Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬಿಬಿಎಂಪಿ ವಾರ್ಡ್ ಗಳ ಸಂಖ್ಯೆ 250ಕ್ಕೆ...

ಬಿಬಿಎಂಪಿ ವಾರ್ಡ್ ಗಳ ಸಂಖ್ಯೆ 250ಕ್ಕೆ ಹೆಚ್ಚಳಕ್ಕೆ ಅಧಿಸೂಚನೆ

ವಾರ್ತಾಭಾರತಿವಾರ್ತಾಭಾರತಿ4 Oct 2020 5:12 PM IST
share
ಬಿಬಿಎಂಪಿ ವಾರ್ಡ್ ಗಳ ಸಂಖ್ಯೆ 250ಕ್ಕೆ ಹೆಚ್ಚಳಕ್ಕೆ ಅಧಿಸೂಚನೆ

ಬೆಂಗಳೂರು, ಅ. 4: ಬಿಬಿಎಂಪಿಯ ವಾರ್ಡ್ ಸಂಖ್ಯೆಯನ್ನು ಹಾಲಿ ಇರುವ 198 ರಿಂದ 250ಕ್ಕೆ ಹೆಚ್ಚಳ ಮಾಡುವ ಬಗ್ಗೆ ರಾಜ್ಯ ಸರಕಾರ ರಾಜ್ಯಪತ್ರದ ಮೂಲಕ ಅಧಿಸೂಚನೆ ಹೊರಡಿಸಿದೆ.

ಬಿಬಿಎಂಪಿ ವಾರ್ಡ್‍ಗಳ ಸಂಖ್ಯೆಯನ್ನು 225ಕ್ಕಿಂತ ಕಡಿಮೆ ಇಲ್ಲದಂತೆ 250ರವರೆಗೆ ಹೆಚ್ಚಳ ಮಾಡಲು ಅಧಿಸೂಚನೆ ಹೊರಡಿಸಿದ್ದು, ವಾರ್ಡ್‍ಗಳ ಸಂಖ್ಯೆ ಹೆಚ್ಚಳ ಸಂಬಂಧ ಕರ್ನಾಟಕ ನಗರ ಪಾಲಿಕೆಗಳ ಅಧಿನಿಯಮಕ್ಕೆ ರಾಜ್ಯಪಾಲರು ಒಪ್ಪಿಗೆ ನೀಡಿದ್ದಾರೆ.

ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ವಾರ್ಡ್‍ಗಳು ವಿಭಜನೆಯಾಗಲಿವೆ. ವಾರ್ಡ್ ಸಂಖ್ಯೆ ಹೆಚ್ಚಳ ಮಾಡುವಾಗ ವಿಧಾನಸಭಾ ಕ್ಷೇತ್ರದ ವಾರ್ಡ್‍ಗಳನ್ನು ಅದೇ ಕ್ಷೇತ್ರದ ವ್ಯಾಪ್ತಿಯಲ್ಲಿ ಪುನರ್ ವಿಂಗಡಣೆ ಮಾಡಿ ವಾರ್ಡ್ ಸಂಖ್ಯೆ ಹೆಚ್ಚಿಸಬೇಕು.ಯಾವುದೇ ಕಾರಣಕ್ಕೂ ಒಂದು ಕ್ಷೇತ್ರದ ವಾರ್ಡುಗಳನ್ನು ಬೇರೆ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಗೆ ಹಂಚಬಾರದು ಎಂದು ಸ್ಪಷ್ಟಪಡಿಸಲಾಗಿದೆ. ಪ್ರತಿ ವಾರ್ಡ್‍ಗಳ ಗಡಿ ನಿರ್ಧಾರ ವಿಧಾನವನ್ನು ಸರಕಾರಕ್ಕೆ ಶಿಫಾರಸು ಮಾಡಲು ಗಡಿ ನಿರ್ಧಾರ ಆಯೋಗ ರಚನೆ ಮಾಡಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಬೆಂಗಳೂರು ನಗರಕ್ಕೆ ಹೊಂದಿಕೊಂಡಿರುವ ಪ್ರದೇಶ ಹೀಗಾಗಲೇ ಸಾಕಷ್ಟು ಅಭಿವೃದ್ಧಿಯಾಗಿದ್ದರೂ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿವೆ. ಹಾಗಾಗಿ, ಈ ಪ್ರದೇಶಗಳು ಬಿಬಿಎಂಪಿಗೆ ಸೇರಲಿದ್ದು, ಬಿಬಿಎಂಪಿ ವ್ಯಾಪ್ತಿಯನ್ನು 800 ಚದರ ಕಿ.ಮೀ.ಯಿಂದ 1 ಸಾವಿರ ಚದರ ಕಿ.ಮೀ.ಗೆ ಏರಿಕೆಯಾಗಲಿದೆ.

