Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಆರೋಗ್ಯ
  4. ನಿಮ್ಮ ಕೊಲೆಸ್ಟ್ರಾಲ್ ಮಟ್ಟದ ಬಗ್ಗೆ...

ನಿಮ್ಮ ಕೊಲೆಸ್ಟ್ರಾಲ್ ಮಟ್ಟದ ಬಗ್ಗೆ ನಿಮಗೆ ತಿಳಿದಿರಬೇಕಾದ ಆರು ಮುಖ್ಯ ಮಾಹಿತಿಗಳು

ವಾರ್ತಾಭಾರತಿವಾರ್ತಾಭಾರತಿ5 Oct 2020 11:00 PM IST
share

ಕೊಲೆಸ್ಟ್ರಾಲ್ ಎಂಬ ಶಬ್ದವನ್ನು ಕೇಳಿದಾಗೆಲ್ಲ ಅದು ಆರೋಗ್ಯಕ್ಕೆ ಹಾನಿಕಾರಕ ಎನ್ನುವ ವಿಷಯ ಮನಸ್ಸಿನಲ್ಲಿ ಸುಳಿದಾಡುತ್ತದೆ. ಇದೇ ಕಾರಣದಿಂದ,ಕೊಲೆಸ್ಟ್ರಾಲ್ ಕೆಟ್ಟದ್ದಲ್ಲ ಎಂದು ಹೇಳಿದರೆ ನಿಮಗೆ ಅಚ್ಚರಿಯಾಗಬಹುದು. ಸತ್ಯವೇನೆಂದರೆ ನಮ್ಮ ಶರೀರವು ಜೀವಕೋಶಗಳು ಮತ್ತು ಅಂಗಾಂಶಗಳ ರಚನೆಗೆ ಹಾಗೂ ಹಲವಾರು ಪ್ರಮುಖ ಹಾರ್ಮೋನ್‌ಗಳ ಉತ್ಪಾದನೆಗೆ ಅಗತ್ಯವಾದ ಕೊಲೆಸ್ಟ್ರಾಲ್ ಅನ್ನು ತಾನೇ ತಯಾರಿಸಿಕೊಳ್ಳುತ್ತದೆ. ಆದರೆ ಜಡತೆಯಿಂದ ಕೂಡಿದ ಜೀವನಶೈಲಿ ಮತ್ತು ಅನಿಯಮಿತ ಆಹಾರ ಸೇವನೆಯ ಅಭ್ಯಾಸಗಳು ಕೊಲೆಸ್ಟ್ರಾಲ್ ಮಟ್ಟಗಳು ಹೆಚ್ಚಲು ಕಾರಣವಾಗುತ್ತವೆ. ಕೊಲೆಸ್ಟ್ರಾಲ್ ಎನ್ನುವುದು ನಮ್ಮ ಶರೀರದಲ್ಲಿಯ ಕೊಬ್ಬಿನಂತೆ ಲಿಪಿಡ್ ಅಥವಾ ಮೇದಸ್ಸು ಆಗಿದೆ. ನಮ್ಮ ಶರೀರವು ಕ್ಯಾಲರಿಗಳನ್ನು ಲಿಪಿಡ್‌ಗಳನ್ನಾಗಿ ಪರಿವರ್ತಿಸುತ್ತದೆ ಮತ್ತು ನಂತರದ ಬಳಕೆಗಾಗಿ ಅದನ್ನು ಉಳಿಸಿಕೊಳ್ಳುತ್ತದೆ. ಕಡಿಮೆ ಸಾಂದ್ರತೆಯ ಲಿಪೊಪ್ರೋಟಿನ್ (ಎಲ್‌ಡಿಎಲ್) ಮತ್ತು ಅಧಿಕ ಸಾಂದ್ರತೆಯ ಲಿಪೊಪ್ರೊಟೀನ್(ಎಚ್‌ಡಿಎಲ್) ಹೀಗೆ ಎರಡು ವಿಧಗಳ ಕೊಲೆಸ್ಟ್ರಾಲ್ ನಮ್ಮ ಶರೀರದಲ್ಲಿ ಇರುತ್ತವೆ.

