Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೊರೋನ ಸೋಂಕು ತಡೆಗೆ ಕಟ್ಟುನಿಟ್ಟಿನ...

ಕೊರೋನ ಸೋಂಕು ತಡೆಗೆ ಕಟ್ಟುನಿಟ್ಟಿನ ಮುಂಜಾಗ್ರತ ಕ್ರಮ ಪಾಲಿಸಲು ದ.ಕ. ಡಿಸಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ5 Oct 2020 8:11 PM IST
share

ಮಂಗಳೂರು, ಅ.5: ದ.ಕ.ಜಿಲ್ಲೆಯಲ್ಲಿ ಕೊರೋನ ಸೋಂಕು ಹರಡದಂತೆ ‘ತೆರವು-5 ಮಾರ್ಗಸೂಚಿ’ಗಳ ಅನ್ವಯ ಕಟ್ಟುನಿಟ್ಟಾಗಿ ಕೆಲವು ಮುಂಜಾಗ್ರತ ಕ್ರಮಗಳನ್ನು ಪಾಲಿಸುವಂತೆ ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಆದೇಶ ಹೊರಡಿಸಿರುತ್ತಾರೆ.

ಅದರಂತೆ ಶಾಲೆಗಳು, ಕಾಲೇಜುಗಳ, ಶಿಕ್ಷಣ ಮತ್ತು ತರಬೇತಿ ಸಂಸ್ಥೆಗಳು ಪರಿಸ್ಥಿತಿಯ ಆಧಾರದ ಮೇಲೆ ಅಕ್ಟೋಬರ್ 15ರ ನಂತರ ಹಂತ-ಹಂತವಾಗಿ ಸೂಕ್ತ ತೀರ್ಮಾನ ತೆಗೆದುಕೊಳ್ಳಬಹುದಾಗಿದೆ. ಈಗಾಗಲೆ ಕೆಲವು ಶಾಲೆಗಳಲ್ಲಿ ಆನ್‌ಲೈನ್ ತರಗತಿಗಳನ್ನು ನಡೆಸಲಾಗುತ್ತಿದೆ. ಆದಾಗ್ಯೂ ಕೆಲವು ವಿದ್ಯಾರ್ಥಿಗಳು ಶಾಲೆಗೆ ಬರಲು ಆಸಕ್ತಿ ತೋರಿದಲ್ಲಿ ತಂದೆ-ತಾಯಿ ಮತ್ತು ಪೋಷಕರ ಲಿಖಿತ ಅನುಮತಿ ಪಡೆದು ಪ್ರವೇಶಕ್ಕೆ ಅನುಮತಿ ನೀಡಬಹುದಾಗಿದೆ.

ಕ್ರೀಡಾಪಟುಗಳ ತರಬೇತಿಗಾಗಿ ಬಳಸುತ್ತಿರುವ ಈಜುಕೊಳಗಳನ್ನು ಅ.15ರಿಂದ ಜಾರಿಗೆ ಬರುವಂತೆ ತೆರೆಯಲು ಅನುಮತಿ ನಿಡಲಾಗುವುದು. ಕಂಟೈನ್‌ಮೆಂಟ್ ವಲಯಗಳನ್ನು ಹೊರತುಪಡಿಸಿದ ಪ್ರದೇಶಗಳಲ್ಲಿ ಮಾತ್ರ ಸಿನಿಮಾ ಮಂದಿರಗಳು/ರಂಗಮಂದಿರಗಳು/ಮಲ್ಟಿಫ್ಲೆಕ್ಸ್‌ಗಳನ್ನು ಅ.15ರಿಂದ ಜಾರಿಗೆ ಬರುವಂತೆ ಅವುಗಳ ಒಟ್ಟು ಆಸನ ಸಾಮರ್ಥ್ಯದ ಶೇ.50ರಷ್ಟು ಮಂದಿಗೆ ಮಾತ್ರ ಅವಕಾಶ ನೀಡಿ ತೆರೆಯಲು ಅನುಮತಿ ಸಲಾಗುವುದು. ಮನೋರಂಜನಾ ಉದ್ಯಾನಗಳು ಮತ್ತು ಅದೇ ರೀತಿಯ ಸ್ಧಳಗಳನ್ನು ಅ.15ರಿಂದ ತೆರೆಯಲು ಅನುಮತಿಸಲಾಗುವುದು.

ಕಂಟೈನ್‌ಮೆಂಟ್ ವಲಯಗಳಲ್ಲಿನ ಲಾಕ್‌ಡೌನ್ ಪ್ರಸಕ್ತ ಸಾಲಿನ ಅಕ್ಟೋಬರ್ 31ರವರೆಗೆ ಮುಂದುವರಿಯಲಿದೆ. ಪ್ರಸರಣ ಸರಪಳಿಯನ್ನು ಪರಿಣಾಮಕಾರಿಯಾಗಿ ಮುರಿಯುವ ಉದ್ದೇಶದಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮಾರ್ಗಸೂಚಿಯನ್ನು ಗಣನೆಗೆ ತೆಗೆದುಕೊಂಡು ಮಹಾನಗರಪಾಲಿಕೆ/ಜಿಲ್ಲಾ ಪ್ರಾಧಿಕಾರಗಳು ತಳಮಟ್ಟದಲ್ಲಿ ಕಂಟೈನ್‌ಮೆಂಟ್ ವಲಯಗಳನ್ನು ಗುರುತಿಸಲಾಗುವುದು. ಜಿಲ್ಲಾಧಿಕಾರಿಯೊಂದಿಗೆ ಸಮಾಲೋಚನೆ ನಡೆಸದೆ ಕಂಟೈನ್‌ಮೆಂಟ್ ವಲಯಗಳ ಹೊರಗೆ ಯಾವುದೇ ಸ್ಥಳೀಯ ಲಾಕ್‌ಡೌನ್‌ನ್ನು (ಮಹಾನಗರ ಪಾಲಿಕೆ /ತಾಲ್ಲೂಕು/ನಗರ ಸ್ಥಳೀಯ ಸಂಸ್ಥೆ/ಗ್ರಾಪಂ) ವಿಧಿಸುವಂತಿಲ್ಲ.

