ಉಪ ಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಪಾಠ: ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್
ಬೆಂಗಳೂರು, ಅ.5: ಡಿಕೆಶಿ ನ್ಯಾಯಾಂಗ ಹಾಗೂ ದೇವರ ಮೇಲೆ ನಂಬಿಕೆಯಿರುವ ಬಲಿಷ್ಠ ನಾಯಕ, ಪ್ರಸ್ತುತ ಚುನಾವಣಾ ಸಂದರ್ಭದಲ್ಲಿ ಸಿಬಿಐ ದಾಳಿಯಿಂದ ಅವರನ್ನು ಕಟ್ಟಿ ಹಾಕಲು ಮಾಡುತ್ತಿರುವ ಪ್ರಯತ್ನ ವಿಫಲವಾಗಲಿದ್ದು 2 ಕ್ಷೇತ್ರಗಳಲ್ಲಿ ಮತದಾರರು ಬಿಜೆಪಿಗೆ ಪಾಠ ಕಲಿಸಲಿದ್ದಾರೆ. ಇಡೀ ಕಾಂಗ್ರೆಸ್ ಪಕ್ಷ ಡಿಕೆಶಿ ಜೊತೆಗಿದೆ. ಅವರು ಧೃತಿಗೆಡುವ ಅವಶ್ಯಕತೆಯಿಲ್ಲ ಎಂದು ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್ ಟ್ವೀಟ್ ಮಾಡಿದ್ದಾರೆ.
Next Story





