ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಸುಲಿಗೆಗೆ ಯತ್ನ: ಸಿಸಿಟಿವಿಯಲ್ಲಿ ಕೃತ್ಯ ಸೆರೆ
ಬೆಂಗಳೂರು, ಅ. 4: ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಸುಲಿಗೆ ಮಾಡಲು ಯತ್ನಿಸಿರುವ ಘಟನೆ ಸುಬ್ರಹ್ಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇಲ್ಲಿನ ಉತ್ತರಹಳ್ಳಿಯ ಮುಖ್ಯ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ದುಷ್ಕರ್ಮಿಗಳ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸೆ.30ರಂದು ವರದರಾಜು ಎಂಬುವರು ಉತ್ತರಹಳ್ಳಿ ಮುಖ್ಯ ರಸ್ತೆಯಲ್ಲಿ ಇದ್ದ ವೇಳೆ ಬೈಕ್ ನಲ್ಲಿ ಹೆಲ್ಮೆಟ್ ಧರಿಸಿ ಬಂದಿದ್ದ ಇಬ್ಬರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಏಕಾಏಕಿ ಹಲ್ಲೆ ಮಾಡಿ ಹಣದ ಬ್ಯಾಗ್ ನೀಡುವಂತೆ ವರದರಾಜ್ ಅವರನ್ನು ಬೆದರಿಸಿದ್ದಾರೆ. ಇದಕ್ಕೆ ವಿರೋಧ ವ್ಯಕ್ತಪಡಿಸಿದ ವರದರಾಜ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಸಾರ್ವಜನಿಕರು ಸಹಾಯಕ್ಕೆ ಬಂದ ಹಿನ್ನೆಲೆ ಸ್ಥಳದಿಂದ ದುಷ್ಕರ್ಮಿಗಳು ಕಾಲ್ಕಿತ್ತಿದ್ದಾರೆ.
ಆರೋಪಿಗಳ ಸಂಪೂರ್ಣ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಸಂಬಂಧ ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.
Next Story