ರಾಜಧಾನಿಯಲ್ಲಿ 3,925 ಕೊರೋನ ಪ್ರಕರಣಗಳು ದೃಢ: 21 ಮಂದಿ ಮೃತ್ಯು

ಬೆಂಗಳೂರು, ಅ.3: ನಗರದಲ್ಲಿ ಶನಿವಾರ ಒಂದೇ ದಿನ 3,925 ಜನರಿಗೆ ಕೊರೋನ ಸೋಂಕು ದೃಢಪಟ್ಟಿದೆ. 2001 ಸೋಂಕಿತರು ಬಿಡುಗಡೆಯಾಗಿದ್ದು, 21 ಜನರು ಮೃತರಾಗಿದ್ದಾರೆ.
ನಗರದಲ್ಲಿ ಒಟ್ಟು 2,45,700 ಸೋಂಕಿತರು ದೃಢಪಟ್ಟಿದ್ದು, ಇಲ್ಲಿಯವರೆಗೆ ನಗರದಲ್ಲಿ 3,045 ಜನರು ಸೋಂಕಿಗೆ ಬಲಿಯಾಗಿದ್ದಾರೆ. 1,89,362 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳು ಒಳಗೊಂಡಂತೆ 53,292 ಜನ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿರುವ 150 ಜ್ವರ ಚಿಕಿತ್ಸಾಲಯದಲ್ಲಿ ಒಟ್ಟು 2,95,126 ವ್ಯಕ್ತಿಗಳಿಗೆ ತಪಾಸಣೆ ಮಾಡಲಾಗಿದೆ.
ಶುಕ್ರವಾರದ ಬಿಬಿಎಂಪಿ ಕೋವಿಡ್ ವರದಿ ಪ್ರಕಾರ ನಗರದಲ್ಲಿ ಒಟ್ಟು ಸಕ್ರಿಯ 16 ಕಂಟೈನ್ಮೆಂಟ್ ಝೋನ್‍ಗಳಿವೆ. ನಗರದಲ್ಲಿ 6,64,537 ಪ್ರಾಥಮಿಕ ಸಂಪರ್ಕಿತರನ್ನು ಗುರುತಿಸಲಾಗಿದ್ದು, ದ್ವಿತೀಯ ಸಂಪರ್ಕಿತ 7,95,992 ಜನರನ್ನು ಗುರುತಿಸಲಾಗಿದೆ. ನಗರದಲ್ಲಿ 17,55,225 ಜನರಿಗೆ ಕೊರೋನ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ ಪಾಸಿಟಿವ್ ಪ್ರಮಾಣ ಶೇ.13.77ರಷ್ಟಿದೆ. ಕೊರೋನಕ್ಕೆ ಮೃತರಾಗುತ್ತಿರುವ ಪ್ರಮಾಣ ಶೇ.1.25ರಷ್ಟಿದ್ದು, ಗುಣಮುಖರಾಗುತ್ತಿರುವ ಪ್ರಮಾಣ ಶೇ.78.49ರಷ್ಟಿದೆ.







