ಶಾಸಕ ಅರವಿಂದ್ ಬೆಲ್ಲದ್‍ಗೆ ಕೊರೋನ ಸೋಂಕು ದೃಢ

ಧಾರವಾಡ, ಅ. 4: ಶಾಸಕ ಅರವಿಂದ್ ಬೆಲ್ಲದ್ ಅವರಿಗೆ ಕೊರೋನ ಸೋಂಕು ಸೋಂಕು ದೃಢಪಟ್ಟಿದೆ.
ಈ ಕುರಿತು ಟ್ವೀಟರ್ ನಲ್ಲಿ ಮಾಹಿತಿ ನೀಡಿರುವ ಅವರು, ನಾನು ಕೊರೋನ ಪರೀಕ್ಷೆ ಮಾಡಿಸಿಕೊಂಡಿದ್ದು, ನನಗೆ ಸೋಂಕು ದೃಢಪಟ್ಟಿದೆ. ಯಾವುದೇ ರೋಗ ಲಕ್ಷಣಗಳು ಇಲ್ಲದೇ ಇದ್ದರೂ, ವೈದ್ಯರ ಸಲಹೆಯಂತೆ ಹೋಮ್ ಕ್ವಾರಂಟೈನ್ ಆಗುತ್ತಿದ್ದೇನೆ. ಈ ಕುರಿತು ಸಾರ್ವಜನಿಕರು, ಮುಖಂಡರು ಮತ್ತು ಕಾರ್ಯಕರ್ತರು, ಬಂಧುಗಳು ಭಯಪಡುವ ಅಗತ್ಯವಿಲ್ಲ ಹಾಗೂ ದೂರವಾಣಿ ಸಂಪರ್ಕ ಮಾಡಬಾರದೆಂದು ವಿನಂತಿಸುತ್ತೇನೆ. ತಮ್ಮೆಲ್ಲರ ಪ್ರೀತಿ, ವಿಶ್ವಾಸ, ಅಭಿಮಾನ ಹಾಗೂ ಭಗವಂತನ ಆಶೀರ್ವಾದದಿಂದ ನಾನು ಕ್ಷೇಮವಾಗಿದ್ದೇನೆ. ಕಳೆದ ಹಲವು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದಿರುವವರು ಕೊರೋನ ಪರೀಕ್ಷೆ ಮಾಡಿಸುವಂತೆ ಮನವಿ ಮಾಡಿದ್ದಾರೆ.
Next Story





