Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಹಾಥರಸ್‌ನ ಮನೀಷಾಳ ಸಾವಿಗೆ ಎರಡು ಹನಿ...

ಹಾಥರಸ್‌ನ ಮನೀಷಾಳ ಸಾವಿಗೆ ಎರಡು ಹನಿ ಕಣ್ಣೀರು

ದೇವನೂರ ಮಹಾದೇವದೇವನೂರ ಮಹಾದೇವ6 Oct 2020 12:10 AM IST
share
ಹಾಥರಸ್‌ನ ಮನೀಷಾಳ ಸಾವಿಗೆ ಎರಡು ಹನಿ ಕಣ್ಣೀರು

ನೆನಸಿಕೊಳ್ಳಲೂ ಬೀಭತ್ಸ- ಉತ್ತರ ಪ್ರದೇಶದ ಹಾಥರಸ್‌ನ ಮನೀಷಾಳ ಸಾವು. ಇದು, ಸಾವಲ್ಲ. ಸಾಕ್ಷ ನಾಶಕ್ಕಾಗಿ ಉತ್ತರಪ್ರದೇಶ ಸರಕಾರದ ಒಳಿಚ್ಛೆಗೆ ತಕ್ಕಂತೆ ಅಲ್ಲಿನ ಪೊಲೀಸ್ ವ್ಯವಸ್ಥೆ ನಡೆಸಿದ ಕೊಲೆ ಇದು, ಸಾವಲ್ಲ.

ನೋಡಿ, ಮನೀಷಾಳು ಅತ್ಯಾಚಾರಕ್ಕೆ ಒಳಗಾಗಿ ಅವಳ ಮನಸ್ಸು ದೇಹ ಜರ್ಝರಿತವಾಗಿ ಅರೆಪ್ರಜ್ಞಾವಸ್ಥೆಯಲ್ಲಿದ್ದವಳನ್ನು ಪೊಲೀಸ್ ಸ್ಟೇಷನ್‌ಗೆ ಕರೆತಂದರೆ ಅಲ್ಲಿ ಏಳೆಂಟು ಗಂಟೆ ಕಾಲ ಹೊರಗೆ ಕೂರಿಸುತ್ತಾರೆ. ಕಾನೂನಿನಂತೆ ಅವಳನ್ನು ರೇಫ್ ಕ್ರೈಸಿಸ್ ಸೆಂಟರ್‌ಗೆ ಕರೆದುಕೊಂಡು ಹೋಗುವುದಿಲ್ಲ. ಹಾಗೇ ಕಾನೂನಿನಂತೆ 24 ಗಂಟೆಯ ಒಳಗೆ ವೀರ್ಯಾಣು (Sperm) ಪತ್ತೆ ಪರೀಕ್ಷೆಯನ್ನೂ ಮಾಡಿಸುವುದಿಲ್ಲ. ಬದಲಾಗಿ ವಿಳಂಬಿಸಿ, ಇದ್ದಿರಬಹುದಾದ ವೀರ್ಯಾಣು ಸಾಕ್ಷವು ನಾಶವಾದ ಮೇಲೆ ವೀರ್ಯಾಣು ಪತ್ತೆ ಪರೀಕ್ಷೆ ಮಾಡಿಸುತ್ತಾರೆ. ಮನೀಷಾ ಸಾಯುವ ಮೊದಲು (victim’s dying declaration) ‘‘ತನ್ನ ಮೇಲೆ ಅತ್ಯಾಚಾರವಾಯ್ತು’’ ಎಂದು ಹೇಳಿದ್ದರೂ ಕಾನೂನು ರೀತಿ ಇದೇ ಪ್ರಬಲ ಸಾಕ್ಷಿಯಾಗಿದ್ದರೂ ಇದನ್ನು ಪರಿಗಣಿಸದ ಪೊಲೀಸ್ ವರಿಷ್ಠಾಧಿಕಾರಿ ‘ಅತ್ಯಾಚಾರವಾಗಿಲ್ಲ, ಯಾಕೆಂದರೆ ಪರೀಕ್ಷೆಯಲ್ಲಿ ವೀರ್ಯಾಣು ಪತ್ತೆ ಆಗಿಲ್ಲ’ ಅನ್ನುತ್ತಾರೆೆ. ಜೊತೆಗೆ ಆಸ್ಪತ್ರೆಯಿಂದ ಆಸ್ಪತ್ರೆಗೆ ಓಡಾಡಿಸುತ್ತಾರೆ. ಕುಟುಂಬಕ್ಕೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಧಮಕಿ ಹಾಕುತ್ತಾರೆೆ. ಇದನ್ನೆಲ್ಲಾ ನೋಡಿದರೆ ಮನೀಷಾಳು ಬದುಕಿಬಿಟ್ಟರೆ ಅವಳೇ ಸಾಕ್ಷಿಯಾಗಿಬಿಡುತ್ತಾಳೆ ಎಂಬ ಕಾರಣಕ್ಕೆ ಅವಳು ಸಾಯಲಿ ಅಂತ ಏನೇನೆಲ್ಲಾ ಮಾಡಬೇಕೊ ಅದನ್ನೆಲ್ಲಾ ಉತ್ತರ ಪ್ರದೇಶದ ಪೊಲೀಸರು ಹಾಗೂ ಆಡಳಿತ ನಿರ್ವಹಣೆ ಮಾಡಿದೆ ಅನ್ನಿಸಿಬಿಡುತ್ತೆ. ಹೌದು, ಮನೀಷಾಳ ಸಾವು ಸರಕಾರಿ ಕೊಲೆ.

