ರಾಜಸ್ಥಾನ: ಯುವತಿಯ ಸಾಮೂಹಿಕ ಅತ್ಯಾಚಾರ; ಬಿಜೆಪಿ ಮಹಿಳಾ ಮೋರ್ಚಾದ ಮಾಜಿ ನಾಯಕಿ ಸಹಿತ ಐವರ ಬಂಧನ

ರಾಜಸ್ಥಾನ, ಅ. 3: ಸವಾಯಿ ಮಧೋಪುರದಲ್ಲಿ ಯುವತಿಯ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿಯ ಮಹಿಳಾ ಮೋರ್ಚಾದ ಮಾಜಿ ನಾಯಕಿ ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ.
‘‘ಬಿಜೆಪಿ ಮಹಿಳಾ ಮೋರ್ಚಾದ ಮಾಜಿ ಜಿಲ್ಲಾ ವರಿಷ್ಠೆ ಸ್ಮಿತಾ ಶರ್ಮಾ, ಆಕೆಯ ಸಹವರ್ತಿ ಹೀರಾ ಲಾಲ್ ಹಾಗೂ ಇಬ್ಬರು ಸರಕಾರಿ ಉದ್ಯೋಗಿಗಳನ್ನು ಬಂಧಿಸಲಾಗಿದೆ’’ ಎಂದು ಪೊಲೀಸ್ ಅಧಿಕಾರಿ ಒ.ಪಿ. ಸೋಲಂಕಿ ತಿಳಿಸಿದ್ದಾರೆ. ತನ್ನ ಮೇಲೆ ವಿವಿಧ ಸ್ಥಳಗಳಲ್ಲಿ 8 ಬಾರಿ ಅತ್ಯಾಚಾರ ನಡೆಸಲಾಗಿದೆ ಎಂದೂ ದೂರಿನಲ್ಲಿ ಯುವತಿ ಆರೋಪಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.
Next Story





