Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದ.ಕ.ಜಿ.ಪಂ.ನಲ್ಲಿ 15 ದಿನಗಳಲ್ಲಿ ಹಕ್ಕು...

ದ.ಕ.ಜಿ.ಪಂ.ನಲ್ಲಿ 15 ದಿನಗಳಲ್ಲಿ ಹಕ್ಕು ಪತ್ರ ವಿತರಿಸಿ: ಕೋಟ ಶ್ರೀನಿವಾಸ ಪೂಜಾರಿ

ವಾರ್ತಾಭಾರತಿವಾರ್ತಾಭಾರತಿ5 Oct 2020 8:29 PM IST
share

ಮಂಗಳೂರು, ಅ.5: ನಿವೇಶನರಹಿತರು ಸಲ್ಲಿಸಿದ ಅರ್ಜಿಗೆ ಸಂಬಂಧಿಸಿ ಸ್ಥಳೀಯವಾಗಿ ಲಭ್ಯ ಇರುವ ನಿವೇಶನಗಳಲ್ಲಿ ಸಮಸ್ಯೆ ಇಲ್ಲವಾದಲ್ಲಿ ಅರ್ಹರಿಗೆ ಹಕ್ಕುಪತ್ರ ನೀಡುವ ಕೆಲಸವನ್ನು 15 ದಿನಗಳಲ್ಲಿ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ದ.ಕ. ಜಿಲ್ಲಾ ಪಂಚಾಯತ್‌ನ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಅವರು ಅಧಿಕಾರಿಗಳಿಗೆ ಈ ಸೂಚನೆ ನೀಡಿದರು.

ಮನೆ ನಿವೇಶನಕ್ಕೆ ಸಂಬಂಧಿಸಿದಂತೆ ಕಾಯ್ದಿರಿಸಲಾದ ಜಮೀನಿನ ಕುರಿತಾದ ಚರ್ಚೆಯ ಸಂದರ್ಭ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ, ನಗರ ಪ್ರದೇಶದಲ್ಲಿ 9000 ಹಾಗೂ ಗ್ರಾಮಾಂತರ ಪ್ರದೇಶದಲ್ಲಿ 20,000 ಮಂದಿಯಿಂದ ನಿವೇಶನಕ್ಕೆ ಅರ್ಜಿ ಸಲ್ಲಿಕೆಯಾಗಿದೆ. 120 ಎಕರೆ ಜಮೀನನ್ನು ಮೀಸಲಿರಿಸಲಾಗಿದೆ. ಹಾಗಾಗಿ ಕುಮ್ಕಿ, ಡೀಮ್ಡ್ ಫಾರೆಸ್ಟ್ ಸೇರಿದಂತೆ ಯಾವುದೇ ಸಮಸ್ಯೆ ಇಲ್ಲದ ಲಭ್ಯ ಜಮೀನಿಗೆ ಸಂಬಂಧಿಸಿ ಮುಂದಿನ 15 ದಿನಗಳಲ್ಲಿ ಹಕ್ಕು ಪತ್ರ ವಿತರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಾಗ ಮಂಜೂರಾತಿ ವೇಳೆ ರಸ್ತೆ ಗುರುತಿಸದೆ ತಕರಾರು ಎದ್ದರೆ ವಿಎಗಳೇ ಹೊಣೆ

ಗ್ರಾಮ ಪಂಚಾಯತ್ ಮಟ್ಟದಲ್ಲಿ ಯಾವುದೇ ಜಾಗವನ್ನು ಅಂಗನವಾಡಿ, ಶಾಲೆ, ಮೈದಾನ ಸೇರಿದಂತೆ ಯಾವುದೇ ರೀತಿಯಲ್ಲಿ ಮಂಜೂರು ಮಾಡುವ ಸಂದರ್ಭ ಅಲ್ಲಿನ ಸ್ಥಳೀಯರಿಗೆ ಪೂರಕವಾಗಿ ರಸ್ತೆಗಳನ್ನು ಗುರುತು ಮಾಡಬೇಕು. ಒಂದು ವೇಳೆ ಜಾಗ ಮಂಜೂರಾದ ಬಳಿಕ ರಸ್ತೆ ತಕರಾರು ಬಂದಲ್ಲಿ ಸ್ಥಳೀಯ ವಿಎಗಳನ್ನು ಹೊಣೆಯನ್ನಾಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಎಚ್ಚರಿಸಿದ್ದಾರೆ.

ತಹಶೀಲ್ದಾರ್ ಆದೇಶಕ್ಕೆ ತಡೆ: ಎಸಿಗೆ ತರಾಟೆ

ಕಿನ್ಯ ಗ್ರಾಮ ಪಂಚಾಯತ್‌ನಲ್ಲಿ ಬಡ ಕುಟುಂಬವೊಂದಕ್ಕೆ ಕುಮ್ಕಿ ಜಾಗದಲ್ಲಿ ತಹಶೀಲ್ದಾರ್ ನೀಡಿದ್ದ ಹಕ್ಕು ಪತ್ರಕ್ಕೆ ಎಸಿಯವರು ಮೇಲ್ವರ್ಗದವರ ದೂರಿನ ಮೇರೆಗೆ ಸ್ಥಳ ತನಿಖೆಯನ್ನೂ ಮಾಡದೆ ತಡೆ ನೀಡಿದ್ದಾರೆ ಎಂದು ಶಾಸಕ ಯು.ಟಿ.ಖಾದರ್ ಸಭೆಯಲ್ಲಿ ಎಸಿಯನ್ನು ತರಾಟೆಗೈದರು.

