ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಪ್ರೋತ್ಸಾಹ ಧನ: ಅರ್ಜಿ ಆಹ್ವಾನ
ಬೆಂಗಳೂರು, ಅ. 5: ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯು 2020-21ನೆ ಸಾಲಿಗೆ ಮಂಡಳಿಗೆ ವಂತಿಗೆ ಪಾವತಿಸುವ ವಿವಿಧ ಸಂಸ್ಥೆ/ಕಾರ್ಖಾನೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಸಂಘಟಿತ ಕಾರ್ಮಿಕರ ಮಕ್ಕಳಿಂದ ಶೈಕ್ಷಣಿಕ ಪ್ರೋತ್ಸಾಹಧನ ಸಹಾಯಧನಕ್ಕೆ ಅರ್ಜಿ ಆಹ್ವಾನಿಸಿದೆ.
ಹಿಂದಿನ ಶೈಕ್ಷಣಿಕ ವರ್ಷದಲ್ಲಿ ಸಾಮಾನ್ಯ ವರ್ಗದ ವಿದ್ಯಾರ್ಥಿಗಳು ಶೇ.50ರಷ್ಟು, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಕ್ಕೆ ಸೇರಿದ ವಿದ್ಯಾರ್ಥಿಗಳು ಶೇ.45ಅಂಕ ಪಡೆದು ತೇರ್ಗಡೆ ಹೊಂದಿರಬೇಕು. ಪ್ರೌಢಶಾಲೆ (8ರಿಂದ 10ನೆ ತರಗತಿ ವರೆಗೆ) ಪಿಯುಸಿ, ಐಟಿಐ, ಡಿ-ಇಡಿ, ಡಿಪ್ಲೋಮ, ಪದವಿ, ಸ್ನಾತಕೋತ್ತರ ಪದವಿ, ಇಂಜಿನಿಯರಿಂಗ್ ಮತ್ತು ವೈದ್ಯಕೀಯ ಶಿಕ್ಷಣದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ತಂದೆ/ತಾಯಿ/ಪೋಷಕರ ಮಾಸಿಕ ಸಂಬಳ 15 ಸಾವಿರ ರೂ.ಗಳಿಗೆ ಮೀರಿರಬಾರದು.
ಶೈಕ್ಷಣಿಕ ಪ್ರೋತ್ಸಾಹ ಧನ ಬಯಸುವ ವಿದ್ಯಾರ್ಥಿಗಳು ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯ ವೆಬ್‍ಸೈಟ್: www.klwb.karnataka.gov.in ನಲ್ಲಿ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬೇಕಾಗಿರುತ್ತದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 15 ಕೊನೆಯ ದಿನ ಆಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ, ಕಾರ್ಮಿಕ ಕಲ್ಯಾಣ ಭವನ, ನಂ. 48, 2 ನೇ ಮಹಡಿ, ಮತ್ತಿಕೆರೆ ಮುಖ್ಯರಸ್ತೆ, ಯಶವಂತಪುರ, ಬೆಂಗಳೂರು-22, ದೂರವಾಣಿ ಸಂಖ್ಯೆ 080-2357 0266, 080-2357 0267ನ್ನು ಸಂಪರ್ಕಿಸಲು ಅಧಿಕೃತ ಪ್ರಕಟಣೆ ತಿಳಿಸಿದೆ







