Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಯಾವುದೇ ಪಕ್ಷ ಯಾವುದೇ ಕುತಂತ್ರ ಮಾಡಿದರೂ...

ಯಾವುದೇ ಪಕ್ಷ ಯಾವುದೇ ಕುತಂತ್ರ ಮಾಡಿದರೂ ಜಯ ನಮ್ಮದು: ಡಿ.ಕೆ ಶಿವಕುಮಾರ್

ಉಪಚುನಾವಣೆ

ವಾರ್ತಾಭಾರತಿವಾರ್ತಾಭಾರತಿ4 Oct 2020 8:04 PM IST
share
ಯಾವುದೇ ಪಕ್ಷ ಯಾವುದೇ ಕುತಂತ್ರ ಮಾಡಿದರೂ ಜಯ ನಮ್ಮದು: ಡಿ.ಕೆ ಶಿವಕುಮಾರ್

ಬೆಂಗಳೂರು, ಅ. 4: ಮುಂಬರುವ ಶಿರಾ ಹಾಗೂ ರಾಜರಾಜೇಶ್ವರಿ ನಗರ ಕ್ಷೇತ್ರಗಳ ಉಪಚುನಾವಣೆ ಅಭ್ಯರ್ಥಿಗಳ ಶಿಫಾರಸ್ಸು ಪಟ್ಟಿಯನ್ನು ಹೈಕಮಾಂಡ್‍ಗೆ ನಾವು ಕಳುಹಿಸಿಕೊಡುತ್ತೇವೆ. ಅಂತಿಮ ತೀರ್ಮಾನವನ್ನು ರಾಷ್ಟ್ರೀಯ ನಾಯಕರು ತೆಗೆದುಕೊಳ್ಳುತ್ತಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಮಾಜಿ ಪಕ್ಷದ ಮುಖಂಡ ಹನುಮಂತರಾಯಪ್ಪ ಅವರ ಪುತ್ರಿ ಕುಸುಮಾ ಹಾಗೂ ಶಿರಾ ವಿಧಾನಸಭಾ ಕ್ಷೇತ್ರದ ನೂರಕ್ಕೂ ಹೆಚ್ಚು ಸ್ಥಳೀಯ ನಾಯಕರನ್ನು ಕೆಪಿಸಿಸಿ ಕಚೇರಿಯಲ್ಲಿ ರವಿವಾರ ಪಕ್ಷಕ್ಕೆ ಸೇರಿಸಿಕೊಂಡ ಸಂದರ್ಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಯಾರಾಗಬೇಕು ಎಂದು ಶಿಫಾರಸ್ಸು ಮಾಡಲು ಈಗಾಗಲೇ ಅನೇಕ ಚರ್ಚೆ ಮಾಡಿದ್ದೇವೆ. ಇಂದು ದಿಲ್ಲಿಗೆ ಅಭ್ಯರ್ಥಿಗಳ ಹೆಸರನ್ನು ಶಿಫಾರಸ್ಸು ಮಾಡಲಾಗುವುದು.

ಶಿರಾ ಕ್ಷೇತ್ರದಲ್ಲಿ ನಮ್ಮ ಹಿರಿಯ ನಾಯಕ ಜಯಚಂದ್ರ ಅವರು ಕಳೆದ ಚುನಾವಣೆಯಲ್ಲಿ 10 ಸಾವಿರ ಮತಗಳ ಅಂತರದಲ್ಲಿ ಸೊತ್ತಿದ್ದರು. ಈ ಬಾರಿ ಇಡೀ ಜಿಲ್ಲೆ ಒಟ್ಟಾಗಿ ಪಕ್ಷದ ಗೆಲುವಿಗೆ ಶ್ರಮಿಸಲಿದೆ. ಶಿರಾ ಕ್ಷೇತ್ರದ ಪ್ರಮುಖ ನಾಯಕರು ನಮ್ಮ ಸಿದ್ಧಾಂತ ಹಾಗೂ ನಾಯಕತ್ವ ನಂಬಿ ಪಕ್ಷಕ್ಕೆ ಆಗಮಿಸಿದ್ದಾರೆ. ಈ ರಾಜ್ಯದಲ್ಲಿನ ಆಡಳಿತ, ತಮ್ಮ ಕ್ಷೇತ್ರದಲ್ಲಿನ ಅಹಿತಕರ ಘಟನೆಗಳನ್ನು ಕಂಡು ಮುಂದಿನ ದಿನದಲ್ಲಿ ರಾಜ್ಯಕ್ಕೆ ಕಾಂಗ್ರೆಸ್ ಅನಿವಾರ್ಯ ಎಂದು ಅರಿತು 100ಕ್ಕೂ ಹೆಚ್ಚು ಶಿರಾದ ವಕೀಲರು ಹಾಗೂ ನಾಯಕರು ಪಕ್ಷಕ್ಕೆ ಸೇರಿದ್ದಾರೆ ಎಂದು ತಿಳಿಸಿದರು.

