Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಗಾಂಧಿ, ಅಂಬೇಡ್ಕರ್, ಲೋಹಿಯಾ...

ಗಾಂಧಿ, ಅಂಬೇಡ್ಕರ್, ಲೋಹಿಯಾ ಚಿಂತನೆಗಳನ್ನು ಒಟ್ಟಾಗಿ ಗ್ರಹಿಸುವುದು ಇಂದಿನ ಅಗತ್ಯ: ರಾಜಪ್ಪ ದಳವಾಯಿ

ವಾರ್ತಾಭಾರತಿವಾರ್ತಾಭಾರತಿ3 Oct 2020 4:44 PM IST
share
ಗಾಂಧಿ, ಅಂಬೇಡ್ಕರ್, ಲೋಹಿಯಾ ಚಿಂತನೆಗಳನ್ನು ಒಟ್ಟಾಗಿ ಗ್ರಹಿಸುವುದು ಇಂದಿನ ಅಗತ್ಯ: ರಾಜಪ್ಪ ದಳವಾಯಿ

ಬೆಂಗಳೂರು, ಅ.3: ಗಾಂಧಿವಾದ, ಅಂಬೇಡ್ಕರ್ ವಾದ ಹಾಗೂ ಲೋಹಿಯಾವಾದ ಒಟ್ಟಾಗಿ ಸಾಗಿದಾಗ ಮಾತ್ರ ಭಾರತದ ಸಾಮಾಜಿಕ, ರಾಜಕೀಯ ಹಾಗೂ ಆರ್ಥಿಕ ಬೆಳವಣಿಗೆ ಸಾಧ್ಯವೆಂದು ಹಿರಿಯ ನಾಟಕಕಾರ ಪ್ರೊ.ರಾಜಪ್ಪ ದಳವಾಯಿ ಅಭಿಪ್ರಾಯಿಸಿದ್ದಾರೆ.

ಶುಕ್ರವಾರ ಬೆಂಗಳೂರು ವಿವಿ ಗಾಂಧಿ ಅಧ್ಯಯನ ಕೇಂದ್ರದಲ್ಲಿ ಆಯೋಜಿಸಿದ್ದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಅವರು, ಗಾಂಧಿ, ಅಂಬೇಡ್ಕರ್ ಹಾಗೂ ಲೋಹಿಯಾ ಚಿಂತನೆಗಳು ಒಂದು ಮತ್ತೊಂದರ ಪ್ರತಿಸ್ಪರ್ಧಿಯಲ್ಲ. ಈ ಮೂರು ಚಿಂತನೆಯನ್ನು ಒಟ್ಟಾಗಿ ಗ್ರಹಿಸಿದಾಗ ಮಾತ್ರ ದೇಶದ ಬೆಳವಣಿಗೆ ಸಾಧ್ಯವೆಂದು ತಿಳಿಸಿದರು.

ದೇಶದ ಜನತೆ ಗಾಂಧಿವಾದದ ನೈತಿಕತೆ, ಲೋಹಿಯಾವಾದದ ಜಾತ್ಯತೀತತೆ ಹಾಗೂ ಅಂಬೇಡ್ಕರ್‍ವಾದದ ಸಾಮಾಜಿಕತೆ ಈ ಮೂರನ್ನು ಒಟ್ಟಾಗಿ ಗ್ರಹಿಸಿಸಬೇಕು. ಅದರಿಂದ ಮೂಡುವ ಹೊಸ ಶಕ್ತಿ, ಚಿಂತನೆಯಿಂದ ಭಾರತವನ್ನು ಮತ್ತಷ್ಟು ಸಶಕ್ತವಾಗಿ ಮುನ್ನಡೆಸಬಹುದೆಂದು ಅವರು ಹೇಳಿದ್ದಾರೆ.

ಇವತ್ತಿನ ಆಧುನಿಕ ಯುಗದಲ್ಲಿ ಗಾಂಧಿ, ಅಂಬೇಡ್ಕರ್ ಹಾಗೂ ಲೋಹಿಯಾ ಚಿಂತನೆಗಳನ್ನು ಸಮನ್ವಯ ಮಾಡಿಕೊಳ್ಳಲು ನಮ್ಮೆದುರಿಗೆ ಅನೇಕ ಸವಾಲುಗಳಿವೆ. ಹೀಗಾಗಿ ನಮಗೆ ವಿವೇಕ ಎಂಬುದು ಹಿಂದಿಗಿಂತ ಇಂದು ಹೆಚ್ಚು ಅನಿವಾರ್ಯವಾಗಿದೆ. ಪರಸ್ಪರ ವೈರುಧ್ಯಗಳ ನಡುವೆಯೂ ಇರಬಹುದಾದ ಅಂತರ್ ಸಂಬಂಧಗಳನ್ನು ಬೆಸೆದುಕೊಂಡರೆ ಆಧುನಿಕ ಭಾರತವನ್ನು ಯಶಸ್ವಿಯಾಗಿ ಕಟ್ಟಬಹುದೆಂದು ಅವರು ಹೇಳಿದ್ದಾರೆ.

ಆಧುನಿಕ ಜಗತ್ತಿಗೆ ಗಾಂಧಿ ಎಂಬುದು ಒಂದು ಮೌಲ್ಯವಾಗಿದೆ. ಗಾಂಧಿ ಇಲ್ಲದ ಭಾರತವಾಗಲಿ, ಜಗತ್ತಾಗಲಿ ಇರಲು ಸಾಧ್ಯವಿಲ್ಲವೆಂಬಂತೆ ಸತ್ಯಾಗ್ರಹ, ಅಹಿಂಸೆ ಹಾಗೂ ಅನ್ಯಾಯದ ವಿರುದ್ಧದ ಹೋರಾಟಗಳು ಆವರಿಸಿಕೊಂಡಿವೆ. ಗಾಂಧಿ ತತ್ವಗಳು ಎಲ್ಲ ಕಾಲಕ್ಕೂ ಜೀವಂತವಾಗಿರುತ್ತದೆ ಎಂದು ಅವರು ಅಭಿಪ್ರಾಯಿಸಿದ್ದಾರೆ.

ಕಾರ್ಯಕ್ರಮದಲ್ಲಿ ಗಾಂಧಿ ಅಧ್ಯಯನ ಸಂಸ್ಥೆಯ ನಿರ್ದೇಶಕ ನಟರಾಜ್ ಹುಳಿಯಾರ್, ಬೆಂಗಳೂರು ವಿವಿ ಕುಲಪತಿ ವೇಣುಗೋಪಾಲ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X