Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತಕ್ಕೆ ಜನವರಿಯಲ್ಲಿ ಕೊರೋನ ಲಸಿಕೆ...

ಭಾರತಕ್ಕೆ ಜನವರಿಯಲ್ಲಿ ಕೊರೋನ ಲಸಿಕೆ ಲಭಿಸುವ ನಿರೀಕ್ಷೆ: ಎಐಐಎಂಎಸ್ ನಿರ್ದೇಶಕ ಡಾ ಗುಲೇರಿಯಾ

ವಾರ್ತಾಭಾರತಿವಾರ್ತಾಭಾರತಿ2 Oct 2020 10:50 PM IST
share
ಭಾರತಕ್ಕೆ ಜನವರಿಯಲ್ಲಿ ಕೊರೋನ ಲಸಿಕೆ ಲಭಿಸುವ ನಿರೀಕ್ಷೆ: ಎಐಐಎಂಎಸ್ ನಿರ್ದೇಶಕ ಡಾ ಗುಲೇರಿಯಾ

ಹೊಸದಿಲ್ಲಿ, ಅ.2: ಎಲ್ಲಾ ಕಾರ್ಯಗಳೂ ಯೋಜಿತ ರೀತಿಯಲ್ಲಿಯೇ ಮುಂದುವರಿದರೆ ಭಾರತದಲ್ಲಿ ಕೊರೋನ ಸೋಂಕಿನ ವಿರುದ್ಧದ ಪರಿಣಾಮಕಾರಿ ಲಸಿಕೆ 2021ರ ಜನವರಿ ಅಂತ್ಯದೊಳಗೆ ಬಳಕೆಗೆ ಲಭ್ಯವಾಗಲಿದೆ ಎಂದು ಎಐಐಎಂಎಸ್ ನಿರ್ದೇಶಕ ಡಾ ರಣದೀಪ್ ಗುಲೇರಿಯಾ ಹೇಳಿದ್ದಾರೆ.

‘ಇಂಡಿಯಾ ಟುಡೆ ಹೆಲ್ತ್‌ಗಿರಿ’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಲಸಿಕೆ ಯಾವಾಗ ಲಭ್ಯವಾಗಲಿದೆ ಎಂದು ಈಗಲೇ ನಿಖರವಾಗಿ ಹೇಳಲು ಸಾಧ್ಯವಿಲ್ಲ. ಈಗ ನಡೆಯುತ್ತಿರುವ ಪರೀಕ್ಷಾ ಪ್ರಯೋಗದ ಯಶಸ್ಸು ಸೇರಿದಂತೆ ಹಲವು ವಿಷಯಗಳ ಮೇಲೆ ಇದು ಅವಲಂಬಿತವಾಗಿದೆ. ಆದರೆ ಎಲ್ಲವೂ ಯೋಜಿತ ರೀತಿಯಲ್ಲಿಯೇ ಮುಂದುವರಿದರೆ ಮುಂದಿನ ವರ್ಷದ ಜನವರಿ ಅಂತ್ಯದೊಳಗೆ ಲಭ್ಯವಾಗುವ ಸಾಧ್ಯತೆಯಿದೆ. ದೇಶದ ಅಗಾಧ ಜನಸಂಖ್ಯೆಯ ಹಿನ್ನೆಲೆಯಲ್ಲಿ ಲಸಿಕೆಯ ಉತ್ಪಾದನೆ ಮತ್ತು ಅದರ ಪೂರೈಕೆ ಬಹುದೊಡ್ಡ ಸವಾಲಾಗಲಿದೆ. ಆರಂಭದ ದಿನಗಳಲ್ಲಿ ಲಸಿಕೆಯ ಕೊರತೆಯಾಗುವ ನಿರೀಕ್ಷೆಯಿದೆ. ಈ ಕಾರಣದಿಂದ, ಲಸಿಕೆ ಆದ್ಯತೆಯ ಮಾದರಿಯನ್ನು ಅನುಸರಿಸಲಾಗುವುದು. ಆರೋಗ್ಯ ಸಿಬ್ಬಂದಿ, ಕೊರೋನ ವಾರಿಯರ್ಸ್, ಸಾವಿನ ಸಾಧ್ಯತೆ ಅಧಿಕವಾಗಿರುವವರು ಸೇರಿದಂತೆ ಕೊರೋನ ಸೋಂಕಿನ ಅಧಿಕ ಅಪಾಯದ ವ್ಯಾಪ್ತಿಯಲ್ಲಿರುವವರಿಗೆ ಮೊದಲು ಪೂರೈಸಲಾಗುವುದು ಎಂದವರು ಹೇಳಿದ್ದಾರೆ.

ಲಸಿಕೆಯಿಂದ ದೀರ್ಘಾವಧಿ ಅಡ್ಡಪರಿಣಾಮ ಉಂಟಾಗುವ ಸಾಧ್ಯತೆಯಿದೆ ಎಂಬ ತಜ್ಞರ ಆತಂಕದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಲಸಿಕೆಯ ಮೂರು ಹಂತದ ಪರೀಕ್ಷಾ ಪ್ರಯೋಗ ಮತ್ತು ಕೊರೋನ ವಿರುದ್ಧದ ಲಸಿಕೆ ಲಭ್ಯವಾದ ಬಳಿಕ ಅದನ್ನು ಪ್ರಯೋಗಿಸಿದ ನಂತರ ಆರೋಗ್ಯಸ್ಥಿತಿಯ ಮೇಲೆ ಆಗುವ ಪರಿಣಾಮವನ್ನು ನಿಕಟವಾಗಿ ಗಮನಿಸಲಾಗುವುದು ಎಂದಿದ್ದಾರೆ. ಕಳೆದ ಕೆಲವು ವಾರಗಳ ಪ್ರವೃತ್ತಿ ಗಮನಿಸಿದರೆ, ದೇಶದಲ್ಲಿ ಕೊರೋನ ಸೋಂಕು ಅತ್ಯುಚ್ಛ ಮಟ್ಟ ತಲುಪಿ ಈಗ ಕಡಿಮೆಯಾಗುತ್ತಿರುವ ಲಕ್ಷಣವಿದೆ . ಜನತೆ ಮಾಸ್ಕ್ ಧಾರಣೆ, ಸುರಕ್ಷಿತ ಅಂತರ ಪಾಲನೆ ಮುಂತಾದ ನಿಯಮಗಳನ್ನು ಪಾಲಿಸಿದರೆ ಮುಂದಿನ ದಿನಗಳಲ್ಲಿ ದೇಶದಲ್ಲಿ ಕೊರೋನ ಸೋಂಕು ಇಳಿಮುಖವಾಗಲಿದೆ ಎಂದು ಡಾ ಗುಲೇರಿಯಾ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X