   ಈಗಿನ ಪರಿಸ್ಥಿತಿ ಹೇಗಿದೆಯೆಂದರೆ ಹೆಚ್ಚಿನ ಜನರು ವಯಸ್ಸಿನ ಹಂಗಿಲ್ಲದೆ ಕೊಲೆಸ್ಟ್ರಾಲ್ ಸಂಬಂಧಿತ ಸಮಸ್ಯೆಗಳಿಗೆ ತುತ್ತಾಗುತ್ತಿದ್ದಾರೆ. ಈ ಮೊದಲು ಇಂತಹ ಸಮಸ್ಯೆಗಳು 40 ವರ್ಷಕ್ಕಿಂತ ಹೆಚ್ಚಿನವರನ್ನು ಮಾತ್ರ ಕಾಡುತ್ತಿದ್ದವು. ಆದರೆ ಕಾಲ ಸರಿದಂತೆ ಯುವಕರಲ್ಲಿಯೂ ಕೊಲೆಸ್ಟ್ರಾಲ್ ಸಮಸ್ಯೆ ಹೆಚ್ಚು ಸಾಮಾನ್ಯವಾಗುತ್ತಿದೆ. ಇಂದಿನ ಕೋವಿಡ್ ಸಾಂಕ್ರಾಮಿಕದ ದಿನಗಳಲ್ಲಿ ಇಂತಹ ಮೂಲಭೂತ ಆರೋಗ್ಯ ಕಳವಳಗಳನ್ನು ಲಘುವಾಗಿ ಪರಿಗಣಿಸಬಾರದು ಮತ್ತು ಕೊಲೆಸ್ಟ್ರಾಲ್‌ನಂತಹ ಸಾಮಾನ್ಯ ಆರೋಗ್ಯ ಸಮಸ್ಯೆಗಳ ಬಗ್ಗೆ ವೈದ್ಯರಿಂದ ಪ್ರಾಥಮಿಕ ಮಾಹಿತಿಗಳನ್ನು ಪಡೆದುಕೊಳ್ಳಬೇಕು. ಈಗ ಕೊಲೆಸ್ಟ್ರಾಲ್ ಪರೀಕ್ಷೆ ಪ್ರಾಮುಖ್ಯವನ್ನು ಪಡೆದುಕೊಂಡಿದೆ.

* ಕೊಲೆಸ್ಟ್ರಾಲ್ ಬಗ್ಗೆ ನಾವೇಕೆ ಕಳವಳ ಪಡಬೇಕು?

 ಪರಿಧಮನಿ ಹೃದ್ರೋಗಗಳನ್ನುಂಟು ಮಾಡುವ ಹಲವಾರು ಅಪಾಯದ ಅಂಶಗಳಿದ್ದು,ಅಧಿಕ ಕೊಲೆಸ್ಟ್ರಾಲ್ ಮಟ್ಟ ಇಂತಹ ಕಾರಣಗಳಲ್ಲೊಂದಾಗಿದೆ. ಅದು ವ್ಯಕ್ತಿಯು ಹೃದಯಾಘಾತ ಅಥವಾ ಪಾರ್ಶ್ವವಾಯುವಿಗೆ ತುತ್ತಾಗುವ ಅಪಾಯವನ್ನು ಹೆಚ್ಚಿಸುತ್ತದೆ. ಕಳೆದ 40-50 ವರ್ಷಗಳಲ್ಲಿ ನಡೆಸಲಾದ ಹಲವಾರು ಸಂಶೋಧನೆಗಳು ಅಧಿಕ ಕೊಲೆಸ್ಟ್ರಾಲ್ ಮಟ್ಟವು ಹೃದ್ರೋಗಗಳೊಂದಿಗೆ ನಂಟು ಹೊಂದಿರುವುದನ್ನು ಸಾಬೀತುಗೊಳಿಸಿವೆ.

* ಒಳ್ಳೆಯ ಕೊಲೆಸ್ಟ್ರಾಲ್ ಮತ್ತು ಕೆಟ್ಟ ಕೊಲೆಸ್ಟ್ರಾಲ್ ಎಂದರೇನು?

