಥಾನದ ಬಳಿ ಮಗುವಿನ ತಾಯಿ ವ್ಯಾಪಾರ ಮಾಡುತ್ತಿದ್ದು, ಅಲ್ಲಿಯೇ ಮಗುವನ್ನು ಆಟವಾಡಲು ಬಿಟ್ಟಿದ್ದರು. ಅಪರಿಚಿತ ವ್ಯಕ್ತಿಯೋರ್ವ ಮಗುವನ್ನು ಎತ್ತಿಕೊಂಡು ಓಡಿಹೋಗಿದ್ದು, ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





