ಹತ್ರಸ್ ಪ್ರಕರಣ ಖಂಡಿಸಿ ಬಿಬಿಎಂಪಿ ಪೌರ ಕಾರ್ಮಿಕರಿಂದ ಪ್ರತಿಭಟನೆ
ಬೆಂಗಳೂರು, ಅ.6: ಉತ್ತರ ಪ್ರದೇಶದ ಹತ್ರಸ್‍ನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಖಂಡಿಸಿ ಬಿಬಿಎಂಪಿ ಪೌರಕಾರ್ಮಿಕರು ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು.
ಬಿಬಿಎಂಪಿ ಪೌರಕಾರ್ಮಿಕರ ಸಂಘಟನೆ ವತಿಯಿಂದ ಮಹಿಳಾ ಪೌರಕಾರ್ಮಿಕರು ಮಂಗಳವಾರ ಕೆ.ಆರ್ ಪುರ, ಬಾಣಸವಾಡಿ, ಹಲಸೂರು, ಜೋಗುಪಾಳ್ಯ, ಆರ್‍ಆರ್ ನಗರದಲ್ಲಿ ಪ್ರತಿಭಟನೆ ನಡೆಸಿದರು.
ದಲಿತ ಮಹಿಳೆಯರ ಮೇಲಿನ ದೌರ್ಜನ್ಯ ನಿಲ್ಲಬೇಕು. ಉತ್ತರ ಪ್ರದೇಶದ ಹತ್ರಸ್‍ನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಮಾಡಿದವರಿಗೆ ಅತೀ ಕಠಿಣ ಶಿಕ್ಷೆ ನೀಡಬೇಕು ಎಂದು ಘೋಷಣೆ ಕೂಗುವ ಮೂಲಕ ಪ್ರತಿಭಟನಾಕಾರರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
Next Story





