Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು ವಿವಿ ಆವರಣದಲ್ಲಿ ಯೋಗ ವಿವಿಗೆ...

ಬೆಂಗಳೂರು ವಿವಿ ಆವರಣದಲ್ಲಿ ಯೋಗ ವಿವಿಗೆ ಭೂಮಿ ನೀಡುವ ನಿರ್ಧಾರ ಹಿಂಪಡೆಯಲು ಎಚ್‍ಡಿಕೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ4 Oct 2020 8:11 PM IST
share
ಬೆಂಗಳೂರು ವಿವಿ ಆವರಣದಲ್ಲಿ ಯೋಗ ವಿವಿಗೆ ಭೂಮಿ ನೀಡುವ ನಿರ್ಧಾರ ಹಿಂಪಡೆಯಲು ಎಚ್‍ಡಿಕೆ ಆಗ್ರಹ

ಬೆಂಗಳೂರು, ಅ. 4: `ಜೀವವೈವಿಧ್ಯದ ತಾಣವಾಗಿರುವ ಬೆಂಗಳೂರು ವಿಶ್ವವಿದ್ಯಾಲಯ ಆವರಣದ ಒಟ್ಟು 32 ಎಕರೆ ಪ್ರದೇಶವನ್ನು ಯೋಗ ವಿ.ವಿ ಮತ್ತು ಇತರೆ ಎರಡು ಸಂಸ್ಥೆಗಳಿಗೆ ನೀಡಿರುವ ಸರಕಾರದ ನಿರ್ಧಾರವನ್ನು ತಕ್ಷಣವೇ ವಾಪಸ್ ಪಡೆಯಬೇಕು' ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್. ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ರವಿವಾರ ಸರಣಿ ಟ್ವೀಟ್ ಮಾಡಿರುವ ಅವರು, `ಸುಮಾರು ಎರಡು ದಶಕಗಳಿಂದ ಪರಿಸರ ತಜ್ಞರು ಶ್ರಮವಹಿಸಿ ಬೆಳೆಸಿದ ಈ ತಾಣವನ್ನು ಸರಕಾರ ಯಾವುದೇ ಸಮಾಲೋಚನೆ ನಡೆಸದೆ ಏಕಾಏಕಿ ಜೀವವೈವಿಧ್ಯ ತಾಣಕ್ಕೆ ಕುತ್ತು ತರುವ ನಿರ್ಧಾರ ಕೈಗೊಂಡಿರುವುದು ತೀವ್ರ ಅಪಾಯಕಾರಿ. ಹಿರಿಯ ಪರಿಸರ ತಜ್ಞ ಯಲ್ಲಪ್ಪರೆಡ್ಡಿ ಅವರು ತಮಗೆ ಸರಕಾರ ನೀಡಿದ್ದ `ಗೌರವ ಡಾಕ್ಟರೇಟ್' ಹಿಂತಿರುಗಿಸುವ ಮೂಲಕ ತಮ್ಮ ಸಾತ್ವಿಕ ಸಿಟ್ಟನ್ನು ಪ್ರಕಟಿಸಿದ್ದಾರೆ. ಇದಕ್ಕೆ ಪರಿಸರ ಪ್ರೇಮಿಗಳು ಬೆಂಬಲ ಸೂಚಿಸಿದ್ದಾರೆ' ಎಂದು ತಿಳಿಸಿದ್ದಾರೆ.

'ಯೋಗ ವಿ.ವಿ.ಗೆ 15 ಎಕರೆ, ಗುಲ್ಬರ್ಗಾ ವಿ.ವಿ.ಗೆ 15 ಎಕರೆ, ಸಿಬಿಎಸ್‍ಸಿ ದಕ್ಷಿಣ ಭಾರತದ ಕಚೇರಿಗೆ 2 ಎಕರೆ ಸೇರಿದಂತೆ ಒಟ್ಟು 32 ಎಕರೆಯನ್ನು ನೀಡಿರುವ ಕ್ರಮದಿಂದ ಬೆಂಗಳೂರು ವಿವಿ ಆವರಣ ಕಾಂಕ್ರೀಟ್ ಕಾಡಾಗಲಿದೆ. ಈ ಸಂಸ್ಥೆಗಳಿಗೆ ಬೇರೆ ಕಡೆ ಸ್ಥಳ ನೀಡುವ ಮೂಲಕ ಈ ಜೀವವೈವಿಧ್ಯ ತಾಣವನ್ನು ಸರಕಾರ ಉಳಿಸಬೇಕು. ಬೆಂಗಳೂರು ವಿವಿ ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರ ಸಹಕಾರದಿಂದ 20 ವರ್ಷಗಳಲ್ಲಿ ನಿರ್ಮಾಣಗೊಂಡ ಜೀವವೈವಿಧ್ಯ ವನದ ನಡುವೆ ಮೂರು ಸಂಸ್ಥೆಗಳಿಗೆ ಭೂಮಿ ನೀಡಲು ಮುಂದಾಗಿರುವ ವಿ.ವಿ ಮತ್ತು ಸರಕಾರದ ಕ್ರಮ ಖಂಡನೀಯ. ಇದರಿಂದ `ಕುಂಬಾರನಿಗೆ ವರುಷ, ದೊಣ್ಣೆಗೆ ನಿಮಿಷ' ಎಂಬಂತೆ ಇಡೀ ಸಸ್ಯ ಸಂಪತ್ತು ನಾಶವಾಗಲಿದೆ' ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

`ಹಿಂದೆ ಉಪಕುಲಪತಿಗಳಾಗಿದ್ದ ಡಾ.ಕೆ.ಸಿದ್ದಪ್ಪನವರು ಇದೊಂದು ಬಯಲು ಪ್ರಯೋಗಾಲಯವಾಗಲಿದೆ ಎಂದು ನಿರೀಕ್ಷಿಸಿ ಜೀವವೈವಿಧ್ಯವನಕ್ಕೆ ಚಾಲನೆ ನೀಡಿದ್ದರು. ಅಂತೆಯೇ ಇದೀಗ ಸಸ್ಯಶಾಸ್ತ್ರ, ಪ್ರಾಣಿಶಾಸ್ತ್ರ, ಭೂಗರ್ಭಶಾಸ್ತ್ರ, ಪರಿಸರ ವಿಜ್ಞಾನ, ಸಾಮಾಜಿಕ ವಿಜ್ಞಾನಗಳ ವಿದ್ಯಾರ್ಥಿಗಳಿಗೆ ಇದೊಂದು ಬಯಲು ಪ್ರಯೋಗಾಲಯವಾಗಿ ನೂರಾರು ಸಂಶೋಧನೆಗಳು ನಡೆಯುತ್ತಿವೆ. ಇಂತಹ ತಾಣವನ್ನು ಧ್ವಂಸ ಮಾಡಬಾರದು. ಮುಂದಿನ ಪೀಳಿಗೆಗೆ ಉಳಿಸಬೇಕು. ಬೆಳೆಸಬೇಕು' ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X