ಇದಕ್ಕೆ ಪ್ರತಿಕ್ರಿಯಿಸಿದ ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ, ಯಾವುದೇ ರೀತಿಯ ದೂರುಗಳ ಸಂದರ್ಭ ಕೆಳ ಹಂತದ ನ್ಯಾಯಾಲಯದ ಆದೇಶವನ್ನು ಪಾಲನೆ ಮಾಡಬೇಕು. ಮುಖ್ಯವಾಗಿ ಸ್ಥಳ ಪರಿಶೀಲನೆ ನಡೆಸಿ ನ್ಯಾಯಯುತವಾಗಿ ಸಮಸ್ಯೆ ಯನ್ನು ಬಗೆಹರಿಸಬೇಕು ಎಂದರು.

ಸಭೆಯಲ್ಲಿ ಶಾಸಕರಾದ ಯು.ಟಿ.ಖಾದರ್, ಡಾ. ಭರತ್ ಶೆಟ್ಟಿ, ಹರೀಶ್ ಪೂಂಜಾ, ರಾಜೇಶ್ ನಾಯ್ಕಿ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ಸ್ಥಾಯಿ ಸಮಿತಿ ಅಧ್ಯಕ್ಷರಾದ ರವೀಂದ್ರ ಕಂಬಳಿ, ಮಮತಾ, ಧನಲಕ್ಷ್ಮಿ, ದ.ಕ. ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಸೆಲ್ವಮಣಿ, ಎಸ್ಪಿ ಲಕ್ಷ್ಮಿ ಪ್ರಸಾದ್, ಮನಪಾ ಆಯುಕ್ತ ಅಕ್ಷಯ್ ಶ್ರೀಧರ್, ಜಿಸಿಪಿ ಅರುಣಾಂಶಗಿರಿ ಉಪಸ್ಥಿತರಿದ್ದರು.

ಆಯುಷ್ಮಾನ್ ಯೋಜನೆಯಡಿ ಕೊರೋನ ಚಿಕಿತ್ಸೆ ಉಚಿತ: ದ.ಕ.ದ 73 ಆಸ್ಪತ್ರೆಗಳು ಆಯುಷ್ಮಾನ್ ಯೋಜನೆಯಡಿ ನೋಂದಣಿ

ದ.ಕ. ಜಿಲ್ಲೆಯಲ್ಲಿ ಈ ಹಿಂದೆ ಸರಕಾರಿ ಸೇರಿದಂತೆ ಒಟ್ಟು 13 ವೈದ್ಯಕೀಯ ಕಾಲೇಜುಗಳಲ್ಲಿ ಕೊರೋನಗೆ ಆಯುಷ್ಮಾನ್ ಯೋಜನೆಯಡಿ ಉಚಿತ ಚಿಕಿತ್ಸೆಯನ್ನು ನೀಡಲಾಗುತ್ತಿತ್ತು. ಇದೀಗ ಮತ್ತೆ 60 ಖಾಸಗಿ ಆಸ್ಪತ್ರೆಗಳು ಆಯುಷ್ಮಾನ್ ಯೋಜನೆಯಡಿ ನೋಂದಾಯಿಸಿಕೊಂಡಿದ್ದು ಈ ಎಲ್ಲಾ ಆಸ್ಪತ್ರೆಗಳಲ್ಲಿ ಈ ಯೋಜನೆಯಡಿ ಚಿಕಿತ್ಸೆ ಸಂಪೂರ್ಣ ಉಚಿತವಾಗಿರುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಈ ಸಂದರ್ಭ ಪ್ರತಿಕ್ರಿಯಿಸಿದ ದ.ಕ. ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ, ಪ್ರತಿ ದಿನ 300ರಿಂದ 400ರಷ್ಟು ಹೊಸ ಕೊರೋನ ಪ್ರಕರಣಗಳು ಜಿಲ್ಲೆಯಲ್ಲಿ ವರದಿಯಾಗುತ್ತಿವೆ. ಕೊರೋನ ಪಾಸಿಟಿವ್‌ದಾರರನ್ನು ಆಸ್ಪತ್ರೆಗೆ ದಾಖಲಿಸಬೇಕಾದ ಸಂದರ್ಭ ಜಿಲ್ಲಾಡಳಿತವೇ ಆ್ಯಂಬುಲೆನ್ಸ್ ಮೂಲಕ ಖಾಲಿ ಇರುವ ಆಸ್ಪತ್ರೆಗೆ ದಾಖಲಿಸುವ ವ್ಯವಸ್ಥೆ 10 ದಿನಗಳಲ್ಲಿ ಕಾರ್ಯಗತವಾಗಲಿದೆ ಎಂದರು.

ಆಧಾರ್ ನೋಂದಣಿ- ತಿದ್ದುಪಡಿ ಮಾಹಿತಿ ಕೈಪಿಡಿ ಬಿಡುಗಡೆ

ಮಂಗಳೂರು ಅಂಚೆ ವಿಭಾಗದ ಅಧೀಕ್ಷಕ ಶ್ರೀಹರ್ಷ ಅವರು ಸಾರ್ವಜನಿಕರ ಅನುಕೂಲಕ್ಕಾಗಿ ಸಿದ್ಧಪಡಿಸಿರುವ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಮಾಹಿತಿ ಕೈಪಿಡಿಯನ್ನು ಸಂಸದ ನಳಿನ್ ಕುಾರ್ ಕಟೀಲು ಅನಾವರಣಗೊಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X