Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮಕ್ಕಳ ಸುರಕ್ಷತೆ, ಆರೋಗ್ಯದ ದೃಷ್ಟಿಯಿಂದ...

ಮಕ್ಕಳ ಸುರಕ್ಷತೆ, ಆರೋಗ್ಯದ ದೃಷ್ಟಿಯಿಂದ ತೀರ್ಮಾನ: ಸಚಿವ ಶ್ರೀರಾಮುಲು

ಶಾಲೆ-ಕಾಲೇಜು ಆರಂಭಿಸುವ ಕುರಿತು ತಜ್ಞರ ಜೊತೆ ಸಭೆ

ವಾರ್ತಾಭಾರತಿವಾರ್ತಾಭಾರತಿ6 Oct 2020 6:34 PM IST
share
ಮಕ್ಕಳ ಸುರಕ್ಷತೆ, ಆರೋಗ್ಯದ ದೃಷ್ಟಿಯಿಂದ ತೀರ್ಮಾನ: ಸಚಿವ ಶ್ರೀರಾಮುಲು

ಬೆಂಗಳೂರು, ಅ.6: ಕೇಂದ್ರ ಸರಕಾರವು ಶಾಲೆಗಳನ್ನು ತೆರೆಯಲು ಸೆ.30ರಂದು ಆದೇಶ ಹೊರಡಿಸಿದೆ. ಇದರ ಪ್ರಕಾರ ಅ.15ರಿಂದ ಶಾಲಾ-ಕಾಲೇಜುಗಳನ್ನು ತೆರೆಯಲು ರಾಜ್ಯ ಸರಕಾರಗಳಿಗೆ ಅಧಿಕಾರ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವರು 3 ವಿಷಯಗಳ ಕುರಿತು ಆರೋಗ್ಯ ಇಲಾಖೆಯ ಸಲಹೆ-ಸೂಚನೆಗಳನ್ನು ಕೇಳಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ತಿಳಿಸಿದರು.

ಮಂಗಳವಾರ ನಗರದ ಅರಮನೆ ರಸ್ತೆಯಲ್ಲಿರುವ ಔಷಧ ನಿಯಂತ್ರಕರ ಕಚೇರಿಯಲ್ಲಿ ಶಿಕ್ಷಣ ಸಚಿವರು, ಅಧಿಕಾರಿಗಳು, ವೈದ್ಯರು ಮತ್ತು ತಜ್ಞರ ಜತೆ ವರ್ಚುವಲ್ ಸಭೆ ನಡೆಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ರಾಜ್ಯದಲ್ಲಿ ಎಲ್‍ಕೆಜಿ-ಪಿಯುಸಿ ತನಕ ಯಾವಾಗ ತರಗತಿಗಳನ್ನು ಪ್ರಾರಂಭಿಸಬಹುದು, ಒಂದು ವೇಳೆ ಶಾಲೆ ಆರಂಭ ಮಾಡಿದಲ್ಲಿ ಯಾವ ತರಗತಿಗಳನ್ನು ನಾವು ಮೊದಲು ಪ್ರಾರಂಭಿಸಬಹುದು ಹಾಗೂ ಸಮುದಾಯ ಜನಪ್ರತಿನಿಧಿಗಳಿಂದ ಯಾವ ರೀತಿಯಿಂದ ಸಹಕಾರ ನಿರೀಕ್ಷಿಸಬಹುದು ಎಂದು ಶಿಕ್ಷಣ ಇಲಾಖೆ ಸಲಹೆ ಕೇಳಿದೆ ಎಂದು ಅವರು ಹೇಳಿದರು.

ಒಂದೆಡೆ ಕೋವಿಡ್ ಪ್ರಕರಣಗಳಲ್ಲಿ ಏರಿಕೆಯಾಗುತ್ತಿದೆ, ಮತ್ತೊಂದೆಡೆ ಮಕ್ಕಳ ಕುರಿತ ವಿಷಯ ಆಗಿರುವುದರಿಂದ ಇದು ತುಂಬಾ ಸೂಕ್ಷ್ಮ ವಿಷಯವಾಗಿದೆ. ಆದುದರಿಂದ, ಎಲ್ಲ ಆಯಾಮಗಳಲ್ಲಿ ಸಮಾಲೋಚನೆ ಮಾಡಲಾಗಿದೆ. ಸಾಧಕ-ಬಾಧಕ ಅಂಶಗಳನ್ನ ಚರ್ಚಿಸಿದ್ದೇವೆ. ತಜ್ಞರ ಜತೆ ಸಭೆ ಹಾಗೂ ವಿಸ್ತೃತ ಅಧ್ಯಯನದ ನಂತರ ನಮ್ಮ ಇಲಾಖೆ ಶಿಕ್ಷಣ ಇಲಾಖೆಗೆ ವಿಸ್ತೃತ ವರದಿ ಸಲ್ಲಿಸಲಿದೆ ಎಂದು ಶ್ರೀರಾಮುಲು ತಿಳಿಸಿದರು.

ಅಲ್ಲದೆ, ಮಕ್ಕಳ-ಪೋಷಕರ-ಶಿಕ್ಷಕರ ಸುರಕ್ಷತೆ, ಆರೋಗ್ಯ ನಮ್ಮ ಸರಕಾರದ ಆದ್ಯತೆ. ಈ ವಿಷಯದಲ್ಲಿ ಯಾವುದೆ ರಾಜಿ ಇಲ್ಲ. ಯಾವುದೆ ನಿರ್ಧಾರ ಕೈಗೊಂಡರು ಮಕ್ಕಳ ಸುರಕ್ಷತೆ, ಆರೋಗ್ಯದ ದೃಷ್ಟಿಯಲ್ಲಿ ನಿರ್ಧಾರ ಕೈಗೊಳ್ಳಲಾಗುವುದು. ಮಕ್ಕಳ ಸುರಕ್ಷತೆ, ಆರೋಗ್ಯ ಮತ್ತು ಶಿಕ್ಷಣ ಎರಡನ್ನು ಮನಸ್ಸಿನಲ್ಲಿಟ್ಟುಕೊಂಡು ನಿಧಾರ ಮಾಡುತ್ತೇವೆ ಎಂದು ಶ್ರೀರಾಮುಲು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X