ರಾಜಧಾನಿಯಲ್ಲಿ 4,340 ಕೊರೋನ ಪ್ರಕರಣಗಳು ದೃಢ: 22 ಮಂದಿ ಸಾವು

ಬೆಂಗಳೂರು, ಅ. 4: ನಗರದಲ್ಲಿ ರವಿವಾರ ಒಂದೇ ದಿನ 4,340 ಜನರಿಗೆ ಕೊರೋನ ಸೋಂಕು ದೃಢಪಟ್ಟಿದೆ. 2681 ಸೋಂಕಿತರು ಬಿಡುಗಡೆಯಾಗಿದ್ದು, 22 ಜನರು ಮೃತರಾಗಿದ್ದಾರೆ.
ನಗರದಲ್ಲಿ ಒಟ್ಟು 2,50,040 ಸೋಂಕಿತರು ದೃಢಪಟ್ಟಿದ್ದು, ಇಲ್ಲಿಯವರೆಗೆ ನಗರದಲ್ಲಿ 3,067 ಜನರು ಸೋಂಕಿಗೆ ಬಲಿಯಾಗಿದ್ದಾರೆ. 1,92,043 ಜನರು ಇಲ್ಲಿಯವರೆಗೆ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳು ಒಳಗೊಂಡಂತೆ 54,929 ಜನ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿರುವ 150 ಜ್ವರ ಚಿಕಿತ್ಸಾಲಯದಲ್ಲಿ ಒಟ್ಟು 2,99,578 ವ್ಯಕ್ತಿಗಳಿಗೆ ತಪಾಸಣೆ ಮಾಡಲಾಗಿದೆ.
ಶನಿವಾರದ ಬಿಬಿಎಂಪಿ ಕೋವಿಡ್ ವರದಿ ಪ್ರಕಾರ ನಗರದಲ್ಲಿ ಒಟ್ಟು ಸಕ್ರಿಯ 16 ಕಂಟೈನ್ಮೆಂಟ್ ಝೋನ್‍ಗಳಿವೆ. ನಗರದ 6,76,134 ಪ್ರಾಥಮಿಕ ಸಂಪರ್ಕಿತರನ್ನು ಗುರುತಿಸಲಾಗಿದ್ದು, ದ್ವಿತೀಯ ಸಂಪರ್ಕಿತ 8,08,961 ಜನರನ್ನು ಗುರುತಿಸಲಾಗಿದೆ. ನಗರದಲ್ಲಿ 17,88,857 ಜನರಿಗೆ ಕೊರೋನ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ ಪಾಸಿಟಿವ್ ಪ್ರಮಾಣ ಶೇ.13.77ರಷ್ಟಿದೆ. ಕೊರೋನಕ್ಕೆ ಮೃತರಾಗುತ್ತಿರುವ ಪ್ರಮಾಣ ಶೇ.1.24ರಷ್ಟಿದ್ದು, ಗುಣಮುಖರಾಗುತ್ತಿರುವ ಪ್ರಮಾಣ ಶೇ.79.07ರಷ್ಟಿದೆ.