ಮತ್ತೂ ಅಮಾನುಷ ಅಂದರೆ, ಹೀಗೆ ಮನೀಷಾಳನ್ನು ಸಾಯಿಸಿದ ಮೇಲೂ ಅವಳ ದೇಹದ ಸಾಕ್ಷ ಮರು ಮರಣೊತ್ತರ ಪರೀಕ್ಷೆಗೆ ಸಿಗದಂತೆ ಮಾಡಲು ಪೊಲೀಸರು ಮನೀಷಾಳ ದೇಹವನ್ನು ರಾತ್ರಿ 1:30ಕ್ಕೆ ಅವಳ ಹುಟ್ಟೂರಿಗೆ ತಂದು, ಹೆತ್ತವರಿಗೆ ಅಂತ್ಯ ಸಂಸ್ಕಾರಕ್ಕೆ ದೇಹವನ್ನು ಒಪ್ಪಿಸದೆ, ಅಷ್ಟೇ ಅಲ್ಲ ತಮ್ಮ ಮಗಳ ಮುಖವನ್ನು ನೋಡಲೂ ಹೆತ್ತವರಿಗೆ ಅವಕಾಶ ನೀಡದೆ, ‘ಮಗಳ ಮುಖಕ್ಕೆ ಪದ್ಧತಿಯಂತೆ ಅರಶಿನ ಹಚ್ಚಲಾದರೂ ಅವಕಾಶ ಕೊಡಿ’ ಎಂದು ತಾಯಿ ಬೇಡಿದರೂ ಲೆಕ್ಕಿಸದೆ ಪೊಲೀಸರು ರಾತ್ರಿ 2:30ಕ್ಕೆ ಮನೀಷಾಳ ದೇಹವನ್ನು ಸುಟ್ಟು ಬೂದಿ ಮಾಡುತ್ತಾರೆ. ಹೀಗಿರುವಾಗ ನ್ಯಾಯ ಸಿಗಬಹುದೇ? ನ್ಯಾಯ ಸಿಕ್ಕು ಮನೀಷಾಳ ಹೆತ್ತವರಿಗೆ ಸಾಂತ್ವನ ಸಿಗಬಹುದೇ? ಹೇಳುವುದು ಕಷ್ಟ, ಕಷ್ಟ. ‘ಬಿಜೆಪಿಸೆ ಬೇಟಿ ಬಚಾವೊ’ ಮಾತು ಈಗ ಚಾಲ್ತಿಗೆ ಬರುತ್ತಿದೆ.

