ಅಕ್ರಮ ಗೋಸಾಗಾಟ ತಡೆಯಲು ವಿಶೇಷ ಕಾರ್ಯಪಡೆ ರಚನೆಗೆ ಆಗ್ರಹ
ಮಂಗಳೂರು, ಅ.5: ದ.ಕ.ಜಿಲ್ಲೆಯ ವಿವಿಧೆಡೆ ಅಕ್ರಮ ಗೋ ಸಾಗಾಟದ ಮೂಲಕ ಗೋವುಗಳ ವಧೆ ನಡೆಯುತ್ತಿದೆ. ಇದಕ್ಕೆ ಜಿಲ್ಲಾಡಳಿತದ ನಿರ್ಲಕ್ಷವೇ ಕಾರಣವಾಗಿದೆ. ಹಾಗಾಗಿ ಅಕ್ರಮ ಗೋ ಸಾಗಾಟ ಮತ್ತು ಗೋವಧೆ ತಡೆಯಲು ವಿಶೇಷ ಕಾರ್ಯಪಡೆ ರಚಿಸಬೇಕು ಎಂದು ಬಜರಂಗ ದಳ ಮತ್ತು ವಿಶ್ವ ಹಿಂದೂ ಪರಿಷತ್ ಆಗ್ರಹಿಸಿದೆ.
ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಜರಂಗ ದಳದ ಮುಖಂಡ ಶರಣ್ ಪಂಪ್‌ವೆಲ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಈ ಬಗ್ಗೆ ಹಲವು ಪ್ರಕರಣಗಳು ದಾಖಲಾಗಿದೆ. ಅಕ್ರಮ ಗೋ ಸಾಗಾಟಕ್ಕೆ ಇನ್ನೋವ, ಸ್ಕಾರ್ಪಿಯೋ, ಮಾರುತಿ ಸ್ವಿಫ್ಟ್‌ನಂತಹ ಬೆಳೆಬಾಳುವ ವಾಹನಗಳನ್ನು ಉಪಯೋಗಿಸುತ್ತಿದ್ದಾರೆ. ಇದೊಂದು ಬೃಹತ್ ಗೋ ಮಾಫಿಯವಾಗಿದೆ ಎಂದು ಆರೋಪಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಸಂಘಟನೆಗಳ ಮುಖಂಡರಾದ ಭುಜಂಗ ಕುಲಾಲ್, ಪ್ರದೀಪ್ ಪಂಪ್‌ವೆಲ್ ಮತ್ತಿತರರು ಉಪಸ್ಥಿತರಿದ್ದರು.
Next Story





