Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅ.7ರಿಂದ ಸಾಗರ ಕವಚ ಅಣುಕು ಕಾರ್ಯಾಚರಣೆ

ಅ.7ರಿಂದ ಸಾಗರ ಕವಚ ಅಣುಕು ಕಾರ್ಯಾಚರಣೆ

ವಾರ್ತಾಭಾರತಿವಾರ್ತಾಭಾರತಿ6 Oct 2020 8:36 PM IST
share

ಉಡುಪಿ, ಅ.6: ಭಯೋತ್ಪಾದಕ ದಾಳಿಗಳನ್ನು ಹಾಗೂ ಇತರ ವಿದ್ವಂಸಕ ಕೃತ್ಯಗಳನ್ನು ತಡೆಗಟ್ಟಲು ಯಾವ ರೀತಿ ಮುಂಜಾಗೃತ ಕ್ರಮಗಳನ್ನು ಅನುಸರಿ ಸಬೇಕು ಮತ್ತು ಭದ್ರತಾ ದೃಷ್ಟಿಯಿಂದ ಪ್ರಸ್ತುತ ರಕ್ಷಣಾ ಕ್ರಮಗಳು ಮತ್ತು ಸಿದ್ಧತೆಗಳು ಎಷ್ಟು ಸಮರ್ಥವಾಗಿವೆ ಎಂಬುದನ್ನು ಸ್ವಯಂ ಮೌಲ್ಯಮಾಪನ ಮಾಡಿಕೊಳ್ಳುವ ಉದ್ದೇಶದಿಂದ ಜಿಲ್ಲಾಡಳಿತ, ಕರಾವಳಿ ಕಾವಲು ಪಡೆ, ಪೋಲಿಸ್ ಇಲಾಖೆಗಳ ಸಹಭಾಗಿತ್ವದಲ್ಲಿ ಜಿಲ್ಲೆಯಾದ್ಯಂತ ಸಾಗರ ಕವಚ ಅಣುಕು ಪ್ರದರ್ಶನದ ಕಾರ್ಯಾಚರಣೆಯನ್ನು ಅ.7 ಮತ್ತು 8ರಂದು ಜಿಲ್ಲೆಯಲ್ಲಿ ಆಯೋಜಿಸಲಾಗಿದೆ.

ರಕ್ಷಣಾ ಸಾಮರ್ಥ್ಯವನ್ನು ಸನ್ನದ್ಧಗೊಳಿಸುವುದು ಮತ್ತು ವಿವಿಧ ಇಲಾಖೆಗಳು ಮತ್ತು ಸಂಸ್ಥೆಗಳ ನಡುನ ಸಾಮರಸ್ಯವನ್ನು ವೃದ್ಧಿಸಲು ಹಾಗೂ ಪ್ರಸ್ತುತ ಇರುವ ಸಾಮರ್ಥ್ಯವನ್ನು ಉನ್ನತೀಕರಣಗೊಳಿಸುವ ಉದ್ದೇಶದಿಂದ ಸಾಗರ ಕವಚ ಪ್ರಯೋಗವನ್ನು ಪ್ರತಿವರ್ಷ ನಡೆಸಲಾಗುತ್ತಿದ್ದು, ಇದು ಕೇವಲ ಅಣುಕು ಕಾರ್ಯಾಚರಣೆಯಾಗಿರುತ್ತದೆ.

ಈ ಅಣುಕು ಪ್ರದರ್ಶನವನ್ನು ಸಾರ್ವಜನಿಕ ಸ್ಥಳಗಳಾದ ಪ್ರಾರ್ಥನಾ ಮಂದಿರ, ಪ್ರತಿಷ್ಠಿತ ಶಾಲೆ/ಕಾಲೇಜ್‌ಗಳಲ್ಲಿ, ರೈಲು ನಿಲ್ಡಾಣ, ಬಸ್ ನಿಲ್ಡಾಣ, ಬೀಚ್, ಬಂದರು, ಶಾಪಿಂಗ್ ಕಾಂಪ್ಲೆಕ್ಸ್, ಕಡಲ ಕಿನಾರೆಗಳಲ್ಲಿ, ರಸ್ತೆಗಳಲ್ಲಿ ಇತರೆ ಪ್ರಮುಖ ಸ್ಥಳಗಳಲ್ಲಿ ನಡೆಸಲಾಗುವುದು.

ಈ ಸಂದರ್ಭದಲ್ಲಿ ಪೊಲೀಸ್ ಇಲಾಖೆ, ಸಾರ್ವಜನಿಕರನ್ನು ಹಾಗೂ ವಾಹನಗಳನ್ನು ತಪಾಸಣೆ ನಡೆಸಲಿದ್ದು, ಸಾರ್ವಜನಿಕರು ಸಹಕಾರ ನೀಡು ವಂತೆ ಹಾಗೂ ಅಪರಿಚಿತ ಗುರುತು ಪರಿಚಯ ಇಲ್ಲದ ಸಂಶಯಾಸ್ಪದ ವ್ಯಕ್ತಿಗಳ ಹಾಗೂ ಸಂಶಯಾಸ್ಪದ ವಸ್ತುಗಳು ಸ್ಥಳದಲ್ಲಿ ದೊರತಲ್ಲಿ ಯಾವುದೇ ರೀತಿ ಭಯಬೀತರಾಗದೆ ಸಮೀಪದ ಪೊಲೀಸ್ ಠಾಣೆ ಅಥವಾ ಉಡುಪಿ ಪೊಲೀಸ್ ಅಧೀಕ್ಷಕರ ಕಚೇರಿ (ದೂರವಾಣಿ-100), ಉಡುಪಿ ಕರಾವಳಿ ಕಾವಲು ಪಡೆಯ ಪೊಲೀಸ್ ಅಧೀಕ್ಷಕರು (ದೂರವಾಣಿ-1093), ಉಡುಪಿ ಜಿಲ್ಲಾಧಿಕಾರಿಗಳ ಕಚೇರಿ (ದೂರವಾಣಿ-1077/2574802) ಕಂಟ್ರೋಲ್ ರೂಮ್‌ಗೆ ಮಾಹಿತಿಯನ್ನು ನೀಡಿ ಸಾಗರ ಕವಚ ಅಣುಕು ಪ್ರದರ್ಶನದ ಕಾರ್ಯಾಚರಣೆಯನ್ನು ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X