ಪ್ರಯಾಣಿಕರ ರೈಲುಗಳ ಚಲನೆ, ದೇಶೀಯ ಪ್ರಯಾಣಿಕರ ವಿಮಾನ ಪ್ರಯಾಣ, ವಂದೇ ಭಾರತ್ ಮತ್ತು ಏರ್‌ಟ್ರಾನ್ಸ್ ಪೋರ್ಟ್‌ಬಲ್ ಫ್ಲೈಟ್‌ಗಳಲ್ಲಿ ವ್ಯಕ್ತಿಗಳ ಓಡಾಟ ಮತ್ತು ಭಾರತೀಯ ಪ್ರಯಾಣಿಕ/ಸರಕು ಸಾಗಾಣೆ ಹಡಗುಗಳ ಆಗಮನ ಮತ್ತು ನಿರ್ಗಮನದ ಮೇಲೆ ಕೇಂದ್ರ ಸರಕಾರದ ಸಂಬಂಧಪಟ್ಟ ಇಲಾಖೆಗಳು ಹೊರಡಿಸಿದ ಎಸ್‌ಒಪಿಗಳಿಗೆ ಅನುಸಾರವಾಗಿ ನಿಯಂತ್ರಣ ಮುಂದುವರೆಯುತ್ತದೆ.

65 ವರ್ಷಕ್ಕಿಂತ ಮೇಲ್ಪಟ್ಟ ವಯೋಮಾನದ ವ್ಯಕ್ತಿಗಳು, ಬಹು-ಅಸ್ವಸ್ಥತೆ ಹೊಂದಿರುವ ವ್ಯಕ್ತಿಗಳು, ಗರ್ಭಿಣಿಯರು ಮತ್ತು 10 ವಷರ್ಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಅಗತ್ಯ ಮತ್ತು ಆರೋಗ್ಯ ಉದ್ಧೇಶಗಳನ್ನು ಹೊರತು ಪಡಿಸಿ ಮನೆಯಲ್ಲಿಯೇ ಇರಲು ಸಲಹೆ ನೀಡಲಾಗಿದೆ.

ಸೋಂಕಿನ ಸಂಭವನೀಯ ಅಪಾಯವನ್ನು ಮೊದಲೇ ಗುರುತಿಸಲು ಆರೋಗ್ಯ ಸೇತು ಆ್ಯಪ್ ಪ್ರಯೋಜನಕಾರಿಯಾಗಿದೆ. ಹಾಗಾಗಿ ಉದ್ಯೋಗದಾತರು, ಕಚೇರಿಗಳು ಮತ್ತು ಕರ್ತವ್ಯ ಸ್ಥಳಗಳಲ್ಲಿ ಸುರಕ್ಷತೆಯನ್ನು ಖಾತರಿಪಡಿಸುವ ಉದ್ಧೇಶದಿಂದ ಎಲ್ಲಾ ಉದ್ಯೋಗಿಗಳು ಆರೋಗ್ಯ ಸೇತು ಆ್ಯಪ್‌ನ್ನು ಅಳವಡಿಸಿಕೊಳ್ಳುವ ಸೌಲಭ್ಯ ಹೊಂದಿರುವ ಮೊಬೈಲ್ ಫೋನ್‌ಗಳನ್ನು ಹೊಂದಿದ್ದಾರೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲಾಗುವುದು.

ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ, ಕೆಲಸದ ಸ್ಥಳಗಳಲ್ಲಿ ಮತ್ತು ಪ್ರಯಾಣದ ಸಮಯದಲ್ಲಿ ಮುಖದ ಹೊದಿಕೆಯನ್ನು ಧರಿಸುವುದು ಕಡ್ಡಾಯವಾಗಿದೆ. ಅಗತ್ಯಾನುಸಾರ ಸರಿಯಾಗಿ ಮುಖದ ಹೊದಿಕೆಯನ್ನು ಧರಿಸದಿದ್ದಲ್ಲಿ ಮಹಾನಗರ ಪಾಲಿಕೆ ಪ್ರದೇಶಗಳಲ್ಲಿ 1,000 ರೂ. ಮತ್ತು ಇತರ ಪ್ರದೇಶಗಳಲ್ಲಿ 500 ರೂ. ದಂಡ ಧಿಸಲಾಗುವುದು.

ಪ್ರತಿಯೊಬ್ಬರೂ ಸಾರ್ವಜನಿಕ ಸ್ಥಳಗಳಲ್ಲಿ ಕನಿಷ್ಟ 6 ಅಡಿ ಅಂತರವನ್ನು (2 ಗಜ) ಸುರಕ್ಷಿತ ಅಂತರ ಕಾಯ್ದುಕೊಳ್ಳಬೇಕು. ಗ್ರಾಹಕರಲ್ಲಿ ದೈಹಿಕ ಅಂತರ ಇರುವುದನ್ನು ಅಂಗಡಿಗಳ ಮಾಲಕರು ಖಚಿತಪಡಿಸಿಕೊಳ್ಳಬೇಕು.ಸಾರ್ವಜನಿಕ ಸ್ಥಳಗಳಲ್ಲಿ ಉಗಿಯುವುದು ದಂಡನೀಯವಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X