ಮತ್ತೊಮ್ಮೆ ತಂಡಕ್ಕೆ ಆಸರೆಯಾದ ಕೆ.ಎಲ್ ರಾಹುಲ್: ಚೆನ್ನೈಗೆ 179 ರನ್ ಗುರಿ ನೀಡಿದ ಪಂಜಾಬ್

ದುಬೈ: ಆರಂಭಿಕ ಆಟಗಾರ ಕೆ.ಎಲ್ ರಾಹುಲ್ ಬಾರಿಸಿದ ಅರ್ಧಶತಕದ ನೆರವಿನಿಂದ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡವು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಉತ್ತಮ ರನ್ ಪೇರಿಸಿದ್ದು, ಗೆಲುವಿಗೆ 179 ರನ್ ಗುರಿ ನೀಡಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಕಿಂಗ್ಸ್ ಇಲೆವೆನ್ ಪಂಜಾಬ್ ನಿಗದಿತ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 178 ರನ್ ಗಳಿಸಿತು.
ಆರಂಭಿಕ ಆಟಗಾರ, ನಾಯಕ ಕೆ.ಎಲ್ ರಾಹುಲ್ ಮತ್ತೊಮ್ಮೆ ತಂಡಕ್ಕೆ ಆಸರೆಯಾದರು. ಅವರು 52 ಎಸೆತಗಳಲ್ಲಿ 63 ರನ್ ಗಳಿಸಿ ಔಟಾದರು. ನಿಕೋಲಸದ ಪೂರನ್ 17 ಎಸೆತಗಳಲ್ಲಿ 33 ರನ್ ಸಿಡಿಸಿದರು. ಮಂದೀಪ್ ಸಿಂಗ್ 27, ಮಯಾಂಕ್ ಅಗರವಾಲ್ 26 ರನ್ ಬಾರಿಸಿದರು.
ಚೆನ್ನೈ ಪರ ಶಾರ್ದೂಲ್ ಠಾಕೂರ್ 2 ವಿಕೆಟ್ ಪಡೆದರು.
Next Story





