ಪುತ್ತೂರು: ಶಾಸಕರಿಂದ ಹಕ್ಕು ಪತ್ರ ವಿತರಣೆ

ಪುತ್ತೂರು : ತಾಲೂಕು ಮತ್ತು ನಗರಸಭಾ ವ್ಯಾಪ್ತಿಯ 94ಸಿ ಮತ್ತು 94 ಸಿಸಿ ನಿಯಮದಡಿ ಅರ್ಜಿ ಸಲ್ಲಿಸಿದ 201 ಫಲಾನುಭವಿಗಳಿಗೆ ಶಾಸಕ ಸಂಜೀವ ಮಠಂದೂರು ಅವರು ಪುತ್ತೂರು ಪುರಭವನದಲ್ಲಿ ಹಕ್ಕು ಪತ್ರವನ್ನು ವಿತರಿಸಿದರು.
ಪುತ್ತೂರು ತಾಲೂಕಿನಲ್ಲಿ 94 ಸಿ ಮತ್ತು 94 ಸಿಸಿ ಅಡಿ 2596 ಮಂದಿ ಅರ್ಜಿ ಸಲ್ಲಿಸಿದ್ದಾರೆ. ಇವರ ಪೈಕಿ 1306 ಮಂದಿಗೆ ಈಗಾಗಲೇ ಹಕ್ಕುಪತ್ರ ವಿತರಿಸಲಾಗಿದೆ. ಉಳಿದ ಅರ್ಜಿದಾರರಿಗೆ ಇನ್ನು 2 ತಿಂಗಳೊಳಗಾಗಿ ಹಕ್ಕುಪತ್ರ ನೀಡುವ ವ್ಯವಸ್ಥೆ ಮಾಡಲಾಗುವುದು. ಅರ್ಜಿದಾರರು ಯಾವುದೇ ತೊಂದರೆಗಳಿದ್ದಲ್ಲಿ ನೇರವಾಗಿ ತನ್ನನ್ನು ಸಂಪರ್ಕಿಸುವಂತೆ ಈ ಸಂದರ್ಭದಲ್ಲಿ ಶಾಸಕರು ಮನವಿ ಮಾಡಿದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಸದಸ್ಯರಾದ ಹರೀಶ್ ಬಿಜತ್ರೆ, ಮೀನಾಕ್ಷಿ ಮಂಜುನಾಥ, ದಿವ್ಯಾ ಪುರುಷೋತ್ತಮ ಉಪಸ್ಥಿತರಿದ್ದರು. ವೇದಿಕೆಯಲ್ಲಿ ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಸದಸ್ಯೆ ಮೀನಾಕ್ಷಿ ಮಂಜುನಾಥ, ದಿವ್ಯಾ ಪುರುಷೋತ್ತಮ ಉಪಸ್ಥಿತರಿದ್ದರು.
Next Story