ವಿಧಾನಸಭೆಯಲ್ಲಿ ಒಪ್ಪಿಗೆ: ಕಳೆದ ವಿಧಾನಸಭೆ ಅಧಿವೇಶನದಲ್ಲಿ ಶಾಸಕ ಎಸ್.ರಘು ನೇತೃತ್ವದ ಜಂಟಿ ಪರಿಶೀಲನಾ ಸಮಿತಿಯ ಸಲ್ಲಿಸಿರುವ ವಿಶೇಷ ವರದಿದಲ್ಲಿ ಬಿಬಿಎಂಪಿ ವಾರ್ಡ್‍ಗಳ ಸಂಖ್ಯೆಯನ್ನು 198ರಿಂದ 250ಕ್ಕೆ ಹೆಚ್ಚಳ ಮಾಡುವಂತೆ ಶಿಫಾರಸು ಮಾಡಲಾಗಿತ್ತು. ಅದಕ್ಕೆ ವಿಧಾನಸಭೆಯಲ್ಲಿ ಒಪ್ಪಿಗೆ ನೀಡಲಾಗಿತ್ತು. ಇದಕ್ಕೆ ಪೂರಕವಾಗಿ ಕರ್ನಾಟಕ ನಗರ ಪಾಲಿಕೆಗಳ ಅಧಿನಿಯಮ-1976ರ ನಿಯಮಾವಳಿಯಲ್ಲಿ ಸಣ್ಣ ಪ್ರಮಾಣದ ತಿದ್ದುಪಡಿ ಮಾಡಿ 200 ವಾರ್ಡ್‍ಗಳ ಹೆಸರಿನ ಬದಲಿಗೆ 250 ಎಂಬ ಪದ ಪ್ರಯೋಗಕ್ಕೆ ಒಪ್ಪಿಗೆ ಪಡೆಯಲಾಗಿತ್ತು.

ನವೆಂಬರ್ ಅಂತ್ಯದವರೆಗೆ ಗಡುವು
2020ನೇ ಸಾಲಿನ ಬಿಬಿಎಂಪಿ ವಿಧೇಯಕವನ್ನು ಪರಿಶೀಲಿಸಲು ಶಾಸಕ ಎಸ್.ರಘು ನೇತೃತ್ವದಲ್ಲಿ ವಿಧಾನ ಮಂಡಲ ಜಂಟಿ ಪರಿಶೀಲನಾ ಸಮಿತಿಯನ್ನು ರಚನೆ ಮಾಡಲಾಗಿದೆ. ಆದರೆ, ಸಮಿತಿಯು ತನ್ನ ಅಂತಿಮ ವರದಿ ಸಲ್ಲಿಸಲು ನವೆಂಬರ್ ಅಂತ್ಯದವರೆಗೆ ಗಡುವು ಪಡೆದಿದ್ದು, ಅಲ್ಲಿಯವರೆಗೆ ವಿಧೇಯಕಕ್ಕೆ ಒಪ್ಪಿಗೆ ದೊರೆಯುವುದು ಅನುಮಾನ ಎಂಬಂತಾಗಿದೆ. ಇದರ ನಡುವೆ ಸೆ.15ರಂದು ಸಮಿತಿಯು ಒಂದು ಪುಟದ ವಿಶೇಷ ವರದಿ ಸಲ್ಲಿಸಿ ಬಿಬಿಎಂಪಿಯ ಚುನಾಯಿತ ಸದಸ್ಯರ ಅವಧಿ ಮುಗಿದಿದ್ದು ಮಹಾನಗರ ಪಾಲಿಕೆಗೆ ಚುನಾವಣೆ ನಡೆಸಬೇಕಾಗಿರುತ್ತದೆ.

ಪ್ರಸ್ತುತ ವಿದ್ಯಮಾನಗಳು ಬೆಂಗಳೂರು ಮಹಾನಗರದಲ್ಲಿ ಹೆಚ್ಚಳವಾದ ಜನಸಂಖ್ಯೆ ಹಾಗೂ ವಿಸ್ತೀರ್ಣದ ಆಧಾರದ ಮೇಲೆ 1976ನೇ ಸಾಲಿನ ಕರ್ನಾಟಕ ನಗರ ಪಾಲಿಕೆಗಳ ಅಧಿನಿಯಮ ಪ್ರಕರಣ 7ಕ್ಕೆ ತಿದ್ದುಪಡಿ ತಂದು ವಾರ್ಡ್ ಹೆಚ್ಚಳಕ್ಕೆ ಅವಕಾಶ ಮಾಡಿಕೊಡಬೇಕು. ಇದಕ್ಕಾಗಿ 1976ನೇ ಸಾಲಿನ ಕರ್ನಾಟಕ ನಗರ ಪಾಲಿಕೆಗಳ ಅಧಿನಿಯಮ 7(1)ನೇ ಉಪ ಪ್ರಕರಣದ (ಎ) ಖಂಡರದಲ್ಲಿ 200 ಬದಲಿಗೆ 250 ಎಂಬ ಪದ ಪ್ರಯೋಗಿಸಬೇಕು ಎಂದು ವರದಿ ನೀಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X