ಮನಪಾದಿಂದ ಬೀದಿ ವ್ಯಾಪಾರಸ್ಥರ ಸಮೀಕ್ಷೆ
ಮಂಗಳೂರು, ಅ.5: ದೀನ್ ದಯಾಳ್ ಅಂತ್ಯೋದಯ ಯೋಜನೆ-ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಕಾರ್ಯಕ್ರಮದಡಿ ಬೀದಿ ವ್ಯಾಪಾರಸ್ಥರಿಗೆ ಬೆಂಬಲ ಘಟಕವನ್ನು ಅನುಷ್ಟಾನಗೊಳಿಸುತ್ತಿದ್ದು, ಈ ಘಟಕದಡಿ ಮಂಗಳೂರು ಮಹಾನಗರಪಾಲಿಕೆಯ ವ್ಯಾಪ್ತಿಯೊಳಗಡೆ ಬೀದಿ ವ್ಯಾಪಾರಸ್ಥರ ಸಮೀಕ್ಷೆ ನಡೆಸಿ ಗುರುತು ಚೀಟಿ ಮತ್ತು ವ್ಯಾಪಾರದ ಪ್ರಮಾಣ ಪತ್ರ ವಿತರಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ.
ಮನಪಾ ವ್ಯಾಪ್ತಿಯೊಳಗಡೆ ಬೀದಿ ಬದಿಗಳಲ್ಲಿ ವ್ಯಾಪಾರ ನಡೆಸುವವರ ಸಮೀಕ್ಷೆಯನ್ನು ಕೈಗೊಳ್ಳಲು ಆಸಕ್ತ ಸ್ವಯಂ-ಸೇವಾ ಸಂಸ್ಥೆ/ಸ್ವ-ಸಹಾಯ ಗುಂಪು/ಸಮಾಲೋಚಕರ ಸಂಸ್ಥೆಗಳು ಮನಪಾ ಉಪ ಆಯುಕ್ತರ (ಆಡಳಿತ)ನ್ನು ನವೆಂಬರ್ 5ರೊಳಗೆ ಅರ್ಜಿ ಸಲ್ಲಿಸುವಂತೆ ಪ್ರಕಟನೆ ತಿಳಿಸಿದೆ.
Next Story