ಯುವಕರ ಒಲವು: ಕಾಂಗ್ರೆಸ್ ಸೇರಲು ಬಹಳ ಸಂಖ್ಯೆಯಲ್ಲಿ ಯುವಕರು ಉತ್ಸಾಹ ತೋರುತ್ತಿದ್ದಾರೆ. ನಾನು ಶ್ರೀಮತಿ ಸೋನಿಯಾ ಗಾಂಧಿ ಅವರ ಪರವಾಗಿ ಪಕ್ಷದ ಕಾರ್ಯಕರ್ತರು ಹಾಗೂ ನಾಯಕರ ಪರವಾಗಿ ಶಿರಾ ಮುಖಂಡರಿಗೆ ಸ್ವಾಗತ ಕೋರುತ್ತೇನೆ. ಇವರ ಆಗಮನ ಪಕ್ಷಕ್ಕೆ ಜಯ ತಂದುಕೊಡಲಿದೆ ಎಂಬ ವಿಶ್ವಾಸ ಇದೆ. ಇವರು ಪ್ರತಿ ಹಳ್ಳಿ, ಬೂತ್ ಮಟ್ಟದ ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಚುನಾವಣೆ ನಡೆಸುವ ನಂಬಿಕೆ ಇದೆ ಎಂದು ಶಿವಕುಮಾರ್ ಹೇಳಿದರು.

ಪಕ್ಷದಲ್ಲಿ ಹೊಸಬರು ಹಳಬರು ಎಂದು ನೋಡದೇ ಒಂದು ಕುಟುಂಬವಾಗಿ ಕೆಲಸ ಮಾಡಬೇಕಿದೆ. ಇಡೀ ರಾಜ್ಯ ಶಿರಾ ಕ್ಷೇತ್ರದ ಮತದಾರ ಯಾವ ತೀರ್ಪು ನೀಡಲಿದ್ದಾರೆ ಎಂದು ಕಾದುಕುಳಿತಿದೆ. ನಮ್ಮ ಸಿದ್ಧಾಂತ ನಂಬಿ ಷರತ್ತು ಇಲ್ಲದೆ ಬರುವವರನ್ನು ಸೇರಿಸಿಕೊಳ್ಳುವ ಬಗ್ಗೆ ಸಮಿತಿಯಲ್ಲಿ ಚರ್ಚಿಸಿ ತೀರ್ಮಾನಿಸಲಾಗುವುದು.

ಗೆಲುವು ನಮ್ಮದೇ: ಸರಕಾರ ಇದೆ ಹೀಗಾಗಿ ಉಪಚುನಾವಣೆ ಗೆಲ್ಲುತ್ತೇವೆ ಎಂದು ಹೇಳುತ್ತಿರುವ ಸಮಯದಲ್ಲಿ ನೂರಾರು ಸ್ಥಳೀಯ ನಾಯಕರು ತಮ್ಮ ಬೆಂಬಲವನ್ನು ವ್ಯಕ್ತಪಡಿಸುತ್ತಿರುವುದು ಪ್ರಮುಖ ಬೆಳವಣಿಗೆಯಾಗಿದೆ. ಈ ಕ್ಷೇತ್ರದಲ್ಲಿ ಯಾವುದೇ ಪಕ್ಷ ಯಾವುದೇ ಕುತಂತ್ರ ಮಾಡಿದರೂ ಇಲ್ಲಿ ಜಯ ನಮ್ಮದು. ಈ ಚುನಾವಣೆ ಟಿ.ಬಿ ಜಯಚಂದ್ರ, ಡಾ.ಜಿ ಪರಮೇಶ್ವರ್, ರಾಜಣ್ಣ ಹಾಗೂ ಚಂದ್ರಪ್ಪ ಅವರ ನೇತೃತ್ವದಲ್ಲಿ ನಡೆಯಲಿದೆ. ನಾನು, ಸಿದ್ದರಾಮಯ್ಯನವರು ಹಾಗೂ ಪಕ್ಷದ ಇತರ ಹಿರಿಯ ನಾಯಕರು ಇವರ ಜತೆ ಜವಾಬ್ದಾರಿ ಹೊರುತ್ತೇವೆ ಎಂದು ಡಿ.ಕೆ.ಶಿವಕುಮಾರ್ ಭರವಸೆಯನ್ನಿತ್ತರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X