ಸ್ಟೋನಿಸ್ ಅರ್ಧಶತಕ: ಆರ್‌ಸಿಬಿ ಗೆಲುವಿಗೆ 197 ರನ್ ಸವಾಲು ನೀಡಿದ ಡೆಲ್ಲಿ ಕ್ಯಾಪಿಟಲ್ಸ್

ದುಬೈ: ಬ್ಯಾಟಿಂಗ್ ನಲ್ಲಿ ಸಂಘಟಿತ ಹೋರಾಟ ಪ್ರದರ್ಶಿಸಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಬೃಹತ್ ಮೊತ್ತ ದಾಖಲಿಸಿದ್ದು, ಗೆಲುವಿಗೆ 197 ರನ್ ಗುರಿ ನೀಡಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ನಿಗದಿತ 20 ಓವರ್ ಗಳಲ್ಲಿ 4 ವಿಕಟ್ ನಷ್ಟಕ್ಕೆ 196 ರನ್ ಗಳಿಸಿತು. ಆರಂಭಿಕ ಆಟಗಾರ ಪೃಥ್ವಿ ಶಾ 23 ಎಸೆತಗಳಲ್ಲಿ 42, ಶಿಖರ್ ಧವನ್ 32, ರಿಷಬ್ ಪಂತ್ 37, ಮಾರ್ಕಸ್ ಸ್ಟೋನಿಸ್ 26 ಎಸೆತಗಳಲ್ಲಿ 53 ರನ್ ಬಾರಿಸಿದರು.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಮುಹಮ್ಮದ್ ಸಿರಾಜ್ 2, ಮೊಯೀನ್ ಅಲಿ ಹಾಗೂ ಇಸುರು ಉದಾನ ತಲಾ 1 ವಿಕೆಟ್ ಪಡೆದರು.
Next Story





