ಗಾಂಜಾ ಮಾರಾಟ ಆರೋಪ: ಇಬ್ಬರ ಬಂಧನ

ಬೆಂಗಳೂರು, ಅ.3: ಮಾದಕ ವಸ್ತು ಗಾಂಜಾ ಮಾರಾಟ ಆರೋಪದಡಿ ಇಬ್ಬರನ್ನು ಇಲ್ಲಿನ ಮಾಗಡಿ ಠಾಣಾ ಪೊಲೀಸರು ಬಂಧಿಸಿ, 12 ಕೆಜಿ ಗಾಂಜಾ ಜಪ್ತಿ ಮಾಡಿದ್ದಾರೆ.
ಬ್ಯಾಡರಹಳ್ಳಿ ನಿವಾಸಿ ಯತೀಶ್ ನಾಯ್ಕ್, ರಾಯಚೂರು ಜಿಲ್ಲೆಯ ನಿತ್ಯಜೀತ್ ಮಂಡಲ್ ಬಂಧಿತ ಆರೋಪಿಗಳೆಂದು ಪೊಲೀಸರು ತಿಳಿಸಿದ್ದಾರೆ.
ಸೆ.28ರಂದು ಇಲ್ಲಿನ ಅಗ್ರಹಾರ ದಾಸಹಳ್ಳಿಯ ಅಂಬೇಡ್ಕರ್ ಕ್ರೀಡಾಂಗಣದ ಬಳಿ ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದಾರೆ ಎನ್ನುವ ಮಾಹಿತಿ ಸಂಗ್ರಹಿಸಿ, ದಾಳಿ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ತನಿಖೆ ಮುಂದುವರಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
Next Story