 ಹೆಸರೇ ಸೂಚಿಸುವಂತೆ ಒಳ್ಳೆಯ ಕೊಲೆಸ್ಟ್ರಾಲ್ (ಎಚ್‌ಡಿಎಲ್) ಶರೀರದ ಆರೋಗ್ಯಕ್ಕೆ ಪೂರಕವಾಗಿದ್ದು ಹೃದಯಾಘಾತದ ವಿರುದ್ಧ ರಕ್ಷಣೆಯನ್ನು ನೀಡುತ್ತದೆ. ಹೀಗಾಗಿ ನಾವು ನಮ್ಮ ಎಚ್‌ಡಿಎಲ್ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸಿಕೊಳ್ಳಲು ಪ್ರಯತ್ನಿಸಬೇಕು. ಇನ್ನೊಂದೆಡೆ ಕೆಟ್ಟ ಕೊಲೆಸ್ಟ್ರಾಲ್ (ಎಲ್‌ಡಿಎಲ್) ಹೃದಯದ ಅಪಧಮನಿಗಳ ಭಿತ್ತಿಗಳಲ್ಲಿ ಪಾಚಿ ಸಂಗ್ರಹಗೊಳ್ಳಲು ಕಾರಣವಾಗುತ್ತದೆ ಮತ್ತು ತನ್ಮೂಲಕ ಅವುಗಳನ್ನು ಕಿರಿದಾಗಿಸುತ್ತದೆ. ಇದು ಹೃದಯಕ್ಕೆ ಸುಗಮ ರಕ್ತ ಪೂರೈಕೆಗೆ ಅಡ್ಡಿಯನ್ನುಂಟು ಮಾಡುತ್ತದೆ. ಹೀಗಾಗಿ ನಮ್ಮ ಶರೀರದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾಗದಂತೆ ನಾವು ಎಚ್ಚರಿಕೆಯನ್ನು ವಹಿಸಬೇಕಾಗುತ್ತದೆ.

* ಕೊಲೆಸ್ಟ್ರಾಲ್ ಎಷ್ಟಿದ್ದರೆ ಅಧಿಕ ಎಂದು ಪರಿಗಣಿಸಲಾಗುತ್ತದೆ?

ಯಾವುದೇ ಹೃದ್ರೋಗವಿಲ್ಲದ ಅಥವಾ ಹೃದ್ರೋಗಗಳಿಗೆ ಗುರಿಯಾಗುವ ಅಪಾಯವನ್ನು ಹೊಂದಿರದ ವ್ಯಕ್ತಿಗಳಲ್ಲಿ ಒಟ್ಟು ಕೊಲೆಸ್ಟ್ರಾಲ್ 250ಕ್ಕೂ ಹೆಚ್ಚಿದ್ದರೆ ಅದನ್ನು ಅಧಿಕ ಮಟ್ಟ ಎಂದು ಪರಿಗಣಿಸಲಾಗುತ್ತದೆ. ಅಧಿಕ ರಕ್ತದೊತ್ತಡ,ಮಧುಮೇಹ,ಧೂಮ್ರಪಾನ ಚಟ ಇತ್ಯಾದಿ ಹೃದ್ರೋಗವನ್ನುಂಟು ಮಾಡುವ ಅಪಾಯಗಳನ್ನು ಹೊಂದಿರುವವರಿಗೆ ಇದಕ್ಕೂ ಕಡಿಮೆ ಪ್ರಮಾಣದ ಕೊಲೆಸ್ಟ್ರಾಲ್ ಅಧಿಕ ಮಟ್ಟವಾಗುತ್ತದೆ. ಈಗಾಗಲೇ ಪರಿಧಮನಿ ಹೃದ್ರೋಗಗಳನ್ನು ಹೊಂದಿರುವವರಲ್ಲಿ 120ರಷ್ಟು ಕಡಿಮೆ ಪ್ರಮಾಣದ ಕೊಲೆಸ್ಟ್ರಾಲ್ ಇದ್ದರೂ ಅದನ್ನು ಅಧಿಕ ಮಟ್ಟವೆಂದು ಪರಿಗಣಿಸಲಾಗುತ್ತದೆ.

* ಕೊಲೆಸ್ಟ್ರಾಲ್ ಮಟ್ಟಗಳನ್ನು ತಗ್ಗಿಸುವುದರಿಂದ ಹೃದಯಕ್ಕೆ ಅಪಾಯ ಕಡಿಮೆಯಾಗುತ್ತದೆಯೇ?

