Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವೀರರಾಣಿ ಅಬ್ಬಕ್ಕ ಭವನ- ಅಧ್ಯಯನ ಕೇಂದ್ರ...

ವೀರರಾಣಿ ಅಬ್ಬಕ್ಕ ಭವನ- ಅಧ್ಯಯನ ಕೇಂದ್ರ ಕಾರ್ಯರೂಪಕ್ಕೆ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ6 Oct 2020 2:58 PM IST
share

ಮಂಗಳೂರು, ಅ. 6: ವೀರರಾಣಿ ಅಬ್ಬಕ್ಕ ಭವನ, ಅಬ್ಬಕ್ಕ ಅಧ್ಯಯನ ಕೇಂದ್ರ ನಿರ್ಮಾಣ ಕಾರ್ಯರೂಪಕ್ಕೆ ತರಬೇಕು. ಇಲ್ಲವಾದರೆ ಜಿಲ್ಲಾಧಿಕಾರಿ ಕಚೇರಿ, ನಗರಸಭಾ ಕಚೇರಿ ಮುಂದೆ ಧರಣಿ ನಡೆಸಲಾಗುವುದು ಎಂದು ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿಯ ಸ್ವಾಗತಾಧ್ಯಕ್ಷ  ಕೆ. ಜಯರಾಮ ಶೆಟ್ಟಿ ಹೇಳಿದ್ದಾರೆ.

ನಗರದ ಪತ್ರಿಕಾಭವನದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತದ ಪ್ರಥಮ ಹೋರಾಟಗಾರ್ತಿ ವೀರರಾಣಿ ಅಬ್ಬಕ್ಕ ನಮ್ಮೆಲ್ಲರ ಹೆಮ್ಮೆ. ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿಯ ಪ್ರಯತ್ನದಿಂದ ತೊಕ್ಕೊಟ್ಟು ಬಸ್ ನಿಲ್ದಾಣ ಬಳಿ ರಾಣಿ ಅಬ್ಬಕ್ಕ ಭವನಕ್ಕೆ 2012-13ರಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಅನುಮೋದನೆ ನೀಡಿದ್ದಾರೆ. 41 ಸೆಂಟ್ಸ್ ಸ್ಥಳವನ್ನು ಮೀಸಲಿಡ ಲಾಗಿದ್ದು, 8 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ಇದೀಗ 8 ವರ್ಷ ಕಳೆದಿದ್ದು, ಭವನ ನಿರ್ಮಾಣ ಕಾಮಗಾರಿ ಮಾತ್ರ ಆರಂಭವಾಗಿಲ್ಲ ಎಂದರು.

ಮಂಗಳೂರು ವಿ.ವಿ.ಯಲ್ಲಿ ವೀರರಾಣಿ ಅಬ್ಬಕ್ಕ ಅಧ್ಯಯನ ಕೇಂದ್ರವನ್ನು ಸ್ಥಾಪಿಸಬೇಕು ಎಂಬ ನಮ್ಮ ಸಮಿತಿಯ ಬೇಡಿಕೆಯಂತೆ ಸದಾನಂದ ಗೌಡ ಅವರು 2015-16ರಲ್ಲಿ 1 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದರೂ, ಅಧ್ಯಯನ ಕೇಂದ್ರ ಸ್ಥಾಪನೆಯಾಗಲಿಲ್ಲ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವೀರರಾಣಿ ಅಬ್ಬಕ್ಕಳ ಹೆಸರಿಡುವಂತೆ ಕಳೆದ 20 ವರ್ಷಗಳಿಂದ ರಾಜ್ಯ ಸರಕಾರ, ಸಂಸದರು, ಸ್ಥಳೀಯ ಶಾಸಕರಿಗೆ ಮನವಿ ಸಲ್ಲಿಸಲಾಗಿದೆ. ಆದರೂ, ವಿಮಾನ ನಿಲ್ದಾಣಕ್ಕೆ ಅಬ್ಬಕ್ಕಳ ಹೆಸರು ನೀಡಿಲ್ಲ ಎಂದು ಹೇಳಿದರು.

ಮಂಗಳೂರು ರೈಲ್ವೇ ಸೆಂಟ್ರಲ್/ಜಂಕ್ಷನ್‌ಗೆ ರಾಷ್ಟ್ರೀಯ ಹೆದ್ದಾರಿ-66 ತೊಕ್ಕೊಟ್ಟು ಫ್ಲೈ  ಓವರ್‌ಗೆ, ಹೊಸ ಓವರ್ ಬ್ರಿಡ್ಜ್ ಜಂಕ್ಷನ್‌ಗೆ ವೀರರಾಣಿ ಅಬ್ಬಕ್ಕಳ ಹೆಸರಿಡುವ ಬಗ್ಗೆ ಇತ್ತೀಚೆಗೆ ಸರಕಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಸಮಿತಿಯ ಗೌರವ ಉಪಾಧ್ಯಕ್ಷ ಸದಾನಂದ ಬಂಗೇರ, ಪ್ರಧಾನ ಕಾರ್ಯದರ್ಶಿ ಧನಲಕ್ಷ್ಮಿ ಗಟ್ಟಿ, ಅಧ್ಯಕ್ಷ ದಿನಕರ ಉಳ್ಳಾಲ್, ಕೋಶಾಧಿಕಾರಿ ಆನಂದ ಕೆ. ಅಸೈಗೋಳಿ ಇದ್ದರು.

ಜಿಲ್ಲಾಧಿಕಾರಿ ಕಚೇರಿ ಎದುರು ಅಬ್ಬಕ್ಕೆ ಪ್ರತಿಮೆ ಆಗಲಿ

ದ.ಕ.ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಹಳೆ ಕೆಂಪು ಕಲ್ಲಿನ ಕಟ್ಟಡ ಪೋರ್ಚುಗೀಸರ ಅವಧಿಯಲ್ಲಿ ರಾಣಿ ಅಬ್ಬಕ್ಕ ಕಟ್ಟಿದ್ದರ ಕುರುಹಾಗಿದೆ. ಆ ನೆನಪಿಗಾಗಿ ಜಿಲ್ಲಾಧಿಕಾರಿ ಕಚೇರಿ ಎದುರಿನ ವೃತ್ತದಲ್ಲಿ ಅಬ್ಬಕ್ಕ ರಾಣಿ ಪ್ರತಿಮೆಯನ್ನು ಸ್ಥಾಪಿಸಬೇಕು ಎಂದು ಜಯರಾಮ ಶೆಟ್ಟಿ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X