ಆಯ್ತು, ನಮ್ಮ ನ್ಯಾಯ ವಿತರಣಾ ಪದ್ಧತಿಯನ್ನು ನೋಡಿದರೆ, ಆತಂಕ ಆಗುತ್ತದೆ.ಇತ್ತೀಚಿನ ಬಾಬರಿ ಮಸೀದಿ ತೀರ್ಪನ್ನು ನೋಡಿದರೆ, ಮಸೀದಿ ಧ್ವಂಸದ ಸಂದರ್ಭದಲ್ಲಿ ಆರೋಪಿಗಳು ಧ್ವಂಸದ ಸ್ಥಳದಲ್ಲೇ ಇದ್ದರೂ ಅವರು ಖುಲಾಸೆಯಾಗುತ್ತಾರೆ. ಇನ್ನೊಂದು ಕಡೆ ಎಲ್ಗಾರ್ ಪರಿಷತ್ ಸಭೆಯಲ್ಲಿ ಯಾವುದೇ ಹಿಂಸೆ ನಡೆಯದಿದ್ದರೂ ಜೊತೆಗೆ ಆನಂದ್ ತೇಲ್ತುಂಬ್ಡೆ ಮತ್ತಿತರರು ಆ ಸಭೆಯಲ್ಲಿ ಇಲ್ಲದಿದ್ದರೂ ಅವರನ್ನು ಆರೋಪಿಗಳನ್ನಾಗಿಸಿ ವಿಚಾರಣೆ ಮಾಡದೆ ಬಂಧಿಸಿಡಲಾಗಿದೆ. ಇಂದಿನ ಕಾನೂನು ವ್ಯವಸ್ಥೆ, ನ್ಯಾಯಾಂಗ ವಿತರಣೆ ವ್ಯವಸ್ಥೆ ಹೆಚ್ಚೂಕಮ್ಮಿ ಪುರಾತನ ಕಾಲದ ಅನ್ಯಾಯದ ‘ಮನುಧರ್ಮ ಶಾಸ್ತ್ರ’ದ ಜಾತಿ ಅಂತಸ್ಥಿಗೆ ತಕ್ಕಂತೆ ಶಿಕ್ಷೆ ಎಂಬಂತಿದೆ. ಭಾರತ ಯಾವ ಕಡೆಗೆ ಚಲಿಸುತ್ತಿದೆ? ಹಿಂದಕ್ಕೊ? ಮುಂದಕ್ಕೊ? ಇಂದು ನಮ್ಮ ಕಾನೂನು ವ್ಯವಸ್ಥೆ ಹಾಗೂ ನಮ್ಮ ನ್ಯಾಯ ವಿತರಣಾ ವ್ಯವಸ್ಥೆಗಳು- ನ್ಯಾಯದ ಮುಂದೆ ಅಪರಾಧಿಗಳಾಗಿ ಕಟಕಟೆಯಲ್ಲಿ ನಿಂತಿವೆ. ಭಾರತ ದಿಕ್ಕು ತಪ್ಪುತ್ತಿದೆ.

ಕೊನೆಯದಾಗಿ ನನ್ನದೊಂದು ಮನವಿ: ಕಂದ ಮನೀಷಾಳನ್ನು ಎಲ್ಲಿ ಸುಟ್ಟರೋ ಅಲ್ಲಿಂದ ಅಥವಾ ಅವಳು ನಡೆದಾಡಿದ ಭೂಮಿಯಿಂದ ಒಂದು ಹಿಡಿಮಣ್ಣನ್ನು ತಂದು ಒಂದು ಸ್ಮಾರಕ ಸ್ಥಳವನ್ನಾಗಿಸಿ ಅಲ್ಲೊಂದು ಅವಳ ಪ್ರತಿಮೆ ರೂಪಿಸಿ ಅವಳ ಹೆತ್ತ ತಾಯಿಯ ಈಡೇರದ ಕೊನೆಯಾಸೆಯನ್ನು, ಮನೀಷಾಳ ಪ್ರತಿಮೆಯ ಕೆನ್ನೆಗಳಿಗೆ ನಾವೆಲ್ಲರೂ ಅರಿಶಿನ ಹಚ್ಚುವಂತಾದರೆ ನಾವೂನು ಮನೀಷಾಳಿಗೆ ಮರಣೋತ್ತರ ಗೌರವ ಸಲ್ಲಿಸಿದಂತಾಗಬಹುದೇ? ಇದರಿಂದ ಮನೀಷಾಳ ಹೆತ್ತವರಿಗೆ ಹಾಗೂ ತಾಯಿ ಭಾರತಮಾತೆಗೆ ಕಿಂಚಿತ್ತಾದರೂ ಸಮಾಧಾನವಾಗಬಹುದೇ? ಈ ಪ್ರಶ್ನೆಯನ್ನು ಭಾರತದ ಪ್ರಜ್ಞೆಯ ಮುಂದಿಡುತ್ತಿರುವೆ.

share
ದೇವನೂರ ಮಹಾದೇವ
ದೇವನೂರ ಮಹಾದೇವ
Next Story
X