ಉಡುಪಿ: ರವಿವಾರ 231 ಮಂದಿಗೆ ಕೋವಿಡ್ ಸೋಂಕು ದೃಢ

ಉಡುಪಿ, ಅ.4: ರಾಜ್ಯ ಆರೋಗ್ಯ ಇಲಾಖೆ ರವಿವಾರ ಸಂಜೆ ಪ್ರಕಟಿಸಿದ ಕೋವಿಡ್- 19 ರಾಜ್ಯ ಬುಲೆಟಿನ್‌ನಲ್ಲಿ ಉಡುಪಿ ಜಿಲ್ಲೆಯಲ್ಲಿ 231 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. ಇದರಿಂದ ಜಿಲ್ಲೆಯಲ್ಲಿ ಈವರೆಗೆ ಪಾಸಿಟಿವ್ ದೃಢಪಟ್ಟವರ ಸಂಖ್ಯೆ 18 ಸಾವಿರದ ಗಡಿದಾಟಿ 18,020 ಆಗಿದೆ.
ಅಲ್ಲದೇ ದಿನದಲ್ಲಿ 59 ಮಂದಿ ಸೋಂಕಿನಿಂದ ಗುಣಮುಖರಾಗಿ ವಿವಿಧ ಕೋವಿಡ್ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, ಹೀಗೆ ಮನೆಗೆ ತೆರಳಿದವರ ಒಟ್ಟು ಸಂಖ್ಯೆ 15,721ಕ್ಕೇರಿದೆ. ಜಿಲ್ಲೆಯಲ್ಲಿ ಸದ್ಯ 2145 ಸಕ್ರೀಯ ಕೋವಿಡ್ ಪ್ರಕರಣಗಳಿವೆ.
ಮುಷ್ಕರ ಮುಂದುವರಿಕೆ: ಭಾರತೀಯ ಮಜ್ದೂರ್ ಸಂಘ, ಆರೋಗ್ಯ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ ಮತ್ತು ರಾಷ್ಟ್ರೀಯ ಆರೋಗ್ಯ ಅಭಿಯಾನದ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸೆ.24ರಿಂದ ನಡೆಸುತ್ತಿರುವ ಮುಷ್ಕರ ರವಿವಾರವೂ ಮುಂದುವರಿದಿದೆ.
Next Story