 ಹೌದು,ಜೀವನಶೈಲಿ ಬದಲಾವಣೆಗಳು ಅಥವಾ ಔಷಧಿಗಳ ಸೇವನೆಯ ಮೂಲಕ ಕೊಲೆಸ್ಟ್ರಾಲ್ ಮಟ್ಟಗಳನ್ನು ತಗ್ಗಿಸಿಕೊಳ್ಳುವುದು ಹೃದಯಾಘಾತ ಉಂಟಾಗುವ ಅಪಾಯವನ್ನು ಕಡಿಮೆ ಮಾಡುತ್ತದೆ ಎನ್ನುವುದನ್ನು ಹಲವಾರು ಅಧ್ಯಯನಗಳು ತೋರಿಸಿವೆ.

* ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾಗುವುದು ಹೇಗೆ?

ಕೆಲವರಲ್ಲಿ ಇದು ಆನುವಂಶಿಕವಾಗಿರಬಹುದು. ಕೆಲವೊಮ್ಮೆ ಕುಟುಂಬದ ಹೆಚ್ಚಿನ ಸದಸ್ಯರಲ್ಲಿ ಕೊಲೆಸ್ಟ್ರಾಲ್ ಮಟ್ಟ ಅಧಿಕವಾಗಿರುವುದು ಇದು ವಂಶವಾಹಿ ಪ್ರವೃತ್ತಿ ಎನ್ನುವುದನ್ನು ಸೂಚಿಸುತ್ತದೆ. ಕೆಲವರಲ್ಲಿ ಜೀವನಶೈಲಿಯು ಕೊಲೆಸ್ಟ್ರಾಲ್ ಏರಿಕೆಗೆ ಕಾರಣವಾಗುತ್ತದೆ. ಜಡತೆ,ಬೊಜ್ಜು ಅಥವಾ ಅತಿಯಾದ ದೇಹತೂಕ,ದೈಹಿಕ ಚಟುವಟಿಕೆಗಳ ಕೊರತೆ,ಅಧಿಕ ಕೊಬ್ಬು ಅಥವಾ ಕೊಲೆಸ್ಟ್ರಾಲ್ ಇರುವ ಆಹಾರಗಳ ಸೇವನೆ ಇವೆಲ್ಲ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸುತ್ತವೆ.

* ಕೊಲೆಸ್ಟ್ರಾಲ್ ಮಟ್ಟವನ್ನು ತಗ್ಗಿಸಲು ಏನು ಮಾಡಬೇಕು?

 ಜೀವನಶೈಲಿಯಲ್ಲಿ ಬದಲಾವಣೆಗಳನ್ನು ತಂದುಕೊಳ್ಳುವುದು ಈ ನಿಟ್ಟಿನಲ್ಲಿ ಮಾಡಬೇಕಾದ ಮೊದಲ ಮತ್ತು ಮುಖ್ಯ ಕಾರ್ಯವಾಗಿದೆ. ನಿಯಮಿತ ದೈಹಿಕ ಚಟುವಟಿಕೆ ಅಥವಾ ವ್ಯಾಯಾಮ,ತೂಕ ಇಳಿಕೆ,ಕಡಿಮೆ ಕೊಬ್ಬಿನಿಂದ ಕೂಡಿದ ಆಹಾರ ಸೇವನೆ ಇವೆಲ್ಲ ಇಂತಹ ಬದಲಾವಣೆಗಳಾಗಿವೆ. ಅಲ್ಲದೆ ಕೊಲೆಸ್ಟಾಲ್ ಮಟ್ಟವನ್ನು ಕಡಿಮೆ ಮಾಡುವ ಔಷಧಿಗಳಿವೆ. ಸ್ಟಾಟಿನ್‌ಗಳು ಅಗತ್ಯ ಔಷಧಿಗಳಾಗಿದ್ದು ಕೊಲೆಸ್ಟ್ರಾಲ್ ಮಟ್ಟವನ್ನು ತಗ್ಗಿಸುವುದು ಮಾತ್ರವಲ್ಲ,ಹೃದಯಾಘಾತಕ್ಕೆ ಗುರಿಯಾಗುವ ಅಪಾಯವನ್ನು ಸಹ ಕಡಿಮೆ ಮಾಡುತ್ತವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X