ಶಾಸಕ ಕೆ.ಬಿ. ಅಶೋಕ್ ನಾಯ್ಕ್ ರಿಗೆ ಕೊರೋನ ಪಾಸಿಟಿವ್

ಶಿವಮೊಗ್ಗ, ಅ.5: ಗ್ರಾಮಾಂತರ ಶಾಸಕ ಕೆ.ಬಿ. ಅಶೋಕ್ ನಾಯ್ಕ್ ಅವರಿಗೆ ಕೊರೋನ ಪಾಸಿಟಿವ್ ಬಂದಿದ್ದು, ಅವರು ಹೋಂ ಕ್ವಾರಂಟೈನ್ ಆಗಿದ್ದಾರೆ.
ಈ ಕುರಿತಂತೆ ತಮ್ಮ ಫೇಸ್ಬುಕ್ ಪೇಜ್ ನಲ್ಲಿ ಬರೆದುಕೊಂಡಿರುವ ಅವರು, ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸ ಕಾಣಿಸಿದ ಹಿನ್ನೆಲೆಯಲ್ಲಿ 2ನೆಯ ಬಾರಿಗೆ ಕೋವಿಡ್ ಪರೀಕ್ಷೆ ಮಾಡಿಸಿದ್ದು, ವರದಿ ಪಾಸಿಟಿವ್ ಬಂದಿದೆ. ಕಳೆದ ನಾಲ್ಕೈದು ದಿನಗಳಿಂದ ನನ್ನ ಸಂಪರ್ಕದಲ್ಲಿದ್ದ ಎಲ್ಲರೂ ಕೊರೊನ ಪರೀಕ್ಷೆ ಮಾಡಿಸಿಕೊಳ್ಳಲು ವಿನಂತಿಸುತ್ತೇನೆ ಎಂದು ತಿಳಿಸಿದ್ದಾರೆ.
Next Story





